ETV Bharat / entertainment

ಆರ್​. ಚಂದ್ರು ನಿರ್ಮಾಣದ 'ಫಾದರ್' ಸಿನಿಮಾಗೆ ಕರುನಾಡ ಚಕ್ರವರ್ತಿಯ ಸಪೋರ್ಟ್ - Father kannada movie

author img

By ETV Bharat Karnataka Team

Published : Apr 29, 2024, 1:35 PM IST

'ಫಾದರ್' ಸಿನಿಮಾ ತಂಡ
'ಫಾದರ್' ಸಿನಿಮಾ ತಂಡ

ಆರ್​ಸಿ ಸ್ಟುಡಿಯೋಸ್ ಸಂಸ್ಥೆಯ ಮೊದಲ ಹೆಜ್ಜೆಯಾಗಿ ಆರ್​. ಚಂದ್ರು ನಿರ್ಮಾಣದ ಫಾದರ್ ಚಿತ್ರ ಆರಂಭವಾಗಿದ್ದು, ನಟ ಶಿವರಾಜ್ ​ಕುಮಾರ್​ ದಂಪತಿ ಬೆಂಬಲ ನೀಡಿದ್ದಾರೆ.

ಕನ್ನಡ ಅಲ್ಲದೇ ದಕ್ಷಿಣ ಭಾರತದ ಸಿನಿಮಾ ಇಂಡಸ್ಟ್ರಿಯಲ್ಲಿ ತಮ್ಮದೇ ಚಿತ್ರಗಳ ಮೂಲಕ ಸದ್ದು ಮಾಡುತ್ತಿರುವ ನಿರ್ದೇಶಕ ಹಾಗೂ ನಿರ್ಮಾಪಕ ಅಂದರೆ ಅದು ಆರ್. ಚಂದ್ರು.

'ಫಾದರ್' ಸಿನಿಮಾ ತಂಡ
'ಫಾದರ್' ಸಿನಿಮಾ ತಂಡ

ಕೆಲವು ದಿನಗಳ ಹಿಂದೆ ಆರ್​ಸಿ ಸ್ಟುಡಿಯೋಸ್ ಎಂಬ ನಿರ್ಮಾಣ‌ ಸಂಸ್ಥೆ ಆರಂಭಿಸುವುದರ ಮೂಲಕ ಐದು ಸಿನಿಮಾಗಳನ್ನು ನಿರ್ಮಾಣ ಮಾಡುವುದಾಗಿ ಹೇಳಿದ್ದರು. ಆ ಪೈಕಿ ಮೊದಲ ಚಿತ್ರವಾಗಿ ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸುತ್ತಿರುವ ಫಾದರ್ ಚಿತ್ರ ನಿರ್ಮಾಣವಾಗುತ್ತಿದೆ. ಇತ್ತೀಚಿಗೆ ಈ ಚಿತ್ರದ ಮುಹೂರ್ತ ಸಮಾರಂಭ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನೆರವೇರಿತು.

'ಫಾದರ್' ಸಿನಿಮಾ ನಾಯಕ, ನಾಯಕಿ
'ಫಾದರ್' ಸಿನಿಮಾ ನಾಯಕ, ನಾಯಕಿ

ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್​ ಅವರು ಆರಂಭ ಫಲಕ ತೋರುವುದರ ಮೂಲಕ ಫಾದರ್ ಚಿತ್ರದ ಮೊದಲ ಸನ್ನಿವೇಶಕ್ಕೆ ಚಾಲನೆ ನೀಡಿದರು. ರಾಜಕೀಯ ಮುಖಂಡ ಎಚ್.ಎಂ.ರೇವಣ್ಣ, ಶಾಸಕ ಪ್ರದೀಪ್ ಈಶ್ವರ್, ನಿರ್ಮಾಪಕ ಕೆ.ಪಿ.ಶ್ರೀಕಾಂತ್, ಬಹದ್ದೂರ್ ಚೇತನ್ ಕುಮಾರ್, ಮಂಜುನಾಥ್, ಮಮತ ದೇವರಾಜ್, ಮಂಜುನಾಥ್ ಮುಂತಾದ ಗಣ್ಯರು ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಹಾರೈಯಿಸಿದರು.

ಬಳಿಕ ಮಾತನಾಡಿದ ನಟ ಶಿವರಾಜ್ ಕುಮಾರ್​, "ಆರ್ ಚಂದ್ರು ನನ್ನ ಆತ್ಮೀಯರು. ಸಿನಿಮಾವನ್ನು ಹೆಚ್ಚಾಗಿ ಪ್ರೀತಿಸುತ್ತಾರೆ. ಆರ್ ಸಿ ಸ್ಟುಡಿಯೋಸ್ ಮೂಲಕ ಮೊದಲ ಚಿತ್ರವಾಗಿ ಫಾದರ್ ಚಿತ್ರ ಆರಂಭಿಸಿದ್ದಾರೆ. ಚಂದ್ರು ಅವರಿಗೆ ಹಾಗೂ ಇಡೀ ಚಿತ್ರತಂಡಕ್ಕೆ ಶುಭವಾಗಲಿ ಎಂದು ಶಿವಣ್ಣ ಹಾರೈಯಿಸಿದರು.

