ಅಸ್ಸೋಂ ಮಹಾ ಪ್ರವಾಹ: ಸಿಎಂ ಹಿಮಂತ ಬಿಸ್ವಾ ಶರ್ಮಾ ಭೇಟಿ, ಪರಿಶೀಲನೆ

By

Published : Jun 26, 2022, 12:14 PM IST

thumbnail

ಅಸ್ಸಾಂ: ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಪ್ರವಾಹಪೀಡಿತ ಪ್ರದೇಶಗಳಾದ ಬರಾಕ್ ಕಣಿವೆ ಪ್ರದೇಶ ಹಾಗೂ ಸಿಲ್ಚಾರ್‌ಗೆ​ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಜನರ ಕುಂದುಕೊರತೆಗಳನ್ನು ಆಲಿಸಿದರು. ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ವರದಿಗಳ ಪ್ರಕಾರ, ರಾಜ್ಯದ ಮೊರಿಗಾಂವ್ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿಯು ಕ್ರಮೇಣ ಕಡಿಮೆಯಾಗುತ್ತಿದ್ದು, ಪ್ರವಾಹದ ನೀರು ಇಳಿಮುಖವಾಗುತ್ತಿದೆ ಎನ್ನಲಾಗ್ತಿದೆ. ರಾಜ್ಯದಲ್ಲಿನ ಈವರೆಗೆ ಪ್ರವಾಹ ಹಾಗೂ ಭೂಕುಸಿತದಂಥ ದುರಂತಗಳಲ್ಲಿ ಮೃತಪಟ್ಟವರ ಸಂಖ್ಯೆ 118ಕ್ಕೆ ಏರಿಕೆಯಾಗಿದೆ. 45.34 ಲಕ್ಷ ಮಂದಿ ಸಂತ್ರಸ್ತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.