ETV Bharat / bharat

ಚೆನ್ನೈ ಎನ್​ಐಎ ಕಚೇರಿಗೆ ಕರೆ ಮಾಡಿ ಪ್ರಧಾನಿ ಮೋದಿಗೆ ಜೀವ ಬೆದರಿಕೆ: ಸೈಬರ್​ ಪೊಲೀಸರಿಂದ ತನಿಖೆ - Threat Call To Modi

author img

By ETV Bharat Karnataka Team

Published : May 23, 2024, 11:10 AM IST

ಚೆನ್ನೈನಲ್ಲಿನ ಎನ್​ಐಎ ಕಚೇರಿಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ಪ್ರಧಾನಿ ಮೋದಿ ಅವರಿಗೆ ಜೀವ ಬೆದರಿಕೆ ಹಾಕಿದ್ದಾನೆ.

ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ (ETV Bharat)

ಚೆನ್ನೈ: ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿರುವ ರಾಷ್ಟ್ರೀಯ ತನಿಖಾ ಸಂಸ್ಥೆಯ(ಎನ್‌ಐಎ) ಕಚೇರಿಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಈ ಘಟನೆಯನ್ನು ಪೊಲೀಸರು ಖಚಿತಪಡಿಸಿದ್ದಾರೆ.

ಅಪರಿಚಿತ ವ್ಯಕ್ತಿ ಇಂದು ಬೆಳಿಗ್ಗೆ ಪುರಸೈವಾಕಂನಲ್ಲಿ ಕಾರ್ಯನಿರ್ವಹಿಸುತ್ತಿರುವ ಎನ್‌ಐಎ ಕಚೇರಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಹಿಂದಿ ಭಾಷೆಯಲ್ಲಿ ಮಾತನಾಡುತ್ತಾ, ಮೋದಿ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ. ಈ ಬಗ್ಗೆ ಸಂಸ್ಥೆಯ ಅಧಿಕಾರಿಗಳು ಚೆನ್ನೈ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ತನಿಖೆ ಕೈಗೊಂಡಿರುವ ಸೈಬರ್​ ಅಪರಾಧ ವಿಭಾಗದ ಪೊಲೀಸರು, ಯಾವ ಪ್ರದೇಶದಿಂದ ಬೆದರಿಕೆ ಕರೆ ಬಂದಿದೆ?, ಯಾವ ಸಿಮ್ ಕಾರ್ಡ್ ಬಳಸಲಾಗಿದೆ? ಎಂಬೆಲ್ಲಾ ಮಾಹಿತಿ ಕಲೆ ಹಾಕುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ರಾಮೇಶ್ವರಂ ಕೆಫೆ ಸ್ಫೋಟ ಖಂಡಿಸಿದ ಬಳಿಕ ಜೀವ ಬೆದರಿಕೆ: ಪ್ರಶಾಂತ್ ಸಂಬರಗಿ ದೂರು - Rameswaram Cafe Blast

ETV Bharat Logo

Copyright © 2024 Ushodaya Enterprises Pvt. Ltd., All Rights Reserved.