ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಓರ್ವ ಮೃತ, ಮತ್ತೊಬ್ಬನಿಗೆ ಗಾಯ

By

Published : Sep 3, 2019, 11:02 PM IST

Updated : Sep 3, 2019, 11:10 PM IST

thumbnail

ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಚಾಲಕ ಜೀವನ್ ಕುಮಾರ್ (32) ಎಂಬವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಕಾರಿನಲ್ಲಿದ್ದ ಸುನೀಲ್​ ತೀವ್ರಗಾಯಗೊಂಡಿದ್ದಾರೆ. ಜಿಲ್ಲೆಯ ಚಿಂತಾಮಣಿ ತಾಲೂಕಿನ ಹೊರವಲಯದಲ್ಲಿಈ ಘಟನೆ ನಡೆದಿದೆ. ಅಪಘಾತದಲ್ಲಿ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಗಾಯಾಳು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಂತಾಮಣಿ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ‌.

Last Updated : Sep 3, 2019, 11:10 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.