ETV Bharat / bharat

ಕಾವೇರಿ ವಿಚಾರದಲ್ಲಿ ತಮಿಳುನಾಡು-ಕರ್ನಾಟಕ ನಡುವೆ ಯಾವುದೇ ಸಮಸ್ಯೆ ಇಲ್ಲ: ಸಚಿವ ಮುನಿಯಪ್ಪ - KH MUNIYAPPA ON CAUEVRY ISSUE

author img

By ETV Bharat Karnataka Team

Published : May 27, 2024, 6:52 PM IST

ಆಹಾರ ಸಚಿವ ಕೆ. ಹೆಚ್ ಮುನಿಯಪ್ಪ ಅವರು ಕಾವೇರಿ ವಿಚಾರದ ಕುರಿತು ಮಾತನಾಡಿದ್ದಾರೆ.

minister-muniyappa
ಸಚಿವ ಮುನಿಯಪ್ಪ (ETV Bharat)

ಮಧುರೈ (ತಮಿಳುನಾಡು): ಕಾವೇರಿ ವಿಚಾರದಲ್ಲಿ ತಮಿಳುನಾಡು-ಕರ್ನಾಟಕ ನಡುವೆ ಯಾವುದೇ ಸಮಸ್ಯೆ ಇಲ್ಲ ಎಂದು ಕರ್ನಾಟಕದ ಆಹಾರ ಸಚಿವ ಕೆ. ಹೆಚ್ ಮುನಿಯಪ್ಪ ಅವರು ತಿಳಿಸಿದ್ದಾರೆ.

ಸಚಿವ ಕೆ. ಹೆಚ್ ಮುನಿಯಪ್ಪ ಅವರು ಇಂದು (ಸೋಮವಾರ) ಮಧುರೈ ಮೀನಾಕ್ಷಿಯಮ್ಮನ್ ದೇವಸ್ಥಾನಕ್ಕೆ ಕುಟುಂಬಸ್ಥರೊಂದಿಗೆ ಭೇಟಿ ನೀಡಿದ್ದರು. ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಅವರನ್ನು ಸ್ವಾಗತಿಸಲಾಯಿತು. ಇದೇ ವೇಳೆ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು ಸ್ವಾಗತಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮುನಿಯಪ್ಪ, ''ತಮಿಳುನಾಡು ಮತ್ತು ಪುದುಚೇರಿಯ ಎಲ್ಲಾ 40 ಲೋಕಸಭಾ ಕ್ಷೇತ್ರಗಳನ್ನು ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ. ಡಿಎಂಕೆ ನಾಯಕ ಎಂ. ಕೆ ಸ್ಟಾಲಿನ್, ತಮಿಳುನಾಡು ಕಾಂಗ್ರೆಸ್ ನಾಯಕ ಸೆಲ್ವಪೆರುಂತಕೈ ಮತ್ತು ತಮಿಳುನಾಡಿನ ಮೈತ್ರಿ ಪಕ್ಷದ ನಾಯಕರ ಬೆಂಬಲದಿಂದ ಈ ಅವಕಾಶವಿದೆ. ರಾಹುಲ್ ಗಾಂಧಿ ಯುವ ನಾಯಕ, ಜನರು ರಾಹುಲ್ ಗಾಂಧಿಯನ್ನು ಪ್ರೀತಿಸುತ್ತಾರೆ. ಕಾವೇರಿ ವಿಚಾರದಲ್ಲಿ ಯಾವುದೇ ಸಮಸ್ಯೆ ಇಲ್ಲ. ಇದರಲ್ಲಿ ತಮಿಳುನಾಡು ಮತ್ತು ಕರ್ನಾಟಕದ ಜನರು ಸಹೋದರರು. ಆದ್ದರಿಂದ, ಸಮಸ್ಯೆ ಏನೇ ಇರಲಿ, ಅದನ್ನು ಪರಿಹರಿಸಲಾಗುವುದು ಎಂದರು.

ಇದಕ್ಕೂ ಮುನ್ನ ಸಚಿವರ ಜತೆಗಿದ್ದವರು ಮೊಬೈಲ್‌ ಹಿಡಿದು ದೇವಸ್ಥಾನ ಪ್ರವೇಶಿಸುತ್ತಿದ್ದಂತೆ ಕಾವಲುಗಾರರು ಹಾಗೂ ಕಾಂಗ್ರೆಸ್‌ ಪಕ್ಷದವರ ನಡುವೆ ವಾಗ್ವಾದ ನಡೆಯಿತು. ಇದಲ್ಲದೆ, ಕರ್ನಾಟಕ ಸಚಿವರೊಂದಿಗೆ ಬಂದ ಹೆಚ್ಚುವರಿ ವಾಹನಗಳ ನೋಂದಣಿ ಸಂಖ್ಯೆಗಳನ್ನು ಪೊಲೀಸರು ಗಮನಿಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ : ಕಾವೇರಿ ನದಿ ನೀರಿನ ವಿಚಾರದಲ್ಲಿ ಸರ್ಕಾರ ಸಮರ್ಥ ನಿಲುವು ತಳೆಯಬೇಕು: ಆರ್.ಅಶೋಕ್ ಒತ್ತಾಯ - R ASHOK CRITICIZE GOVT

ETV Bharat Logo

Copyright © 2024 Ushodaya Enterprises Pvt. Ltd., All Rights Reserved.