ಚಾಲಕನ ಅಜಾಗರೂಕತೆಯಿಂದ ಟೋಲ್​ಗೆ ಅಪ್ಪಳಿಸಿದ ಬಸ್, ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

By

Published : Aug 29, 2022, 6:58 AM IST

thumbnail

ದಾವಣಗೆರೆ: ಚಾಲಕನ ಅಜಾಗರೂಕತೆಯಿಂದ ಖಾಸಗಿ ಬಸ್​ ಟೋಲ್ ಗೇಟ್​ಗೆ ಡಿಕ್ಕಿ ಹೊಡೆದಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಕಾನಕಟ್ಟೆ ಗ್ರಾಮದ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ನಡೆದಿದೆ. ರಭಸವಾಗಿ ಬಂದ ಖಾಸಗಿ ಬಸ್‌ ಟೋಲ್​ನಲ್ಲಿ ಹಣ ಕಟ್ಟಿಸಿಕೊಳ್ಳುವ ಕೊಠಡಿಗೆ ಬಂದು ಡಿಕ್ಕಿ ಹೊಡೆದ ಪರಿಣಾಮ ಬಸ್​ನ ಮುಂಭಾಗದ ಗಾಜು ಚೂರು ಚೂರಾಗಿದೆ. ಇನ್ನು ಈ ಭೀಕರ ಅಪಘಾತದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇನ್ನು ಟೋಲ್​ನಲ್ಲಿ ಹಣ ಕಟ್ಟಿಸಿಕೊಳ್ಳುವ ಸಿಬ್ಬಂದಿ ಕೂಡ ಭಯದಿಂದ ಹಾರಿ ಬಿದ್ದಿರುವ ದೃಶ್ಯ ಕೂಡ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.