ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬೆಂಕಿ: ವಿಡಿಯೋ

By

Published : Mar 3, 2021, 9:51 PM IST

thumbnail

ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅರಣ್ಯ ಇಲಾಖೆ ಬೆಂಕಿ ನಂದಿಸಿದೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಉದ್ಬುರ್ ಗೇಟ್ ಬಳಿಯ ಕಬಿನಿ ಪ್ರದೇಶದಲ್ಲಿ ಕಾಡಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು 25 ಎಕರೆ ಕಾಡು ಹೊತ್ತಿ ಉರಿದಿದೆ. ಅರಣ್ಯ ಇಲಾಖೆಯ ಸ್ವಯಂ ಸೇವಕರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದು ಕಾಡ್ಗಿಚ್ಚೋ ಅಥವಾ ಯಾರೋ ಕಿಡಿಗೇಡಿಗಳು ಅರಣ್ಯಕ್ಕೆ ಬೆಂಕಿ ಹಾಕಿದ್ದಾರೋ ಎಂಬ ಶಂಕೆ ವ್ಯಕ್ತವಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.