ಅಯೋಧ್ಯೆ(ಉತ್ತರ ಪ್ರದೇಶ): ಅಯೋಧ್ಯೆ ಶ್ರೀ ರಾಮ ಮಂದಿರಕ್ಕೆ ಹಾನಿಯುಂಟು ಮಾಡುವುದಾಗಿ ರಾಮ ಜನ್ಮಭೂಮಿ ಟ್ರಸ್ಟ್ಗೆ ಬೆದರಿಕೆ ಇಮೇಲ್ ಬಂದಿದ್ದು, ಈ ಬಗ್ಗೆ ಉತ್ತರ ಪ್ರದೇಶ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಇಮೇಲ್ನಲ್ಲಿ ಯಾವ ರೀತಿಯ ಬೆದರಿಕೆ ಒಡ್ಡಲಾಗಿದೆ ಎಂಬ ಬಗ್ಗೆ ಪೊಲೀಸರು ಈವರೆಗೆ ಯಾವುದೇ ಮಾಹಿತಿಯನ್ನು ಬಹಿರಂಗಪಡಿಸಿಲ್ಲ. ಇಮೇಲ್ ಇಂಗ್ಲಿಷ್ನಲ್ಲಿದ್ದು, ತಮಿಳುನಾಡಿನಲ್ಲಿನ ವ್ಯಕ್ತಿಯೊಬ್ಬ ಇದನ್ನು ಕಳುಹಿಸಿರಬಹುದು ಎಂದು ಪ್ರಾಥಮಿಕ ತನಿಖೆಯ ನಂತರ ಪೊಲೀಸರು ಹೇಳಿದ್ದಾರೆ.
ಟ್ರಸ್ಟ್ ಕೂಡ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿಯನ್ನು ಹಂಚಿಕೊಂಡಿಲ್ಲ. ಭಾನುವಾರ ಮತ್ತು ಸೋಮವಾರದ ಮಧ್ಯರಾತ್ರಿ ಬೆದರಿಕೆ ಇಮೇಲ್ ಬಂದಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.
ಅಯೋಧ್ಯೆ ಶ್ರೀ ರಾಮ ಮಂದಿರಕ್ಕೆ 135.5 ಮಿಲಿಯನ್ ದೇಶೀಯ ಪ್ರವಾಸಿಗರು ಭೇಟಿ ನೀಡಿದ್ದು, 2024 ರಲ್ಲಿ ಉತ್ತರ ಪ್ರದೇಶದ ಅತಿ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಸ್ಥಳವಾಗಿ ತಾಜ್ ಮಹಲ್ ಅನ್ನು ಹಿಂದಿಕ್ಕಿದೆ. ಸದ್ಯ ಬೆದರಿಕೆ ಇಮೇಲ್ ಬಂದಿರುವ ಹಿನ್ನೆಲೆಯಲ್ಲಿ ಪೊಲೀಸರು ನಗರದಾದ್ಯಂತ ಗಸ್ತು ಹೆಚ್ಚಿಸಿದ್ದಾರೆ.
ಇದನ್ನೂ ಓದಿ: ಉರ್ದು ಭಾಷೆಗೆ 'ರಾಮಾಯಣ'ವನ್ನು ಅನುವಾದಿಸಿದ ಹಿಂದೂ ವ್ಯಕ್ತಿ; ಇದು 14 ವರ್ಷಗಳ ಪರಿಶ್ರಮ - RAMAYANA IN URDU