ನಂತರ ನಿರ್ದೇಶಕ ಹಾಗೂ ನಿರ್ಮಾಪಕ ಆರ್. ಚಂದ್ರು ಮಾತು ಶುರುಮಾಡಿ, "ನನ್ನ ಚಾರ್ ಮಿನಾರ್ ಚಿತ್ರ ಆರಂಭವಾದಾಗಿನಿಂದ ಹಿಡಿದು ಈವರೆಗೂ ನನಗೆ ಶಿವಣ್ಣ ಹಾಗೂ ಗೀತಾ ಶಿವರಾಜ್ ಕುಮಾರ್ ಅವರು ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ. ಚುನಾವಣೆ ಸಮಯ. ಆದರೂ ಇಂದು ಇಲ್ಲಿಗೆ ಆಗಮಿಸಿ, ನಮ್ಮ ಫಾದರ್ ಚಿತ್ರಕ್ಕೆ ಚಾಲನೆ ನೀಡಿದ್ದಾರೆ. ಅವರಿಗೆ ಹಾಗೂ ಆಗಮಿಸಿರುವ ಎಲ್ಲ ಗಣ್ಯರಿಗೂ ಧನ್ಯವಾದ ತಿಳಿಸುತ್ತೇನೆ".

"ಕೆಲವು ದಿನಗಳ ಮುಂಚೆ ನಮ್ಮ ಆರ್​ಸಿ ಸ್ಟುಡಿಯೋಸ್ ಸಂಸ್ಥೆಯನ್ನು ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಉದ್ಘಾಟಿಸಿದ್ದರು. ಈ ಸಂಸ್ಥೆಯಿಂದ ಒಂದು ವರ್ಷದಲ್ಲಿ ಐದು ಸಿನಿಮಾಗಳನ್ನು ನಿರ್ಮಿಸುವುದಾಗಿ ಹೇಳಿದ್ದೆ. ಅದರ ಮೊದಲ ಹೆಜ್ಜೆಯಾಗಿ ಇಂದು ಫಾದರ್ ಚಿತ್ರ ಆರಂಭವಾಗಿದೆ. ಶಿವಣ್ಣ ಅವರ ಭೈರಾಗಿ ಚಿತ್ರಕ್ಕೆ ಸಹ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದ ರಾಜ್​​ ಮೋಹನ್​ ಈ ಚಿತ್ರದ ನಿರ್ದೇಶಕರು" ಅಂದರು.

ನಿರ್ದೇಶಕ ರಾಜ್ ಮೋಹನ್ ಮಾತನಾಡುತ್ತಾ, "ಇದೊಂದು ತಂದೆ ಮಗನ ಬಾಂಧವ್ಯದ ಚಿತ್ರ. ಕಥೆ ತುಂಬಾ ಚೆನ್ನಾಗಿದೆ. ನೋಡುಗನಿಗೆ ಬೇಕಾದ ಎಲ್ಲ ಅಂಶಗಳು ಫಾದರ್ ಚಿತ್ರದಲ್ಲಿದೆ ಎಂದರು. ನಟ ಡಾರ್ಲಿಂಗ್​ ಕೃಷ್ಣ ಮಾತನಾಡಿ ನಿರ್ದೇಶಕರು ಹೇಳಿದ ಕಥೆ ಮನಸ್ಸಿಗೆ ಹತ್ತಿರವಾಯಿತು. ಆರ್ ಚಂದ್ರು ಅವರ ಜೊತೆಗೆ ಇದು ನನ್ನ ಮೊದಲ ಚಿತ್ರ ಎಂದು ಅಭಿಪ್ರಾಯ ತಿಳಿಸಿದರು.

ಈ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ, ಅಮೃತ ಅಯ್ಯಂಗಾರ್ ಅಲ್ಲದೇ ಪ್ರಕಾಶ್ ರೈ, ಸುನೀಲ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಮುಂಬೈನ ಆನಂದ್ ಪಂಡಿತ್ ಅವರು ಈ ಚಿತ್ರವನ್ನು ಅರ್ಪಿಸುತ್ತಿದ್ದಾರೆ. ಹನುಮಾನ್ ಚಿತ್ರದ ಖ್ಯಾತಿಯ ಹರಿ ಸಂಗೀತ ನೀಡುತ್ತಿದ್ದಾರೆ. ಸದ್ಯ ಅದ್ಧೂರಿಯಾಗಿ ಶುರುವಾಗಿರೋ ಫಾದರ್ ಸಿನಿಮಾ ಸಹಜವಾಗಿ ಸಿನಿಮಾ ಪ್ರೇಮಿಗಳಲ್ಲಿ ಕುತೂಹಲ ಹುಟ್ಟಿಸಿದೆ.

ಇದನ್ನೂ ಓದಿ: 'ರಾಮನ ಅವತಾರ' ಚಿತ್ರದ ಟ್ರೇಲರ್ ಬಿಡುಗಡೆ; ಮೇ 10ರಂದು ರಾಜ್ಯಾದ್ಯಂತ ತೆರೆಗೆ - Ramana Avatara Trailer

ETV Bharat Logo

Copyright © 2024 Ushodaya Enterprises Pvt. Ltd., All Rights Reserved.