ETV Bharat / bharat

ಫೋನ್ ಕದ್ದಾಲಿಕೆ ಪ್ರಕರಣ: ಮತ್ತಿಬ್ಬರು ತೆಲಂಗಾಣ ಪೊಲೀಸ್​ ಅಧಿಕಾರಿಗಳ ಬಂಧನ - TELANGANA PHONE TAPPING CASE

author img

By PTI

Published : Mar 24, 2024, 1:33 PM IST

Updated : Mar 25, 2024, 6:13 PM IST

ತೆಲಂಗಾಣದಲ್ಲಿ ಕೇಳಿಬಂದಿರುವ ಖಾಸಗಿ ವ್ಯಕ್ತಿಗಳ ಫೋನ್​ ಕದ್ದಾಲಿಕೆ ಪ್ರಕರಣದಲ್ಲಿ ಮತ್ತಿಬ್ಬರು ಪೊಲೀಸ್​ ಅಧಿಕಾರಿಗಳು ಬಂಧಿತರಾಗಿದ್ದಾರೆ.

ಫೋನ್ ಕದ್ದಾಲಿಕೆ ಪ್ರಕರಣ
ಫೋನ್ ಕದ್ದಾಲಿಕೆ ಪ್ರಕರಣ

ಹೈದರಾಬಾದ್: ಫೋನ್​ ಕದ್ದಾಲಿಕೆ, ಕೆಲವು ಕಂಪ್ಯೂಟರ್​ಗಳು ಮತ್ತು ಅಧಿಕೃತ ಡೇಟಾವನ್ನು ನಾಶಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ಪೊಲೀಸರು ಮತ್ತಿಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಶನಿವಾರ ಬಂಧಿಸಿದ್ದಾರೆ. ಹೆಚ್ಚುವರಿ ಡಿಸಿಪಿ ತಿರುಪತಣ್ಣ ಮತ್ತು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್​ಪಿ) ಎನ್.ಭುಜಂಗರಾವ್ ಬಂಧಿತರು.

ಬಂಧಿತ ಇಬ್ಬರು ಪೊಲೀಸ್ ಅಧಿಕಾರಿಗಳು ಈ ಹಿಂದೆ ಕ್ರಮವಾಗಿ ವಿಶೇಷ ಇಂಟೆಲಿಜೆನ್ಸ್ ಬ್ಯೂರೋ (ಎಸ್‌ಐಬಿ) ಮತ್ತು ಗುಪ್ತಚರ ಇಲಾಖೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಕೆಲಸ ಮಾಡಿದ್ದರು. ಹಿಂದಿನ ಬಿಆರ್‌ಎಸ್ ಸರ್ಕಾರದ ಅವಧಿಯಲ್ಲಿ ವಿವಿಧ ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳಿಂದ ಗುಪ್ತಚರ ಮಾಹಿತಿಯನ್ನು ಅಳಿಸಿಹಾಕಿದ ಆರೋಪದಲ್ಲಿ ಹಾಗೂ ಆಪಾದಿತ ಫೋನ್ ಕದ್ದಾಲಿಕೆ ಪ್ರಕರಣದಲ್ಲಿ ಬಂಧಿತರಾಗಿರುವ ಅಮಾನತುಗೊಂಡ ಡಿಎಸ್‌ಪಿ ಡಿ.ಪ್ರಣೀತ್ ರಾವ್ ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದಾಗಿ ಪೊಲೀಸರು ತಿಳಿಸಿದ್ದಾರೆ.

ವಿಚಾರಣೆಯ ವೇಳೆ ಇಬ್ಬರು ಪೊಲೀಸ್ ಅಧಿಕಾರಿಗಳು ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿಕೊಂಡ ಬಗ್ಗೆ ಒಪ್ಪಿಕೊಂಡಿದ್ದಾರೆ. ಖಾಸಗಿ ವ್ಯಕ್ತಿಗಳ ಮೇಲೆ ನಿಗಾ ಇಡುವ ಸಂಚು, ಫೋನ್​ ಕದ್ದಾಲಿಕೆಯಂತಹ ಸಂಚಿನಲ್ಲಿ ಭಾಗಿಯಾಗಿರುವ ಬಗ್ಗೆ ತಪ್ಪೊಪ್ಪಿಕೊಂಡಿದ್ದಾರೆ. ಜೊತೆಗೆ ಈಗಾಗಲೇ ಬಂಧಿತರಾಗಿರುವ ವಿಶೇಷ ತನಿಖಾ ದಳದ (ಎಸ್​ಐಬಿ) ಡಿಎಸ್​ಪಿ ಆಗಿದ್ದ ಡಿ.ಪ್ರಣೀತ್ ಕುಮಾರ್ ಅಲಿಯಾಸ್ ಪ್ರಣೀತ್ ರಾವ್ ಮತ್ತು ಇತರ ಆರೋಪಿಗಳ ಜೊತೆಗೆ ಸಂಪರ್ಕ ಹೊಂದಿದ್ದಾಗಿ ತಿಳಿಸಿದ್ದಾರೆ. ಹೆಚ್ಚಿನ ವಿಚಾರಣೆ ಪ್ರಗತಿಯಲ್ಲಿದೆ ಎಂದು ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ.

ಪ್ರಣೀತ್​ರಾವ್ ಬಂಧನ: ಮಾರ್ಚ್ 10ರಂದು ಎಸ್‌ಐಬಿಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ನೀಡಿದ ದೂರಿನ ಆಧಾರದ ಮೇಲೆ, ಪ್ರಣೀತ್ ರಾವ್ ಮತ್ತು ಇತರರ ವಿರುದ್ಧ ಪಂಜಗುಟ್ಟ ಪೊಲೀಸ್ ಠಾಣೆಯಲ್ಲಿ ಸಾರ್ವಜನಿಕ ಸೇವಾಧಿಕಾರಿಯಿಂದ ಕ್ರಿಮಿನಲ್ ನಂಬಿಕೆ ದ್ರೋಹ, ಸಾಕ್ಷ್ಯಾಧಾರಗಳ ನಾಶ, ಕ್ರಿಮಿನಲ್​ ಕ್ರಿಮಿನಲ್ ಪಿತೂರಿ ಆರೋಪದಡಿ ದೂರು ದಾಖಲಿಸಲಾಗಿದೆ.

ಫೋನ್​ ಕದ್ದಾಲಿಕೆ, ಸಾಕ್ಷ್ಯನಾಶ, ನಕಲಿ ಪ್ರೊಫೈಲ್​ ತಯಾರಿ, ರಹಸ್ಯ ಅನಧಿಕೃತ ಮತ್ತು ಕಾನೂನುಬಾಹಿರವಾಗಿ ಮೇಲ್ವಿಚಾರಣೆ ಮಾಡಿದ ಆರೋಪದಡಿ ಹಿರಿಯ ಪೊಲೀಸ್​ ಅಧಿಕಾರಿ ಪ್ರಣೀತ್ ರಾವ್ ಅವರನ್ನು ಮಾರ್ಚ್ 13ರಂದು ಬಂಧಿಸಲಾಯಿತು. ಬಳಿಕ ಗಂಭೀರ ಆರೋಪ ಎದುರಿಸುತ್ತಿರುವ ರಾವ್ ಅವರನ್ನು ತೆಲಂಗಾಣ ಸರ್ಕಾರ ಅಮಾನತುಗೊಳಿಸಿತು. ಬಂಧಿತ ಅಧಿಕಾರಿ ಹಿಂದಿನ ಬಿಆರ್‌ಎಸ್ ಸರ್ಕಾರದಲ್ಲಿ ಡಿಎಸ್‌ಪಿ ಆಗಿದ್ದರು. ನಂತರ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಕಚೇರಿಯಲ್ಲಿ ಡಿಎಸ್‌ಪಿ ಆಗಿ ಕೆಲಸ ಮಾಡಿದ್ದಾರೆ.

ಇದನ್ನೂ ಓದಿ: ಫೋನ್ ಕದ್ದಾಲಿಕೆ ಶಂಕೆ.. ನನ್ನ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಧಕ್ಕೆ: ತೆಲಂಗಾಣ ರಾಜ್ಯಪಾಲರ ಆರೋಪ

Last Updated : Mar 25, 2024, 6:13 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.