ETV Bharat / education-and-career

KPSC ಕೆಪಿಎಸ್​ಸಿ ನೇಮಕಾತಿ: ಭೂ ಮಾಪಕರ ಹುದ್ದೆಗೆ ಅರ್ಜಿ ಸ್ವೀಕಾರ ಆರಂಭ

author img

By ETV Bharat Karnataka Team

Published : Mar 12, 2024, 5:25 PM IST

ಭೂ ಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯಲ್ಲಿನ ಖಾಲಿ ಇರುವ 364 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ.

http://10.10.50.85:6060/reg-lowres/12-March-2024/job-alert-1_1203newsroom_1710238508_767.jpg
http://10.10.50.85:6060/reg-lowres/12-March-2024/job-alert-1_1203newsroom_1710238508_767.jpg

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್​ಸಿ) ಅಧಿಸೂಚನೆ ಹೊರಡಿಸಿದ್ದ ಭೂ ಮಾಪಕರ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದೆ. ಭೂ ಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯಲ್ಲಿನ ಖಾಲಿ ಇರುವ 364 ಹುದ್ದೆಗಳಿಗೆ ಅಭ್ಯರ್ಥಿಗಳು ಮಾರ್ಚ್​ 11ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಅಂತಿಮ ದಿನ ಏಪ್ರಿಲ್​ 10 ಆಗಿದೆ.

ಅಧಿಸೂಚನೆ
ಅಧಿಸೂಚನೆ

ಹುದ್ದೆ ವಿವರ: ಒಟ್ಟು 364 ಹುದ್ದೆಗಳಲ್ಲಿ ಹೈದರಾಬಾದ್​ ಕರ್ನಾಟಕಕ್ಕೆ 100 ಮತ್ತು ಉಳಿಕೆ ಮೂಲ ವೃಂದದಲ್ಲಿ 264 ಹುದ್ದೆಗಳ ನೇಮಕಾತಿ ನಡೆಯಲಿದೆ.

ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಿವಿಲ್​ ಇಂಜಿನಿಯರಿಂಗ್​ನಲ್ಲಿ ಬಿಇ ಅಥವಾ ವಿಜ್ಞಾನ ವಿಭಾಗದಲ್ಲಿ ಗಣಿತ ವಿಷಯದೊಂದಿಗೆ ಪಿಯುಸಿ ವಿದ್ಯಾರ್ಹತೆ ಅಥವಾ ಲ್ಯಾಂಡ್​ ಅಂಡ್​ ಸಿಟಿ ಸರ್ವೆ ಪದವಿ ಪೂರ್ವ ಡಿಪ್ಲೊಮಾ ಅಥವಾ ಐಟಿಐ ಇನ್​ ಸರ್ವೆ ಟ್ರೇಡ್​ನಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ: ಅಭ್ಯರ್ಥಿಗಳಿಗೆ ಕನಿಷ್ಠ 18 ರಿಂದ ಗರಿಷ್ಠ 35 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3, ಪ. ಜಾ, ಪ. ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ, ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ವೇತನ: ಮಾಸಿಕ 23500-47650 ರೂ.

ಅರ್ಜಿ ಸಲ್ಲಿಕೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪ.ಜಾ, ಪ.ಪಂ, ಪ್ರವರ್ಗ 1 ಮತ್ತ ವಿಕಲ ಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ನಿವೃತ್ತ ಸೇವಾದಾರರಿಗೆ 50 ರೂ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 300 ರೂ ಮತ್ತು ಸಾಮಾನ್ಯ ಅಭ್ಯರ್ಥಿಗಳಿಗೆ 600 ರೂ ಅರ್ಜಿ ಶುಲ್ಕ ವಿಧಿಸಲಾಗಿದೆ.

ಆಯ್ಕೆ ಪ್ರಕ್ರಿಯೆ: ಸ್ಪರ್ಧಾತ್ಮಕ ಪರೀಕ್ಷೆ ಮೂಲಕ

ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಏಪ್ರಿಲ್​ 10. ಜುಲೈನಲ್ಲಿ ಈ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯುವ ಸಾಧ್ಯತೆ ಇದ್ದು, ಈ ಕುರಿತು ತಾತ್ಕಾಲಿಕ ದಿನಾಂಕವನ್ನು ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ. ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಸಂಪೂರ್ಣ ಮಾಹಿತಿಗೆ ಅಭ್ಯರ್ಥಿಗಳು kpsc.kar.nic.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.

ಇದನ್ನೂ ಓದಿ: RRB ನೇಮಕಾತಿ; 9144 ಟೆಕ್ನಿಕಲ್​ ಹುದ್ದೆಗೆ ಅಧಿಸೂಚನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.