ಅನುದಾನ ರಹಿತ ಖಾಸಗಿ ಕನ್ನಡ ಶಾಲೆಗಳನ್ನು ವೇತನಾನುದಾನಕ್ಕೆ ಒಳಪಡಿಸುವಂತೆ ಒತ್ತಾಯ
ಕಲಬುರಗಿ: ಶಿಕ್ಷಣ ಸಚಿವರು ಮಧ್ಯಸ್ಥಿಕೆ ವಹಿಸಿ ಅನುದಾನ ರಹಿತ ಖಾಸಗಿ ಕನ್ನಡ ಶಾಲೆಗಳನ್ನು ವೇತನಾನುದಾನಕ್ಕೆ ಒಳಪಡಿಸುವಂತೆ ಕಲ್ಯಾಣ ಕರ್ನಾಟಕ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಆಗ್ರಹಿಸಿದೆ. ಕಲಬುರಗಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಸುನೀಲ್ ಹುಡುಗಿ, ಹತ್ತಾರು ವರ್ಷಗಳಿಂದ ಸರ್ಕಾರ ಖಾಸಗಿ ಕನ್ನಡ ಶಾಲೆಗಳಿಗೆ ವೇತನಾನುದಾನ ನೀಡುತ್ತಿಲ್ಲ. 371 (ಜೆ) ಅಡಿಯೂ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಿಗೆ ಅನುದಾನ ನೀಡಿಲ್ಲ. ಈ ನಿಟ್ಟಿನಲ್ಲಿ ಮಧ್ಯಸ್ಥಿಕೆ ವಹಿಸುವಂತೆ ಶಿಕ್ಷಣ ಸಚಿವರಿಗೆ ಒತ್ತಾಯಿಸಿದರು. ಕೂಡೆಲೇ ಅನುದಾನ ರಹಿತ ಖಾಸಗಿ ಕನ್ನಡ ಶಾಲೆಗಳನ್ನು ವೇತನಾನುದಾನಕ್ಕೆ ಒಳಪಡಿಸಿ ಕೆಕೆಆರ್ಡಿಬಿಯಲ್ಲಿ ಬಳಕೆಯಾಗದೆ ಉಳಿದ ಹಣವನ್ನು ಶಿಕ್ಷಣಕ್ಕೆ ಬಳಸುವಂತೆ ಹಾಗೂ ಪ್ರತಿ ವರ್ಷ ಶಾಲೆಗಳನ್ನು ನವೀಕರಿಸಬೇಕೆಂಬ ನಿಯಮ ಕೈಬಿಡಲು ಆಗ್ರಹಿಸಿದ್ದಾರೆ.
TAGGED: