ಅಪ್ರಾಪ್ತೆ ಮೇಲಿನ ಅತ್ಯಾಚಾರ ಖಂಡಿಸಿ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ..
ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ ಯುವಕನಿಗೆ ಗಲ್ಲುಶಿಕ್ಷೆ ನೀಡಬೇಕು ಎಂದು ಆಗ್ರಹಿಸಿ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಕಡೋಲಿ ಗ್ರಾಮದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ ಸ್ಥಳೀಯರು, ಆರೋಪಿ ಸುನೀಲ ಬಾಳನಾಯಕ ವಿರುದ್ಧ ಉಗ್ರ ಶಿಕ್ಷೆಯ ಜತೆಗೆ ಆತನ ಪಾಲಕರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು. ಅತ್ಯಾಚಾರವಾದಾಗ ಸಮರ್ಪಕ ಚಿಕಿತ್ಸೆ ನೀಡದ ಜಿಲ್ಲಾಸ್ಪತ್ರೆ ವೈದ್ಯರ ವಿರುದ್ಧವೂ ಕಿಡಿಕಾರಿದ ಪ್ರತಿಭಟನಾಕಾರರು, ಜಿಲ್ಲಾಧಿಕಾರಿಗಳ ಮೂಲಕ ಸಿಎಂಗೆ ಮನವಿ ಪತ್ರ ಸಲ್ಲಿಸಿದರು.