ETV Bharat / bharat

ಫ್ಯಾಮಿಲಿ ಕಾರ್ಯಕ್ರಮ ಮುಗಿಸಿ ಹಿಂತಿರುಗುವಾಗ ಎದುರಾದ ಯಮ: 13 ಜನ ಸಾವು, 11 ಜನರಿಗೆ ಗಾಯ - TRAILER TRUCK COLLISION

ಛತ್ತೀಸಗಡದ ರಾಯ್ಪುರದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ಕು ಮಕ್ಕಳು, ಒಂಬತ್ತು ಮಹಿಳೆಯರು ಸೇರಿ 13 ಜನರು ಸಾವನ್ನಪ್ಪಿದ್ದಾರೆ.

Accident
ಅಪಘಾತ ನಡೆದ ಸ್ಥಳ (ETV Bharat)
author img

By PTI

Published : May 12, 2025 at 6:10 AM IST

Updated : May 12, 2025 at 6:25 AM IST

1 Min Read

ರಾಯ್ಪುರ: ಛತ್ತೀಸ್‌ಗಢದ ರಾಯ್ಪುರದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಟ್ರೇಲರ್ ಟ್ರಕ್ ಮತ್ತು ಟ್ರಕ್ ನಡುವೆ ಡಿಕ್ಕಿ ಉಂಟಾದ ಪರಿಣಾಮ 13 ಜನರು ಸಾವನ್ನಪ್ಪಿದ್ದು, 11 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಯ್ಪುರ ಜಿಲ್ಲೆಯ ರಾಯ್ಪುರ-ಬಲೋದಬಜಾರ್ ರಸ್ತೆಯ ಸರಗಾಂವ್ ಬಳಿ ಭಾನುವಾರ ತಡರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾಲ್ಕು ಮಕ್ಕಳು ಮತ್ತು ಒಂಬತ್ತು ಮಹಿಳೆಯರು ಸಾವನ್ನಪ್ಪಿದ್ದಾರೆ.

ಕಾರ್ಯಕ್ರಮಕ್ಕೆ ತೆರಳಿದ್ದ ಕುಟುಂಬಸ್ಥರು: ಚಟೌಡ್ ಗ್ರಾಮದ ಕುಟುಂಬವೊಂದು ಕುಟುಂಬದ ಸಮಾರಂಭದಲ್ಲಿ ಭಾಗವಹಿಸಲು ಬನ್ಸಾರಿ ಗ್ರಾಮಕ್ಕೆ ತೆರಳಿತ್ತು. ಕಾರ್ಯಕ್ರಮ ಮುಗಿಸಿ ವಾಪಸ್ ತಡರಾತ್ರಿ ಟ್ರಕ್​​ನಲ್ಲಿ ಹಿಂತಿರುಗುವಾಗ ಖರೋರಾ ಪೊಲೀಸ್ ಠಾಣೆ ಪ್ರದೇಶದ ಸರಗಾಂವ್ ಬಳಿ ಟ್ರೇಲರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದ ಬಗ್ಗೆ ಮಾಹಿತಿ ಬಂದ ನಂತರ, ಪೊಲೀಸ್ ತಂಡವನ್ನು ಸ್ಥಳಕ್ಕೆ ಕಳುಹಿಸಲಾಯಿತು ಮತ್ತು ಗಾಯಾಳುಗಳನ್ನು ರಾಯ್ಪುರದ ಡಾ. ಭೀಮರಾವ್ ಅಂಬೇಡ್ಕರ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಜಿಲ್ಲಾಡಳಿತದ ಅಧಿಕಾರಿಗಳು ಸಹ ಸ್ಥಳಕ್ಕೆ ಆಗಮಸಿದ್ದಾರೆ ಎಂದು ರಾಯ್ಪುರ ಜಿಲ್ಲಾಧಿಕಾರಿ ಗೌರವ್ ಸಿಂಗ್ ಹೇಳಿದರು.

ಅಪಘಾತದಲ್ಲಿ 13 ಜನರು ಸಾವನ್ನಪ್ಪಿದ್ದಾರೆ ಮತ್ತು 11 ಜನರು ಗಾಯಗೊಂಡರು ಎಂದು ಡಿಸಿ ಮಾಹಿತಿ ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ಗುಡ್ಡದಿಂದ ಉರುಳಿ 100 ಮೀಟರ್ ಕಂದಕಕ್ಕೆ ಬಿದ್ದ ಬಸ್​: 15 ಮಂದಿ ದುರ್ಮರಣ

Last Updated : May 12, 2025 at 6:25 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.