ETV Bharat / education-and-career

ಕರ್ನಾಟಕ ವಿಧಾನ ಪರಿಷತ್ ಸಚಿವಾಲಯದಲ್ಲಿ ಚಾಲಕ​​, ಗ್ರೂಪ್​ ಡಿ ಹುದ್ದೆಗೆ ಅರ್ಜಿ ಆಹ್ವಾನ

author img

By ETV Bharat Karnataka Team

Published : Mar 5, 2024, 12:05 PM IST

Driver and Group D job notification from KLA
Driver and Group D job notification from KLA

ಒಟ್ಟು 32 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ. ಪೂರ್ಣ ವಿವರ ಇಲ್ಲಿದೆ.

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ಖಾಲಿ ಇರುವ ವಾಹನ ಚಾಲಕರು ಮತ್ತು ಗ್ರೂಪ್​ ಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 32 ಹುದ್ದೆಗಳಿದ್ದು, ಅಧಿಸೂಚನೆ ಪ್ರಕಟಿಸಲಾಗಿದೆ.

ಹುದ್ದೆಗಳ ವಿವರ: ವಾಹನ ಚಾಲಕರು- 3, ಗ್ರೂಪ್​ ಡಿ- 29.

ವಿದ್ಯಾರ್ಹತೆ: ವಾಹನ ಚಾಲಕರ ಹುದ್ದೆಗೆ ಅಭ್ಯರ್ಥಿಗಳು ಎಸ್​ಎಸ್​​ಎಲ್​ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಮೋಟಾರು ಕಾರು ಅಥವಾ ಭಾರೀ ವಾಹನ ಚಾಲನೆಯ ಅಧಿಕೃತ ಚಾಲನ ಪರವಾನಗಿ ಮತ್ತು ಮೂರು ವರ್ಷದ ಅನುಭವದ ಪ್ರಮಾಣ ಪತ್ರ ಹೊಂದಿರಬೇಕು. ಪ್ರಥಮ ಚಿಕಿತ್ಸೆಯ ಪ್ರಮಾಣ ಪತ್ರ ಇರಬೇಕು.

ಗ್ರೂಪ್​ ಡಿ: ಎಸ್​ಎಸ್​ಎಲ್​ಸಿ ಅಥವಾ ತತ್ಸಮಾನ ವಿದ್ಯಾರ್ಹತೆ

ವಯೋಮಿತಿ: ಕನಿಷ್ಠ 18, ಗರಿಷ್ಠ 35 ವರ್ಷ. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ.

ಅಧಿಸೂಚನೆ
ಅಧಿಸೂಚನೆ

ವೇತನ: ವಾಹನ ಚಾಲಕ ಹುದ್ದೆ-21,400-42,000 ರೂ ಮಾಸಿಕ. ಗ್ರೂಪ್​ ಡಿ 17,000-28,950 ರೂ ಮಾಸಿಕ.

ಅರ್ಜಿ ಸಲ್ಲಿಕೆ: ಸರ್ಕಾರಿ ಪುಸ್ತಕ ಮಳಿಗೆಯಿಂದ ನಮೂನೆ -1ರ ದ್ವಿಪ್ರತಿ ಪಡೆದು, ಅಗತ್ಯ ದಾಖಲೆಯೊಂದಿಗೆ ಈ ಕೆಳಗಿನ ವಿಳಾಸಕ್ಕೆ ಖುದ್ದು ತಲುಪಿಸಬಹುದು.

ಕಾರ್ಯದರ್ಶಿ, ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯ, ಅಂಚೆ ಪೆಟ್ಟಿಗೆ ಸಂಖ್ಯೆ 5079. ಮೊದಲನೇ ಮಹಡಿ, ವಿಧಾನಸೌಧ, ಬೆಂಗಳೂರು- 560001.

ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳಿಗೆ 600, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 300, ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50 ರೂ, ಪ.ಜಾ, ಪ.ಪಂ, ಪ್ರವರ್ಗ 1 ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಆಯ್ಕೆ: ಚಾಲನ ಸಾಮರ್ಥ್ಯ ಮತ್ತು ಸಂದರ್ಶನ. ಮಾರ್ಚ್​​ 4ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಏಪ್ರಿಲ್​ 5 ಕಡೇಯ ದಿನ. ಈ ಕುರಿತ ಅಧಿಕೃತ ಅಧಿಸೂಚನೆಗೆ kla.kar.nic.in ಭೇಟಿ ನೀಡಿ.

ಇದನ್ನೂ ಓದಿ: ಬೆಂಗಳೂರಿನ ಕೇಂದ್ರ ರೇಷ್ಮೆ ಮಂಡಳಿಯಲ್ಲಿ ಉದ್ಯೋಗಾವಕಾಶ: ಎಂಎಸ್ಸಿ ಪದವಿ ಅರ್ಹತೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.