ETV Bharat / bharat

ಭೀಕರ ರಸ್ತೆ ಅಪಘಾತದಲ್ಲಿ 7 ಮಂದಿ ಸಾವು; 15 ಜನರಿಗೆ ಗಾಯ - ROAD ACCIDENT

ಭಾನುವಾರ ರಾಜಸ್ಥಾನದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ. 15 ಜನರು ಗಾಯಗೊಂಡಿದ್ದಾರೆ.

author img

By ETV Bharat Karnataka Team

Published : Sep 15, 2024, 10:54 PM IST

ROAD ACCIDENT
ಭೀಕರ ರಸ್ತೆ ಅಪಘಾತ (ETV Bharat)

ಸಿರೋಹಿ: ರಾಜಸ್ಥಾನದ ಸಿರೋಹಿ ಜಿಲ್ಲೆಯಲ್ಲಿ ಭಾನುವಾರ ಭಾರಿ ರಸ್ತೆ ಅಪಘಾತ ಸಂಭವಿಸಿದೆ. ಪಿಂಡ್ವಾರಾ ಪೊಲೀಸ್ ಠಾಣೆ ವ್ಯಾಪ್ತಿಯ ಕಂಟಲ್ ಬಳಿ ರಾತ್ರಿ ಟ್ರಕ್ ಮತ್ತು ಟ್ಯಾಕ್ಸಿ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ, 7 ಮಂದಿ ಸಾವನ್ನಪ್ಪಿದ್ದು, 15 ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಅಪಘಾತದ ಬಳಿಕ ಸ್ಥಳದಲ್ಲಿ ಆಕ್ರೋಶ ವ್ಯಕ್ತವಾಯಿತು. ಘಟನೆಯ ಬಗ್ಗೆ ಮಾಹಿತಿ ಪಡೆದು ಹೆಚ್ಚಿನ ಸಂಖ್ಯೆಯಲ್ಲಿ ಜನರು ಸ್ಥಳಕ್ಕೆ ಆಗಮಿಸಿ ಅಪಘಾತದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರು. ಈ ಮಾಹಿತಿ ಮೇರೆಗೆ ಪೊಲೀಸ್ ಅಧಿಕಾರಿ ಹಮೀರ್ ಸಿಂಗ್ ಭಾಟಿ ಮತ್ತು ಇತರ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ತಲುಪಿದ್ದಾರೆ ಎಂದು ಸಿಒ ಪಿಂಡ್ವಾರಾ ಭನ್ವರ್‌ಲಾಲ್ ಚೌಧರಿ ತಿಳಿಸಿದ್ದಾರೆ.

ಘಟನೆಯ ನಂತರ ಟ್ಯಾಕ್ಸಿ ನಜ್ಜುಗುಜ್ಜಾಗಿದ್ದು, ಅದರಲ್ಲಿ ಪ್ರಯಾಣಿಸುತ್ತಿದ್ದ ಜನರು ವಾಹನದಲ್ಲಿಯೇ ಸಿಲುಕಿಕೊಂಡರು. ಸ್ಥಳಕ್ಕಾಗಮಿಸಿದ ಜನರು ಹರಸಾಹಸ ಪಟ್ಟು ವಾಹನದಲ್ಲಿ ಸಿಲುಕಿದ್ದವರನ್ನು ಹೊರತೆಗೆದು ಸರ್ಕಾರಿ ಆಸ್ಪತ್ರೆಗೆ ರವಾನಿಸಿದರು. ಗಾಯಾಳುಗಳ ಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದಲ್ಲಿ 15ಕ್ಕೂ ಹೆಚ್ಚು ಮಂದಿಗೆ ಗಾಯ: ಘಟನೆಯಲ್ಲಿ 7 ಮಂದಿ ಸಾವನ್ನಪ್ಪಿದ್ದರೆ, 15 ಮಂದಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗುತ್ತಿದೆ ಎಂದು ಸಿಒ ಭವರಲಾಲ್ ಚೌಧರಿ ತಿಳಿಸಿದ್ದಾರೆ. ಗಾಯಗೊಂಡವರು ಮತ್ತು ಮೃತಪಟ್ಟವರು ಯಾರು ಅನ್ನೋದು ತಕ್ಷಣಕ್ಕೆ ಮಾಹಿತಿ ಸಿಕ್ಕಿಲ್ಲ. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪ್ರಭುದಯಾಳ್ ಧನಿಯಾ ಮತ್ತು ಪಿಂಡ್ವಾರಾ ಪೊಲೀಸ್ ಠಾಣಾಧಿಕಾರಿ ಹಮೀರ್ ಸಿಂಗ್ ತಮ್ಮ ತಂಡದೊಂದಿಗೆ ಘಟನಾ ಸ್ಥಳಕ್ಕೆ ತಲುಪಿದ್ದಾರೆ. ಈ ತಂಡವು ಗಾಯಾಳುಗಳನ್ನು ಪಿಂಡ್ವಾರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದೆ.

ಸ್ಥಳದಲ್ಲಿ ಟ್ರಾಫಿಕ್​ ಜಾಮ್: ಅಪಘಾತದ ನಂತರ ಸ್ಥಳದಲ್ಲಿ ಟ್ರಾಫಿಕ್​ ಜಾಮ್ ಉಂಟಾಗಿದ್ದು, ಪಿಂಡ್ವಾರಾ ಪೊಲೀಸರು ತೆರವುಗೊಳಿಸುತ್ತಿದ್ದಾರೆ. ಅಪಘಾತವು ತುಂಬಾ ಭೀಕರವಾಗಿದ್ದು, ಗಾಯಾಳುಗಳು ಟ್ಯಾಕ್ಸಿಯಲ್ಲಿ ಬಹಳ ಸಮಯ ಸಿಲುಕಿಕೊಂಡಿದ್ದರು ಮತ್ತು ಸ್ಥಳದಲ್ಲಿದ್ದ ಜನರು ಬಹಳ ಕಷ್ಟಪಟ್ಟು ಹೊರತೆಗೆದರು. ಇಷ್ಟೊಂದು ಸಂಖ್ಯೆಯಲ್ಲಿ ಗಾಯಾಳುಗಳು ಪಿಂಡ್ವಾರಾ ಸರ್ಕಾರಿ ಆಸ್ಪತ್ರೆಗೆ ಆಗಮಿಸಿದಾಗ ಅಸ್ತವ್ಯಸ್ತವಾಗಿತ್ತು. ಹಲವು ಸಾಮಾಜಿಕ ಕಾರ್ಯಕರ್ತರು ಕೂಡ ಆಸ್ಪತ್ರೆಗೆ ಆಗಮಿಸಿದ್ದು, ಗಾಯಾಳುಗಳ ಚಿಕಿತ್ಸೆಗೆ ನೆರವಾದರು.

ಇದನ್ನೂ ಓದಿ: ಮೀರತ್​ನಲ್ಲಿ ಕಟ್ಟಡ ಕುಸಿತ: ಒಂದೇ ಕುಟುಂಬದ 10 ಜನ ಸಾವು, ಐವರಿಗೆ ಗಾಯ - Meerut Building Collapse

ETV Bharat Logo

Copyright © 2024 Ushodaya Enterprises Pvt. Ltd., All Rights Reserved.