ETV Bharat / education-and-career

ಬಿಇ ಆಗಿದೆಯಾ?: 327 ಸಹಾಯಕ ಇಂಜಿನಿಯರ್​, ಸಹಾಯಕ ನಿರ್ದೇಶಕರ ಹುದ್ದೆಗೆ ಅಧಿಸೂಚನೆ - ಬೇಗನೇ ಅರ್ಜಿ ಹಾಕಿ

author img

By ETV Bharat Karnataka Team

Published : Mar 14, 2024, 3:20 PM IST

ಈ ಹುದ್ದೆಗಳಿಗೆ ಏಪ್ರಿಲ್​ 15ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.

KPSC Recruitment for 327 assistant civil engineer and assistant director post​
KPSC Recruitment for 327 assistant civil engineer and assistant director post​

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರೂಪ್​ ಬಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಹಾಯಕ ಇಂಜಿನಿಯರ್​ ಮತ್ತು ಸಹಾಯಕ ನಿರ್ದೇಶಕರು ಸೇರಿದಂತೆ ಒಟ್ಟು 327 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ.

ಅಧಿಸೂಚನೆ
ಅಧಿಸೂಚನೆ

ಹುದ್ದೆ ವಿವರ:

ಇಲಾಖೆ ಹುದ್ದೆ ಹುದ್ದೆ ಸಂಖ್ಯೆ
ಬಿಬಿಎಂಪಿ ಸಹಾಯಕ ಇಂಜಿನಿಯರ್​ (ಸಿವಿಲ್​)100
ಜಲ ಸಂಪನ್ಮೂಲ ಇಲಾಖೆಸಹಾಯಕ ಇಂಜಿನಿಯರ್​ (ಸಿವಿಲ್​​)90
ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಭೂ ದಾಖಲೆಗಳ ಸಹಾಯಕ ನಿರ್ದೇಶಕರು27
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಪತ್ರಾಂಕಿತ ವ್ಯಸ್ಥಾಪಕರು40
ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಸಹಾಯಕ ನಿರ್ದೇಶಕರು23
ಜಲ ಸಂಪನ್ಮೂಲ ಇಲಾಖೆಸಹಾಯಕ ಇಂಜಿನಿಯರ್​​(ಮೆಕಾನಿಕಲ್​)10
ಕಾರ್ಖಾನೆ, ಬಾಯ್ಲರುಗಳು ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆಕಾರ್ಖಾನೆಗಳ ಸಹಾಯಕ ನಿರ್ದೇಶಕರು9
ಕಾರ್ಖಾನೆ, ಬಾಯ್ಲರುಗಳು ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ ಬಾಯ್ಲರುಗಳ ಸಹಾಯಕ ನಿರ್ದೇಶಕರು3
ಅಂತರ್ಜಲ ನಿರ್ದೇಶನಾನಾಲಯಭೂ ವಿಜ್ಞಾನಿ25

ವಿದ್ಯಾರ್ಹತೆ: ಅಭ್ಯರ್ಥಿಗಳು ಹುದ್ದೆಗೆ ಅನುಸಾರವಾಗಿ ಬಿಇ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಗರಿಷ್ಠ ವಯೋಮಿತಿ 35 ವರ್ಷ. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ, ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.

ಆಯ್ಕೆ ಪ್ರಕ್ರಿಯೆ: ಸ್ಪರ್ಧಾತ್ಮಕ ಪರೀಕ್ಷೆ

ಅರ್ಜಿ ಸಲ್ಲಿಕೆ: ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪ.ಜಾ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ಇದೆ. ನಿವೃತ್ತ ಸೇವಾ ಅಭ್ಯರ್ಥಿಗಳಿಗೆ 50 ರೂ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 150 ರೂ, ಸಾಮಾನ್ಯ ಅಭ್ಯರ್ಥಿಗಳಿಗೆ 300 ರೂ ಅರ್ಜಿ ಶುಲ್ಕವನ್ನು ನಿಗದಿ ಮಾಡಲಾಗಿದೆ.

ಈ ಹುದ್ದೆಗೆ ಏಪ್ರಿಲ್​ 15ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಮೇ 14 ಆಗಿದೆ. ಈ ಹುದ್ದೆಗಳಿಗೆ ಆಗಸ್ಟ್​ನಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ.

ಈ ಹುದ್ದೆ ಕುರಿತು ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ kpsc.kar.nic.in ಭೇಟಿ ನೀಡಿ

ಇದನ್ನೂ ಓದಿ: 364 ಭೂ ಮಾಪಕರ ಹುದ್ದೆಗಳ ಭರ್ತಿಗೆ ಕೆಪಿಎಸ್​ಸಿ ಅಧಿಸೂಚನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.