ETV Bharat / entertainment

'ಉತ್ತರಕಾಂಡ' ಮೂಲಕ ಸ್ಯಾಂಡಲ್​ವುಡ್​ಗೆ ಎಂಟ್ರಿ ಕೊಟ್ಟ ಐಶ್ವರ್ಯಾ ರಾಜೇಶ್ - Aishwarya Rajesh

author img

By ETV Bharat Karnataka Team

Published : Apr 23, 2024, 12:19 PM IST

ನಟರಾಕ್ಷಸ ಖ್ಯಾತಿಯ ಡಾಲಿ ಧನಂಜಯ್ ಮುಖ್ಯಭೂಮಿಕೆಯ 'ಉತ್ತರಕಾಂಡ' ಚಿತ್ರದಲ್ಲಿ ದಕ್ಷಿಣ ಭಾರತದ ಖ್ಯಾತ ನಟಿ ಐಶ್ವರ್ಯಾ ರಾಜೇಶ್ 'ದುರ್ಗಿ' ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

Aishwarya Rajesh
'ಉತ್ತರಕಾಂಡ' ಸಿನಿಮಾದಲ್ಲಿ ಐಶ್ವರ್ಯಾ ರಾಜೇಶ್

'ಉತ್ತರಕಾಂಡ' ಮುಹೂರ್ತದಿಂದ ಹಿಡಿದು ಸ್ಟಾರ್ ಕಾಸ್ಟ್ ವಿಚಾರವಾಗಿ ಸೌತ್ ಸಿನಿಮಾ ಇಂಡಸ್ಟ್ರಿಯಲ್ಲಿ ಸಖತ್ ಟಾಕ್ ಆಗುತ್ತಿರುವ ಚಿತ್ರ. ನಟರಾಕ್ಷಸ ಖ್ಯಾತಿಯ ಡಾಲಿ ಧನಂಜಯ್ ಅಭಿನಯಿಸುತ್ತಿರುವ ಈ ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಶಿವರಾಜ್​ಕುಮಾರ್, ದುನಿಯಾ ವಿಜಯ್, ದಿಗಂತ್, ನಿರ್ದೇಶಕ ಯೋಗರಾಜ್ ಭಟ್ ಸೇರಿದಂತೆ ಹೆಸರಾಂತ ತಾರೆಯರಿದ್ದಾರೆ. ಇದೀಗ ದಕ್ಷಿಣ ಭಾರತದ ಖ್ಯಾತ ನಟಿ ಐಶ್ವರ್ಯಾ ರಾಜೇಶ್ ಈ 'ಉತ್ತರಕಾಂಡ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕೊಟ್ಟಿದ್ದಾರೆ.

ಈಗಾಗಲೇ ಸಿನಿಪ್ರಿಯರ ಗಮನ ಸೆಳೆದಿರುವ 'ಉತ್ತರಕಾಂಡ' ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿರುವ ಧನಂಜಯ್ ಅವರ‌ ಜೋಡಿಯಾಗಿ ಐಶ್ವರ್ಯಾ ರಾಜೇಶ್​​ ಬಣ್ಣ ಹಚ್ಚುತ್ತಿದ್ದಾರೆ. ಚಿತ್ರದಲ್ಲಿ 'ದುರ್ಗಿ' ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ದಿ ಗ್ರೇಟ್ ಇಂಡಿಯನ್ ಕಿಚನ್, ದಿ ವರ್ಲ್ಡ್ ಫೇಮಸ್ ಲವರ್, ವಡಾ‌ ಚೆನ್ನೈ, ಕಾಕ ಮುತ್ತೈ (ರಾಷ್ಟ್ರ ಪ್ರಶಸ್ತಿ ವಿಜೇತ ಚಿತ್ರ), ಜೋಮೋಂಟೆ ಸುವಿಶೇಷಂಗಳ್, ಟಕ್ ಜಗದೀಶ್ ವಾನಂ ಕೊಟ್ಟಾಟುಂ ಸೇರಿದಂತೆ ಹಲವಾರು ಯಶಸ್ವಿ ಚಿತ್ರಗಳಲ್ಲಿ ನಟಿಸಿರುವ ಐಶ್ವರ್ಯಾ ತಮ್ಮ ಉತ್ತಮ ಅಭಿನಯದ ಮೂಲಕ ದಕ್ಷಿಣ ಚಿತ್ರರಂಗದಲ್ಲಿ ಛಾಪು ಮೂಡಿಸಿದ್ದಾರೆ. ‌ಇದೀಗ ಕನ್ನಡದ ಉತ್ತರಕಾಂಡಕ್ಕೆ ಎಂಟ್ರಿ ನೀಡಿದ್ದಾರೆ.

