ಮರಕ್ಕೆ ಡಿಕ್ಕಿ ಹೊಡೆದು, ಹೊತ್ತಿ ಉರಿದ ಕಾರು; ಡ್ರೈವರ್​ ಸಜೀವ ಸಮಾಧಿ

By

Published : Jun 3, 2022, 9:22 AM IST

thumbnail

ಬೇತುಲ್​​(ಮಧ್ಯಪ್ರದೇಶ): ಘೋರಾಡೋಂಗ್ರಿಯಿಂದ ಬೇತುಲ್​​​ ಕಡೆಗೆ ಪ್ರಯಾಣ ಬೆಳೆಸುತ್ತಿದ್ದ ಕಾರ್​​​ವೊಂದು ಮರಕ್ಕೆ ಡಿಕ್ಕಿ ಹೊಡೆದು, ಹೊತ್ತಿ ಉರಿದಿದ್ದು, ಡ್ರೈವರ್​ ಜೀವಂತ ಸಮಾಧಿಯಾಗಿದ್ದಾನೆಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮಧ್ಯಪ್ರದೇಶದ ಬೇತುಲ್ ಜಿಲ್ಲೆಯ ರಾಣಿಪುರ ಪೊಲೀಸ್ ಠಾಣೆ ವ್ಯಾಪ್ತಿಯ ಖಮಲ್ಪುರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗುರುವಾರ ರಾತ್ರಿ ಈ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ತಲುಪಿ, ಬೆಂಕಿ ನಂದಿಸುವ ಕಾರ್ಯ ನಡೆಸಿತು. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲು ಮಾಡಿಕೊಂಡು, ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಟೋಲ್ ಬ್ಲಾಕ್​​ನಲ್ಲಿ ಅಳವಡಿಕೆ ಮಾಡಲಾಗಿರುವ ಸಿಸಿಟಿವಿ ದೃಶ್ಯಾವಳಿ ವೀಕ್ಷಣೆ ಮಾಡಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ರಾಣಿಪುರ ಪೊಲೀಸ್ ಠಾಣೆಯ ಉಸ್ತುವಾರಿ ಸರವಿಂದ್ ಧೂರ್ವೆ ತಿಳಿಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.