ETV Bharat / education-and-career

UPSC ನೇಮಕಾತಿ: 323 ಆಪ್ತ ಸಹಾಯಕರ ಹುದ್ದೆಗಳಿಗೆ ಅರ್ಜಿ ಆಹ್ವಾನ, ಅರ್ಹರು ಇಂದೇ ಅಪ್ಲೈ ಮಾಡಿ

author img

By ETV Bharat Karnataka Team

Published : Mar 13, 2024, 3:36 PM IST

UPSC Notification for EPFO 323 and 1930 nursing job
UPSC Notification for EPFO 323 and 1930 nursing job

ಯುಪಿಎಸ್​ಸಿಯಿಂದ ಇಪಿಎಫ್​ಒ ಮತ್ತು ರಾಜ್ಯ ವಿಮಾ ನಿಗಮದಲ್ಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಬೆಂಗಳೂರು: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್​ಒ)ನಲ್ಲಿ ಹುದ್ದೆಗಳ ಭರ್ತಿಗೆ ಕೇಂದ್ರ ಲೋಕಸೇವಾ ಆಯೋಗ ಅಧಿಸೂಚನೆ ಹೊರಡಿಸಿದೆ. ಒಟ್ಟು 323 ಆಪ್ತ ಸಹಾಯಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆ ವಿವರ: ಒಟ್ಟು 323 ಆಪ್ತ ಸಹಾಯಕರ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಸಾಮಾನ್ಯ ಅಭ್ಯರ್ಥಿಗಳಿಗೆ 132, ಒಬಿಸಿ ಅಭ್ಯರ್ಥಿಗಳಿಗೆ 87, ಇಡಬ್ಲ್ಯೂಎಸ್​ 32, ಪ. ಪಂ 24, ಪ. ಜಾ 48 ಹುದ್ದೆಗಳನ್ನು ಮೀಸಲಿರಿಸಲಾಗಿದೆ.

ಅಧಿಸೂಚನೆ
ಅಧಿಸೂಚನೆ

ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ವಿಷಯದಲ್ಲಿ ಪದವಿ ಪೂರ್ಣಗೊಳಿಸಿರಬೇಕು. ಇಂಗ್ಲಿಷ್​​ ಅಥವಾ ಹಿಂದಿ ಭಾಷೆಯಲ್ಲಿ ಸ್ಟೆನೋಗ್ರಾಫರ್​ ಆಗಿರಬೇಕು.

ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ 18 ಮತ್ತು ಗರಿಷ್ಠ 30 ವರ್ಷ ವಯೋಮಿತಿ ಹೊಂದಿರಬೇಕು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪ. ಜಾ, ಪ. ಪಂ ಅಭ್ಯರ್ಥಿಗಳಿಗೆ 5 ವರ್ಷ, ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ವೇತನ: 44,900 ರೂ ಮಾಸಿಕ ವೇತನ ನಿಗದಿ ಮಾಡಲಾಗಿದೆ.

ಅರ್ಜಿ ಸಲ್ಲಿಕೆ: ಈ ಹುದ್ದೆಗಳಿಗೆ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬೇಕಿದೆ. ಪ.ಜಾ, ಪ. ಪಂ, ಮಹಿಳಾ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದ್ದು, ಇತರ ಅಭ್ಯರ್ಥಿಗಳಿಗೆ 25 ರೂ ಅರ್ಜಿ ಶುಲ್ಕವನ್ನು ವಿಧಿಸಲಾಗಿದೆ.

ಆಯ್ಕೆ: ಸ್ಪರ್ಧಾತ್ಮಕ ಪರೀಕ್ಷೆ.

ಈ ಹುದ್ದೆಗೆ ಮಾರ್ಚ್​ 7 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆ ಕಡೆಯ ದಿನಾಂಕ ಮಾರ್ಚ್​ 27 ಆಗಿದೆ.

ಮೈಸೂರು, ಬೆಂಗಳೂರಿನಲ್ಲಿ ಈ ಹುದ್ದೆಗಳ ಪರೀಕ್ಷೆ ನಡೆಸಲಾಗುವುದು.

ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು upsconline.nic.in. ಇಲ್ಲಿಗೆ ಭೇಟಿ ನೀಡಬಹುದು.

1930 ನರ್ಸಿಂಗ್​ ಹುದ್ದೆಗೆ ಯುಪಿಎಸ್​ಸಿ ಅಧಿಸೂಚನೆ: ಕಾರ್ಮಿಕ ಮತ್ತಯ ಉದ್ಯೋಗ ಸಚಿವಾಲಯದ ಉದ್ಯೋಗಿ ರಾಜ್ಯ ವಿಮಾ ನಿಗಮದಲ್ಲಿ ಖಾಲಿ ಇರುವ 1930 ನರ್ಸಿಂಗ್​​ ಹುದ್ದೆಗಳ ಭರ್ತಿಗೆ ಕೇಂದ್ರ ಲೋಕಸೇವಾ ಆಯೋಗ ಅಧಿಸೂಚನೆ ಪ್ರಕಟಿಸಿದೆ.

ಡಿಪ್ಲೊಮಾ, ಬಿಎಸ್ಸಿ ನರ್ಸಿಂಗ್​ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಗರಿಷ್ಠ ವಯೋಮಿತಿ 30 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3, ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ.

ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪ.ಜಾ, ಪ. ಪಂ, ಮಹಿಳಾ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದ್ದು, ಇತರೆ ಅಭ್ಯರ್ಥಿಗಳಿಗೆ 25 ರೂ ಅರ್ಜಿ ಶುಲ್ಕ ವಿಧಿಸಲಾಗಿದೆ.

ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಈ ಹುದ್ದೆಗೆ ಮಾರ್ಚ್​ 7 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆ ಕಡೆಯ ದಿನಾಂಕ ಮಾರ್ಚ್​ 27 ಆಗಿದೆ.

ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು upsconline.nic.in. ಇಲ್ಲಿಗೆ ಭೇಟಿ ನೀಡಬಹುದು

ಇದನ್ನೂ ಓದಿ: Job Alert: ವಿಧಾನ ಪರಿಷತ್​​ನ ವಿವಿಧ ಹುದ್ದೆಗಳ ಭರ್ತಿಗೆ ಕೆಇಎ ಅಧಿಸೂಚನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.