'Uttarakanda' Movie
'ಉತ್ತರಕಾಂಡ' ಸಿನಿಮಾ

ಪ್ರಸ್ತುತ ಪ್ರಥಮ ಶೆಡ್ಯೂಲ್​ನ ಚಿತ್ರೀಕರಣ ವಿಜಯಪುರದಲ್ಲಿ ನಡೆಯುತ್ತಿದೆ. ಈ ಆ್ಯಕ್ಷನ್ ಡ್ರಾಮಾಗೆ ರೋಹಿತ್ ಪದಕಿ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಚಿತ್ರದಲ್ಲಿ ಧನಂಜಯ್‌ ಜೊತೆಗೆ ಶಿವಣ್ಣ ಸೇರಿದಂತೆ ಮಲಯಾಳಂ ನಟ ವಿಜಯ್ ಬಾಬು, ರಂಗಾಯಣ ರಘು, ಚೈತ್ರ ಜೆ ಆಚಾರ್, ಉಮಾಶ್ರೀ, ಯೋಗರಾಜ್ ಭಟ್, ದಿಗಂತ್ ಮಂಚಾಲೆ, ಗೋಪಾಲಕೃಷ್ಣ ದೇಶಪಾಂಡೆ ಸೇರಿದಂತೆ ಬಹು ದೊಡ್ಡ ತಾರಾಬಳಗವಿದೆ.

'Uttarakanda' Movie
'ಉತ್ತರಕಾಂಡ' ಸಿನಿಮಾ

ಇದನ್ನೂ ಓದಿ: ಮುದ್ದಿನ ಮಡದಿ ಜೊತೆಗಿನ ರೋಮ್ಯಾಂಟಿಕ್​ ಡೇಟ್ ​ವೇಳೆ ಪ್ಯಾಪಾರಾಜಿಗಳ ಮುಂದೆ ತಾಳ್ಮೆ ಕಳೆದುಕೊಂಡ ನಟ ಶಾಹೀದ್​ ಕಪೂರ್​​ - Shahid Loses Cool at Paparazzi

ಚಿತ್ರವನ್ನು ಕಾರ್ತಿಕ್ ಗೌಡ ಮತ್ತು ಯೋಗಿ‌ ಜಿ ರಾಜ್ ಕೆ.ಆರ್.ಜಿ ಸ್ಟುಡಿಯೋಸ್‌ ಬ್ಯಾನರ್ ಅಡಿಯಲ್ಲಿ ನಿರ್ಮಿಸುತ್ತಿದ್ದಾರೆ. ಬಾಲಿವುಡ್ ಗಾಯಕ ಹಾಗೂ ಸಂಗೀತ ಸಂಯೋಜಕ ಅಮಿತ್ ತ್ರಿವೇದಿ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಅದ್ವೈತ ಗುರುಮೂರ್ತಿ ಮುಖ್ಯ ಛಾಯಾಗ್ರಾಹಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಶ್ವಾಸ್‌ ಕಶ್ಯಪ್ ಪ್ರೊಡಕ್ಷನ್ ವಿನ್ಯಾಸ ಮಾಡಿರುತ್ತಾರೆ.

'Uttarakanda' Movie
'ಉತ್ತರಕಾಂಡ' ಸಿನಿಮಾ

ಇದನ್ನೂ ಓದಿ: ಟಿಪಿಎಲ್ ಆಯ್ತು ಈಗ IPT12ಗೆ ಚಾಲನೆ ಕೊಟ್ಟ ಬಿಗ್ ಬಾಸ್ ಖ್ಯಾತಿಯ ತನಿಷಾ ಕುಪ್ಪಂಡ: ಇದರ ವಿಶೇಷತೆ ಏನ್​ ಗೊತ್ತಾ? - IPT12 Cricket Tournament

ಡಾಲಿ ಧನಂಜಯ್ ಕನ್ನಡ ಚಿತ್ರರಂಗದಲ್ಲಿ ಬೇಡಿಕೆ ಹೊಂದಿರುವ ನಟ. ನಟನೆ ಮಾತ್ರವಲ್ಲದೇ ನಿರ್ಮಾಣದಲ್ಲೂ ತೊಡಗಿಸಿಕೊಂಡಿದ್ದಾರೆ. ಈವರೆಗೆ ಬಂದಿರುವ ಅವರ ಸಿನಿಮಾಗಳು ಸಿನಿಪ್ರಿಯರ ಗಮನ ಸೆಳೆಯುವಲ್ಲಿ ಯಶಸ್ಸು ಕಂಡಿವೆ. ಹಾಗಾಗಿ ಅವರ ಮುಂದಿನ ಸಿನಿಮಾಗಳ ಮೇಲೆ ಸಿನಿಪ್ರಿಯರು ಸಾಕಷ್ಟು ನಿರೀಕ್ಷೆಗಳನ್ನಿಟ್ಟುಕೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.