ಯುವಕನಿಗೆ ಲಾಂಗ್ ತೋರಿಸಿ ಹಣ, ಮೊಬೈಲ್‌ ಸುಲಿಗೆ: ಡಿ.ಜೆ.ಹಳ್ಳಿಯಲ್ಲಿ ನಡೆದ ಸಿಸಿಟಿವಿ ದೃಶ್ಯ

By

Published : Jul 19, 2022, 11:13 AM IST

thumbnail

ಬೆಂಗಳೂರು: ಬೈಕ್​​ನಲ್ಲಿ ಬಂದ ದುಷ್ಕರ್ಮಿಗಳು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕನಿಗೆ ಲಾಂಗ್ ತೋರಿಸಿ ಸುಲಿಗೆ ಮಾಡಿರುವ ಘಟನೆ ಡಿ.ಜೆ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಿನ್ನೆ (ಸೋಮವಾರ) ಬೆಳಗ್ಗೆ 6 ಗಂಟೆಯ ಸುಮಾರಿಗೆ ನಂದಗೋಕುಲ ಲೇಔಟ್​​ನಲ್ಲಿ‌ ಹೋಗುತ್ತಿದ್ದ ಯುವಕನನ್ನು ಅಡ್ಡಗಟ್ಟಿದ ಕಿಡಿಗೇಡಿಗಳು ಮೊಬೈಲ್ ಹಾಗೂ ಹಣ‌ ಕಸಿದು ಪರಾರಿಯಾಗಿದ್ದಾರೆ.‌ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಡಿ.ಜೆ.ಹಳ್ಳಿ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.