ರೋಡ್ ರೋಮಿಯೋಗೆ ಚಪ್ಪಲಿ ಏಟು.. ನಡುರಸ್ತೆಯಲ್ಲೇ ಥಳಿಸಿದ ಮಹಿಳೆ!

By

Published : Jul 27, 2022, 8:11 PM IST

thumbnail
()

ಸೂರತ್​(ಗುಜರಾತ್​): ಮಹಿಳೆಯರನ್ನ ಹಿಂಬಾಲಿಸಿ ಕಿರುಕುಳ ನೀಡ್ತಿದ್ದ ರೋಡ್​ ರೋಮಿಯೋಗೆ ನಡುರಸ್ತೆಯಲ್ಲೇ ಥಳಿಸಿರುವ ಘಟನೆ ನಡೆದಿದೆ. ಗುಜರಾತ್​​​​​​​ನ ಸೂರತ್​​ನ ಗೋದಾದಾರ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಮಹಿಳೆಯೊಬ್ಬಳು ಚಪ್ಪಲಿಯಿಂದ ಥಳಿಸಿದ್ದಾರೆ. ಇದರ ವಿಡಿಯೋ ಸದ್ಯ ಸಿಕ್ಕಾಪಟ್ಟೆ ವೈರಲ್​ ಆಗಿದೆ. ಕಳೆದ ಕೆಲ ದಿನಗಳಿಂದ ಮಹಿಳೆಯರಿಗೆ ಕಿರುಕುಳ ನೀಡುವುದರ ಜೊತೆಗೆ ಅವರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದನಂತೆ. ಇದರಿಂದ ರೊಚ್ಚಿಗೆದ್ದ ಮಹಿಳೆಯೊಬ್ಬರು ನಡುರಸ್ತೆಯಲ್ಲೇ ಥಳಿಸಿದ್ದಾಳೆ. ಜೊತೆಗೆ ಆತನ ಕೊರಳಿಗೆ ಶೂ ಹಾಕಿದ್ದಾಳೆ. ವಿಡಿಯೋ ವೈರಲ್​ ಆಗುತ್ತಿದ್ದಂತೆ ಕಾರ್ಯಪ್ರವೃತ್ತರಾಗಿರುವ ಪೊಲೀಸರು ಆರೋಪಿಗೋಸ್ಕರ ಶೋಧಕಾರ್ಯ ಆರಂಭಿಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.