ETV Bharat / education-and-career

ಹಾಸನ ಗ್ರಾಮ ಪಂಚಾಯತ್​ನಲ್ಲಿದೆ ಉದ್ಯೋಗಾವಕಾಶ; ಇಲ್ಲಿದೆ ವಿವರ

author img

By ETV Bharat Karnataka Team

Published : Feb 24, 2024, 4:48 PM IST

Library supervioser job from hassan grama panchayat
Library supervioser job from hassan grama panchayat

ಜಿಲ್ಲೆಯ ವಿವಿಧ ತಾಲೂಕಿನಲ್ಲಿರುವ ಗ್ರಾಮ ಪಂಚಾಯತ್​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಬೆಂಗಳೂರು: ಹಾಸನದ ವಿವಿಧ ಗ್ರಾಮದ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಒಟ್ಟು 12 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಜಿಲ್ಲೆಯ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಅಧಿಸೂಚನೆ
ಅಧಿಸೂಚನೆ

ಹುದ್ದೆ ವಿವರ: ಹಾಸನದ ಈ ತಾಲೂಕುಗಳಲ್ಲಿ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳ ಭರ್ತಿ ನಡೆಯಲಿದೆ.

  • ಚನ್ನರಾಯಪಟ್ಟಣ 2
  • ಅರಕಲಗೂಡು 5
  • ಹಾಸನ 4
  • ಅರಸೀಕೆರೆ 1

ವಿದ್ಯಾರ್ಹತೆ: ಪಿಯುಸಿ ವಿದ್ಯಾರ್ಹತೆ. ಸರ್ಟಿಫಿಕೇಷನ್​ ಕೋರ್ಸ್​ ಇನ್​​ ಲೈಬ್ರರಿ ಸೈನ್ಸ್​ ಪ್ರಮಾಣಪತ್ರ ಪಡೆದಿರಬೇಕು. ಕನಿಷ್ಠ 3 ತಿಂಗಳ ಕಂಪ್ಯೂಟರ್​ ಕೋರ್ಸ್​ ಉತ್ತೀರ್ಣರಾಗಿರಬೇಕು. ಸರ್ಟಿಫಿಕೇಷನ್​ ಕೋರ್ಸ್​ ಇನ್​ ಲೈಬ್ರರಿ ಸೈನ್ಸ್​ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸದಿದ್ದಲ್ಲಿ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಹುದ್ದೆಗೆ ಪರಿಗಣಿಸಲಾಗುತ್ತದೆ. ಅಭ್ಯರ್ಥಿಗಳು ಮೂರು ತಿಂಗಳ ಕಂಪ್ಯೂಟರ್​ ತರಬೇತಿ ಕೋರ್ಸ್​ ಅನ್ನು ಮಾಡಿರಬೇಕು.

ವಿಶೇಷ ಸೂಚನೆ: ಅಭ್ಯರ್ಥಿಗಳು ಸಂಬಂಧಪಟ್ಟ ಗ್ರಾಮ ಪಂಚಾಯತ್​ ವ್ಯಾಪ್ತಿಯ ನಿವಾಸಿಯಾಗಿರಬೇಕು.

ವಯೋಮಿತಿ: ಕನಿಷ್ಠ 18 ವರ್ಷ, ಗರಿಷ್ಠ 35 ವರ್ಷ ವಯೋಮಿತಿ ಹೊಂದಿರಬೇಕು. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪ.ಜಾತಿ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷದವರೆಗೆ ವಯೋಮಿತಿ ಸಡಿಲಿಕೆ ಇದೆ.

ವೇತನ: ಮಾಸಿಕ 15,196 ರೂ. ಮಾಸಿಕ ವೇತನ ನಿಗದಿಸಲಾಗಿದೆ. ಕಾರ್ಮಿಕ ಇಲಾಖೆಯು ಕಾಲಕಾಲಕ್ಕೆ ನಿಗದಿಪಡಿಸಿರುವ ವ್ಯತ್ಯಯವಾಗುವ ತುಟ್ಟಿ ಭತ್ಯೆಯನ್ನು ಪಾವತಿಸಲಾಗುವುದು.

ಆಯ್ಕೆ: ಮೆರಿಟ್​ ಆಧಾರದ ಮೇಲೆ ದಾಖಲಾತಿ ಪರಿಶೀಲನೆ ಬಳಿಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್​​​​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದು. ಸಾಮಾನ್ಯ ಅಭ್ಯರ್ಥಿಗಳಿಗೆ 500 ರೂ, ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 200 ರೂ. ಪ್ರವರ್ಗ 2ಎ, 2ಬಿ, 3ಎ ಮತ್ತು 3 ಬಿ ಅಭ್ಯರ್ಥಿಗಳಿಗೆ 300 ರೂ. ಮತ್ತು ವಿಶೇಷಚೇತನ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕ ನಿಗದಿಸಲಾಗಿದೆ.

ಈ ಹುದ್ದೆಗೆ ಅಭ್ಯರ್ಥಿಗಳು ಫೆಬ್ರವರಿ 22 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಮಾರ್ಚ್​ 22 ಆಗಿದೆ.

ಈ ಹುದ್ದೆ ಕುರಿತು ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು ಜಿಲ್ಲಾಡಳಿತದ ವೆಬ್​ಸೈಟ್​ ಆಗಿರುವ hassan.nic.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.

ಇದನ್ನೂ ಓದಿ:1000 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ಭರ್ತಿಗೆ ಕೆಇಎ ಅಧಿಸೂಚನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.