ಅಲೆಗಳ ಅಬ್ಬರಕ್ಕೆ ಮಗುಚಿಬಿದ್ದ ದೋಣಿ.. ವಿಡಿಯೋ ವೈರಲ್

By

Published : Jul 2, 2020, 8:05 AM IST

thumbnail

ಉಡುಪಿ ಜಿಲ್ಲೆಯ ಉಪ್ಪುಂದದ ಮಡಿಕಲ್ ಭಾಗದಲ್ಲಿ ಕೆಲ ದಿನಗಳ ಹಿಂದೆ ಮೀನುಗಾರಿಕೆಗೆ ತೆರಳಿದ ದೋಣಿಯೊಂದು ಕಡಲ ಅಲೆಗಳ ಅಬ್ಬರಕ್ಕೆ ಸಿಲುಕಿ ಮಗುಚಿಬಿದ್ದ ಘಟನೆ ನಡೆದಿದೆ. ಅದರ ವಿಡಿಯೋ ಈಗ ಭಾರಿ ವೈರಲ್ ಆಗಿದೆ. ಯಾಂತ್ರೀಕೃತ ಮೀನುಗಾರಿಕೆಗೆ ನಿಷೇಧ ಇದ್ದು, ಸಾಂಪ್ರದಾಯಿಕ ನಾಡದೋಣಿಗಳಲ್ಲಿ ಮೀನುಗಾರರು ಮೀನುಗಾರಿಕೆ ನಡೆಸುತ್ತಾರೆ. ಹೀಗೆ ದೋಣಿಯಲ್ಲಿ ಮೀನುಗಾರಿಕೆಗೆ ದಡದಿಂದ ಕಡಲಿಗೆ ಇಳಿದ ಕೆಲವೇ ಕ್ಷಣಗಳಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿದ ದೋಣಿ ಮಗುಚಿ ಬಿದ್ದಿತ್ತು. ದೋಣಿಯಲ್ಲಿ ಆರು ಜನರಿದ್ದು ಅವರೆಲ್ಲಾ ಘಟನೆಯ ಮುನ್ಸೂಚನೆಯನ್ನು ಅರಿತುಕೊಂಡು ಸಮುದ್ರಕ್ಕೆ ಹಾರಿ ಈಜಿ ದಡ ಸೇರಿದ್ದಾರೆ. ಈ ದೃಶ್ಯವನ್ನು ದಡದಲ್ಲಿದ್ದವರು ತಮ್ಮ ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದು, ಸದ್ಯ ಈ ವಿಡಿಯೋ ವೈರಲ್ ಆಗಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.