ETV Bharat / education-and-career

ಪಿಡಿಒ ಹುದ್ದೆಗಳು: ಅರ್ಜಿ ಸಲ್ಲಿಕೆಗೆ ಇನ್ನೊಂದೇ ದಿನ ಬಾಕಿ - PDO

author img

By ETV Bharat Karnataka Team

Published : May 14, 2024, 12:41 PM IST

ಪಿಡಿಒ ಹುದ್ದೆಗಳಿಗೆ ಕೆಪಿಎಸ್​ಸಿ ನೇಮಕಾತಿ ನಡೆಸುತ್ತಿದ್ದು, ಆಕಾಂಕ್ಷಿಗಳು ತಿಳಿದಿರಬೇಕಾದ ಸಂಪೂರ್ಣ ಮಾಹಿತಿ ಇಲ್ಲಿದೆ.

ಕರ್ನಾಟಕ ಲೋಕಸೇವಾ ಆಯೋಗ
ಪಿಡಿಒ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇನ್ನೊಂದೇ ದಿನ ಬಾಕಿ (ಕೆಪಿಎಸ್​ಸಿ)

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್​ಸಿ)ದಿಂದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ನೇಮಕಾತಿಗೆ ಅರ್ಜಿ ಸಲ್ಲಿಸಲು ಮೇ 15 ಕಡೇಯ ದಿನ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಇಲಾಖೆಯಲ್ಲಿನ ಗ್ರೂಪ್​ ಸಿ ಹುದ್ದೆಗಳು ಇವಾಗಿದ್ದು, ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಇದು ಅಂತಿಮ ಅವಕಾಶವಾಗಿದೆ.

ಹುದ್ದೆಗಳ ವಿವರ: ಒಟ್ಟು 247 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಹೈದರಾಬಾದ್​ ಕರ್ನಾಟಕಕ್ಕೆ 97 ಹುದ್ದೆಗಳನ್ನು ಮೀಸಲಿಡಲಾಗಿದೆ.

ವಿದ್ಯಾರ್ಹತೆ: ಅಂಗೀಕೃತ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ.

ವಯೋಮಿತಿ: ಕನಿಷ್ಠ 18, ಗರಿಷ್ಠ ವಯೋಮಿತಿ 35 ವರ್ಷ. ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ, ವಿಶೇಷಚೇತನ ಮತ್ತು ವಿಧವಾ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಅಧಿಸೂಚನೆ
ಅಧಿಸೂಚನೆ (ಕೆಪಿಎಸ್​ಸಿ ಜಾಲತಾಣ)

ಅರ್ಜಿ ಸಲ್ಲಿಕೆ ವಿಧಾನ: ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕು. ಪ.ಜಾ, ಪ.ಪಂ, ಪ್ರವರ್ಗ 1, ವಿಶೇಷಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ. ನಿವೃತ್ತ ಸೇವಾ ನೌಕರರಿಗೆ 50 ರೂ. ಅರ್ಜಿ ಶುಲ್ಕ ವಿಧಿಸಿದರೆ, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 300 ರೂ. ಹಾಗೂ ಸಾಮಾನ್ಯ ಅಭ್ಯರ್ಥಿಗಳಿಗೆ 600 ರೂ. ಅರ್ಜಿ ಶುಲ್ಕ ವಿಧಿಸಲಾಗಿದೆ.

ಆಯ್ಕೆ ಪ್ರಕ್ರಿಯೆ: ಸ್ಪರ್ಧಾತ್ಮಕ ಪರೀಕ್ಷೆ.

ಈ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ kpsc.kar.nic.in ಇಲ್ಲಿಗೆ ಭೇಟಿ ನೀಡಿ.

ಬೆಂಗಳೂರಿನ ಕಾಫಿ ಬೋರ್ಡ್​ನಲ್ಲಿ ಹುದ್ದೆ: ಬೆಂಗಳೂರಿನಲ್ಲಿರುವ ಕಾಫಿ ಬೋರ್ಡ್​​ ಆಫ್​ ಇಂಡಿಯಾದಲ್ಲಿ ಖಾಲಿ ಇರುವ ಕಾಲ್​ ಸೆಂಟರ್​​ ಆಪರೇಟರ್​ ಹುದ್ದೆಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಪದವಿ ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳು ತಾತ್ಕಾಲಿಕವಾಗಿದ್ದು 11 ತಿಂಗಳ ಅವಧಿಗೆ ಆಯ್ಕೆ ನಡೆಯುತ್ತದೆ.

ಪದವಿ ಮುಗಿಸಿರುವ ಕನ್ನಡ ಮತ್ತು ಇಂಗ್ಲಿಷ್​ ಭಾಷೆಯಲ್ಲಿ ಉತ್ತಮ ಹಿಡಿತ ಹೊಂದಿರುವ, ಸಾಮಾನ್ಯ ಕಂಪ್ಯೂಟರ್​ ಜ್ಞಾನವಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 15ರಿಂದ 18 ಸಾವಿರ ರೂ ವೇತನ ನಿಗದಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ರೆಸ್ಯೂಮೆಯನ್ನು hpriyanka17997@gmail.com ಇಲ್ಲಿಗೆ ಕಳುಹಿಸಿ. ಅರ್ಜಿ ಸಲ್ಲಿಕೆಸಲು ಕಡೇಯ ದಿನ ಮೇ 19. ಹೆಚ್ಚಿನ ಮಾಹಿತಿಗೆ indiacoffee.org ಭೇಟಿ ನೀಡಿ.

ಇದನ್ನೂ ಓದಿ: ನೌಕಾ ಸೇನೆಯಲ್ಲಿ ನೇಮಕಾತಿ; ಪಿಯುಸಿ ಆಗಿದ್ರೆ, ಅಗ್ನಿವೀರ್​ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.