ETV Bharat / bharat

ಹಾಸನ ಪ್ರಕರಣ: ಈಗಲೂ ಪ್ರಧಾನಿ ಮೌನವಹಿಸುತ್ತಾರೆಯೇ?, ಬಿಜೆಪಿ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿ - Priyanka Gandhi slams BJP

author img

By PTI

Published : Apr 29, 2024, 7:50 PM IST

Updated : Apr 30, 2024, 12:22 PM IST

PRIYANKA GANDHI  BJP  PRIME MINISTER NARENDRA MODI  OPPOSITION PARTY
ಬಿಜೆಪಿ ವಿರದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿ

ಹಾಸನ ಪ್ರಕರಣದ ಕುರಿತು ಪ್ರಧಾನಿ ನರೇಂದ್ರ ಮೋದಿ ಈಗಲೂ ಮೌನವಹಿಸುತ್ತಾರಾ ಎಂದು ಪ್ರಶ್ನಿಸುವ ಮೂಲಕ ಬಿಜೆಪಿ ವಿರುದ್ಧ ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದರು.

ನವದೆಹಲಿ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಚುನಾವಣಾ ಪ್ರಚಾರದಲ್ಲಿ ಹಾಸನ ಪ್ರಕರಣವನ್ನು ಪ್ರಸ್ತಾಪಿಸಿದ್ದಾರೆ. ಈ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿ ವಾಗ್ದಾಳಿ ನಡೆಸಿದ್ದಾರೆ.

'ಮಹಿಳೆಯರ ಮೇಲೆ ನಡೆಸಿದ ಅಮಾನವೀಯ ಅಪರಾಧಗಳನ್ನು ತಿಳಿದು ನನಗೆ ತೀವ್ರ ಬೇಸರವಾಗಿದೆ. ಆತ ನೂರಾರು ಮಹಿಳೆಯರ ಬದುಕು ನಾಶಪಡಿಸಿ ಈಗ ತಲೆಮರೆಸಿಕೊಂಡಿದ್ದಾನೆ. ಹೀಗಿದ್ದರೂ ಮೋದಿಜಿ ಮೌನವಾಗಿರುವಿರಾ?' ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಇದೇ ವೇಳೆ ಎಕ್ಸ್​​​ ಹ್ಯಾಂಡಲ್​​ನಲ್ಲಿ ಪ್ರಶ್ನಿಸಿದ್ದಾರೆ.

ಹಾಸನ ಲೋಕಸಭಾ ಕ್ಷೇತ್ರಕ್ಕೆ ಎರಡನೇ ಹಂತದ ಚುನಾವಣೆಗೆ ಎರಡು ದಿನಗಳ ಮೊದಲು ಏಪ್ರಿಲ್ 26ರಂದು ಅಶ್ಲೀಲ ವಿಡಿಯೋ ಕಾಣಿಸಿಕೊಂಡಿತ್ತು. ಏಪ್ರಿಲ್ 25 ರಂದು ಮಹಿಳಾ ಆಯೋಗದ ಅಧ್ಯಕ್ಷರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಕ್ಷೇಪಾರ್ಹ ವಿಡಿಯೋ ಕುರಿತು ಎಸ್‌ಐಟಿ ತನಿಖೆಗೆ ಆದೇಶಿಸುವಂತೆ ಮನವಿ ಮಾಡಿದ್ದರು. ಇದಾದ ನಂತರ ಸಿಎಂ ಸಿದ್ದರಾಮಯ್ಯ ಏಪ್ರಿಲ್ 27 ರಂದು ಎಸ್‌ಐಟಿ ತನಿಖೆ ಬಗ್ಗೆ ಘೋಷಿಸಿದ್ದರು.

ಇದನ್ನೂ ಓದಿ: ಪೆನ್​ಡ್ರೈವ್​ ವಿಡಿಯೋ ಪ್ರಕರಣ, ಪ್ರಜ್ವಲ್​ ರೇವಣ್ಣ ಅಮಾನತು ವಿಚಾರ; ಕುಮಾರಸ್ವಾಮಿ ಹೇಳಿದ್ದೇನು? - H D Kumaraswamy

Last Updated :Apr 30, 2024, 12:22 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.