ಜಾರಕಿಹೊಳಿ ಅವಾಚ್ಯ ಶಬ್ಧ ಬಳಕೆ ಖಂಡಿಸಿ ಕಲಬುರಗಿಯಲ್ಲಿ ಕೈ ಕಾರ್ಯಕರ್ತರ ಪ್ರತಿಭಟನೆ
ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಅವಾಚ್ಯ ಶಬ್ದ ಬಳಸಿರುವುದನ್ನು ಖಂಡಿಸಿ ಹಾಗೂ ಜಾರಕಿಹೊಳಿ ಬಂಧನಕ್ಕೆ ಒತ್ತಾಯಿಸಿ ಡಿಕೆಶಿ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಿದರು.