ಭಾರತದ ಗೆಲುವಿಗೆ ಪ್ರಾರ್ಥಿಸಿದ ಮೊಹಮ್ಮದ್ ಶಮಿ ಹಳ್ಳಿಯ ಜನರು: ವಿಡಿಯೋ
ಉತ್ತರ ಪ್ರದೇಶ: ವಿಶ್ವಕಪ್ ಕ್ರಿಕೆಟ್ ಫೈನಲ್ಗೆ ಕ್ಷಣಗಣನೆ ಪ್ರಾರಂಭವಾಗಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಇಂದಿನ ಪಂದ್ಯದಲ್ಲಿ ಟೀಂ ಇಂಡಿಯಾ ಜಯ ಗಳಿಸಲಿ ಎಂದು ಉತ್ತರ ಪ್ರದೇಶದ ಅಮ್ರೋಹಾದಲ್ಲಿರುವ ವೇಗದ ಬೌಲರ್ ಮೊಹಮ್ಮದ್ ಶಮಿ ಅವರ ಹಳ್ಳಿಯಲ್ಲಿ ಗ್ರಾಮಸ್ಥರು ಪ್ರಾರ್ಥನೆ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಸ್ಥಳೀಯರೊಬ್ಬರು, "ಇಂದಿನ ಪಂದ್ಯದಲ್ಲಿ ಬ್ಯಾಟರ್‌ಗಳು ಮತ್ತು ಬೌಲರ್‌ಗಳು ಉತ್ತಮ ಪ್ರದರ್ಶನ ನೀಡಲಿ ಎಂದು ನಿವಾಸಿಗಳು ಪ್ರಾರ್ಥಿಸಿದರು. ನಮ್ಮ ಆಟಗಾರರು ಉತ್ತಮ ಪ್ರದರ್ಶನ ನೀಡಲಿ, ನಾವು ವಿಶ್ವಕಪ್ ಗೆಲ್ಲುತ್ತೇವೆ ಎಂಬ ನಂಬಿಕೆ ಇದೆ" ಅಂತಾ ಹೇಳಿದರು.
ಇದನ್ನೂ ಓದಿ: ಬೆನ್ನ ಹಿಂದೆ ಬಂಡೆಯಂತಿರುವ ಕೋಚ್ ದ್ರಾವಿಡ್ಗಾಗಿ ಕಪ್ ಗೆಲ್ಲುತ್ತೇವೆ : ರೋಹಿತ್ ಶರ್ಮಾ
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಶಮಿ, ಕಿವೀಸ್ ವಿರುದ್ಧ ದಾಖಲೆಯ 7 ವಿಕೆಟ್‌ಗಳನ್ನು ಕಬಳಿಸುವ ಮೂಲಕ ಅದ್ಭುತ ಪ್ರದರ್ಶನ ನೀಡಿದ್ದರು.
ಇದನ್ನೂ ಓದಿ: ನಾವು ಇಂದು ವಿಶ್ವಕಪ್ ಎತ್ತಿ ಹಿಡಿಯುವ ಭರವಸೆ ಇದೆ : ಸಚಿನ್ ತೆಂಡೂಲ್ಕರ್