ETV Bharat / bharat

ಬೊಲೆರೊ - ಜೀಪ್ ನಡುವೆ ಭೀಕರ ಅಪಘಾತ; ನಾಲ್ವರು ಸಾವು - Road Accident

author img

By ETV Bharat Karnataka Team

Published : May 16, 2024, 8:34 PM IST

ರಾಜಸ್ಥಾನದ ಜೈಪುರದಲ್ಲಿ ಬೊಲೆರೊ ಮತ್ತು ಜೀಪ್ ನಡುವೆ ಅಪಘಾತ ಸಂಭವಿಸಿ ನಾಲ್ವರು ಸಾವನ್ನಪ್ಪಿದ್ದಾರೆ.

Vehicles crushed in an accident in Jaipur.
ಜೈಪುರದಲ್ಲಿ ನಡೆದ ಅಪಘಾತದಲ್ಲಿ ವಾಹನಗಳು ನಜ್ಜುಗುಜ್ಜಾಗಿವೆ. (ETV Bharat)

ಜೈಪುರ (ರಾಜಸ್ಥಾನ): ಬೊಲೆರೊ ಮತ್ತು ಜೀಪ್ ನಡುವೆ ಭೀಕರ ಡಿಕ್ಕಿ ಸಂಭವಿಸಿ ನಾಲ್ವರು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ. ಇನ್ನೂ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಲ್ಲಿನ ಆಂಧಿ ಪೊಲೀಸ್ ಠಾಣೆ ವ್ಯಾಪ್ತಿಯ ದಂಗರವಾಡ ಬಳಿಯ ಮನೋಹರಪುರ - ದೌಸಾ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಮೃತರನ್ನು ದೌಸಾ ನಿವಾಸಿಗಳು ಎಂದು ಗುರುತಿಸಲಾಗಿದೆ. ಮತ್ತೊಂದೆಡೆ, ಜೀಪಿನಲ್ಲಿ ಪ್ರಯಾಣಿಸುತ್ತಿದ್ದವರು ಉತ್ತರ ಪ್ರದೇಶದ ನಿವಾಸಿಗಳು ಎಂದು ತಿಳಿದು ಬಂದಿದೆ. ಈ ಘಟನೆ ಮಾಹಿತಿ ಪಡೆದ ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

ಹೆದ್ದಾರಿಯ ತಿರುವಿನಲ್ಲಿ ವೇಗವಾಗಿ ಬಂದ ಜೀಪ್ ಬೊಲೆರೊಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಎರಡೂ ವಾಹನಗಳು ನಜ್ಜುಗುಜ್ಜಾಗಿವೆ. ಅಲ್ಲದೇ, ಡಿಕ್ಕಿಯ ರಭಸಕ್ಕೆ ನಾಲ್ವರು ಸಾವನ್ನಪ್ಪಿದ್ದು, 6 ಮಂದಿ ಗಾಯಗೊಂಡಿದ್ದಾರೆ. ಇದರಲ್ಲಿ ಮೂವರು ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ. ಇವರನ್ನು ಜೈಪುರದ ರವಾನಿಸಲಾಗಿದೆ. ಮೃತ ದೇಹಗಳನ್ನು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹಗಳನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗುವುದು ಎಂದು ಜಾಮ್ವರಾಮ್‌ಗಢದ ಡಿಎಸ್​ಪಿ ಪ್ರದೀಪ್ ಗೋಯಲ್ ಮಾಹಿತಿ ನೀಡಿದ್ದಾರೆ.

ಈ ಅಪಘಾತದ ಬಳಿಕ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ. ಜಖಂಗೊಂಡಿದ್ದ ವಾಹನಗಳನ್ನು ಕ್ರೇನ್ ಸಹಾಯದಿಂದ ತೆರವುಗೊಳಿಸಲಾಗಿದೆ. ಇತರ ವಾಹನಗಳ ಸಂಚಾರ ಸುಗಮಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಧ್ಯ ಪ್ರದೇಶ, ಒಡಿಶಾ, ತಮಿಳುನಾಡಿನಲ್ಲಿ ಪ್ರತ್ಯೇಕ ರಸ್ತೆ ಅಪಘಾತ; 18 ಮಂದಿ ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.