ETV Bharat / bharat

ಟೇಕಾಫ್ ವೇಳೆ ಟಗ್ ಟ್ರಕ್‌ಗೆ ಏರ್​ ಇಂಡಿಯಾ ವಿಮಾನ ಡಿಕ್ಕಿ: ತಪ್ಪಿದ ಅನಾಹುತ, 180 ಪ್ರಯಾಣಿಕರು ಸೇಫ್ - flight collides with tug truck

author img

By ETV Bharat Karnataka Team

Published : May 17, 2024, 3:42 PM IST

ಏರ್ ಇಂಡಿಯಾ ವಿಮಾನವು ಟೇಕಾಫ್ ಆಗುವ ವೇಳೆ ಟಗ್ ಟ್ರಕ್‌ಗೆ ಡಿಕ್ಕಿ ಹೊಡೆದ ಘಟನೆ ಮಹಾರಾಷ್ಟ್ರದ ಪುಣೆ ವಿಮಾನ ನಿಲ್ದಾಣದಲ್ಲಿ ನಡೆದಿದೆ.

Representative image
ಸಾಂದರ್ಭಿಕ ಚಿತ್ರ (Etv Bharat)

ಪುಣೆ (ಮಹಾರಾಷ್ಟ್ರ): ಮಹಾರಾಷ್ಟ್ರದ ಪುಣೆ ವಿಮಾನ ನಿಲ್ದಾಣದಲ್ಲಿ ಭಾರಿ ಅನಾಹುತವೊಂದು ತಪ್ಪಿದೆ. ಏರ್ ಇಂಡಿಯಾ ವಿಮಾನವು ಟೇಕಾಫ್ ಆಗುವ ವೇಳೆ ಟಗ್ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಈ ಘಟನೆ ವೇಳೆ ವಿಮಾನದಲ್ಲಿ ಸುಮಾರು 180 ಪ್ರಯಾಣಿಕರಿದ್ದು, ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ.

ಪುಣೆಯಿಂದ ಏರ್​ ಇಂಡಿಯಾ ವಿಮಾನವು ಗುರುವಾರ ದೆಹಲಿಗೆ ಟೇಕಾಫ್ ಆಗುತ್ತಿತ್ತು. ಈ ವೇಳೆ, ವಿಮಾನದಲ್ಲಿ ಅಂದಾಜು 180 ಪ್ರಯಾಣಿಕರಿದ್ದರು. ಟಗ್ ಟ್ರಕ್​ಗೆ ಡಿಕ್ಕಿ ಹೊಡೆದಿದೆ. ಇದರಿಂದ ವಿಮಾನದ ಮುಂದಿನ ತುದಿ ಮತ್ತು ಲ್ಯಾಂಡಿಂಗ್ ಗೇರ್ ಬಳಿ ಟೈರ್‌ಗೆ ಹಾನಿಯಾಗಿದೆ. ಈ ಡಿಕ್ಕಿಯ ಹೊರತಾಗಿಯೂ, ವಿಮಾನದಲ್ಲಿದ್ದ ಎಲ್ಲ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂಬುವುದಾಗಿ ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ಎಂದು ಸುದ್ದಿ ಸಂಸ್ಥೆ ಎಎನ್​ಐ ವರದಿ ಮಾಡಿದೆ.

ವಿಮಾನ ನಿಲ್ದಾಣದ ಅಧಿಕಾರಿಗಳು ಘಟನೆಯನ್ನು ದೃಢಪಡಿಸಿದ್ದಾರೆ. ಈ ಘಟನೆ ಪ್ರತಿಯೊಬ್ಬರ ಸುರಕ್ಷತೆಯನ್ನು ಖಾತ್ರಿಪಡಿಸಿಕೊಳ್ಳಲಾಯಿತು. ವಿಮಾನದಿಂದ ಪ್ರಯಾಣಿಕರನ್ನು ತಕ್ಷಣವೇ ಕೆಳಗಿಳಿಸಲಾಯಿತು. ಬಳಿಕ ದೆಹಲಿಗೆ ಪರ್ಯಾಯ ವಿಮಾನದ ವ್ಯವಸ್ಥೆ ಮಾಡಲಾಯಿತು ಎಂದು ಅಧಿಕಾರಿಯ ಮಾಹಿತಿ ನೀಡಿದ್ದಾರೆ.

ಮತ್ತೊಂದೆಡೆ, ಈ ಡಿಕ್ಕಿಗೆ ಕಾರಣ ತಿಳಿಯಲು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯವು ತನಿಖೆಗೆ ಆದೇಶಿಸಿದೆ. ಟ್ಯಾಕ್ಸಿ ಪ್ರಕ್ರಿಯೆಯಲ್ಲಿ ವೇಳೆ ಟಗ್ ಟ್ರಕ್​ ವಿಮಾನಕ್ಕೆ ಅಪ್ಪಳಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಉಳಿದಂತೆ ವಿಮಾನ ನಿಲ್ದಾಣದ ಕಾರ್ಯಾಚರಣೆಗಳು ಅಡೆತಡೆಗಳಿಲ್ಲದೇ ಮುಂದುವರೆದಿದೆ. ಆದರೂ, ಡಿಕ್ಕಿಯಾದ ವಿಮಾನವನ್ನು ಪರಿಶೀಲನೆ ಮತ್ತು ದುರಸ್ತಿಗಾಗಿ ಸ್ವಲ್ಪ ಸಮಯದವರೆಗೆ ಸೇವೆಯಿಂದ ದೂರ ಇರಿಸಲಾಗಿದೆ. ಈಗ ಆ ವಿಮಾನ ಕಾರ್ಯಾಚರಣೆಗೆ ಸಿದ್ಧವಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ವರದಿಗಳು ತಿಳಿಸಿವೆ.

ಇದನ್ನೂ ಓದಿ: ಏರ್​ ಇಂಡಿಯಾ ವಿರುದ್ಧ ಪ್ರತಿಭಟನೆಗೆ ಮುಂದಾದ ವಿಧವೆ ಕುಟುಂಬ; ಕಾರಣ ಇದು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.