ETV Bharat / entertainment

ಪುಸ್ತಕ ರೂಪ ಪಡೆದ ಡೇರ್ ಡೆವಿಲ್‌ ಮುಸ್ತಾಫಾ ಸಿನಿಮಾ - Daredevil Mustafa book

author img

By ETV Bharat Karnataka Team

Published : May 22, 2024, 6:23 PM IST

ಶಶಾಂಕ ಸೋಗಾಲ್ ನಿರ್ದೇಶನದಲ್ಲಿ ಮೂಡಿಬಂದಿದ್ದ ಡೇರ್ ಡೆವಿಲ್ ಮುಸ್ತಾಫಾ ಚಿತ್ರವೀಗ ಪುಸ್ತಕ ರೂಪ ಪಡೆದಿದೆ.

ಪುಸ್ತಕ ರೂಪ ಪಡೆದ ಡೇರ್ ಡೆವಿಲ್‌ ಮುಸ್ತಾಫಾ ಸಿನಿಮಾ
ಪುಸ್ತಕ ರೂಪ ಪಡೆದ ಡೇರ್ ಡೆವಿಲ್‌ ಮುಸ್ತಾಫಾ ಸಿನಿಮಾ (ETV Bharat)

ಕೆ. ಪಿ. ಪೂರ್ಣಚಂದ್ರ ತೇಜಸ್ವಿ ಅವರ ಸಣ್ಣ ಕಥೆ ಆಧಾರಿತ ಸಿನಿಮಾ ಡೇರ್ ಡೆವಿಲ್ ಮುಸ್ತಾಫಾ. ಕಳೆದ ವರ್ಷ ಬಿಡುಗಡೆಯಾಗಿದ್ದ ಈ ಚಿತ್ರ ಪ್ರೇಕ್ಷಕರ ಮೆಚ್ಚುಗೆ ಪಡೆದಿತ್ತು. ಶಶಾಂಕ ಸೋಗಾಲ್ ನಿರ್ದೇಶನದಲ್ಲಿ ಮೂಡಿಬಂದಿದ್ದ ಡೇರ್ ಡೆವಿಲ್ ಮುಸ್ತಾಫಾ ಚಿತ್ರವೀಗ ಪುಸ್ತಕ ರೂಪ ಪಡೆದಿದೆ. ಹೌದು, ಡೇರ್ ಡೆವಿಲ್ ಮುಸ್ತಾಫಾ ಸಿನಿಮಾಗೆ ಒಂದು ವರ್ಷ ಪೂರೈಸಿದೆ. ಈ ಹಿನ್ನೆಲೆಯಲ್ಲಿ ನಿರ್ದೇಶಕ ಶಶಾಂಕ್ ಸೋಗಾಲ್ ಚಿತ್ರಕಥೆ ಹಾಗೂ ಆಯ್ದ ವಿಮರ್ಶೆಗಳನ್ನು ಪುಸ್ತಕ ರೂಪಕ್ಕೆ ಇಳಿಸಿದ್ದಾರೆ. ಇತ್ತೀಚೆಗಷ್ಟೇ ಬೆಂಗಳೂರಿನ ಸುಚಿತ್ರ ಮತ್ತು ಸಾಂಸ್ಕೃತಿಕ ಅಕಾಡೆಮಿಯಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಿತು. ನಿರ್ದೇಶಕಿ ಹಾಗೂ ನಟಿ ಸಿಂಧು ಎಸ್ ಮೂರ್ತಿ, ನಿರ್ದೇಶಕರಾದ ಅನೂಪ್ ಭಂಡಾರಿ, ನಿತಿನ್ ಕೃಷ್ಣಮೂರ್ತಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

ಪುಸ್ತಕ ರೂಪ ಪಡೆದ ಡೇರ್ ಡೆವಿಲ್‌ ಮುಸ್ತಾಫಾ ಸಿನಿಮಾ
ಪುಸ್ತಕ ರೂಪ ಪಡೆದ ಡೇರ್ ಡೆವಿಲ್‌ ಮುಸ್ತಾಫಾ ಸಿನಿಮಾ (ETV Bharat)

ಪುಸ್ತಕದ ವಿಶೇಷತೆಗಳೇನು? : ಕನ್ನಡದಲ್ಲಿ ಸಿನಿಮಾ ಕುರಿತ ಕೃತಿಗಳು ಕಡಿಮೆ. ಅದರಲ್ಲಿಯೂ ಕೆಲವೇ ಕೆಲವು ಚಿತ್ರಕಥೆಯ ಪುಸ್ತಕಗಳಿವೆ. ಆ ಸಾಲಿಗೀಗ ಡೇರ್ ಡೆವಿಲ್ ಮುಸ್ತಾಫಾ ಸಿನಿಮಾ ಕೂಡಾ ಸೇರ್ಪಡೆಯಾಗಿದೆ. ಈ ಪುಸ್ತಕದಲ್ಲಿ ಕಾಲೇಜು ದಿನಗಳನ್ನು ಮೆಲುಕು ಹಾಕುವಂತಹ ಸನ್ನಿವೇಶವಿದೆ. ಸಹಪಾಠಿಗಳ ನಡುವೆ ನಡೆಯುವ ಸಣ್ಣಪುಟ್ಟ ಜಗಳ, ಧರ್ಮಕ್ಕೂ ಮಿಗಿಲಾದ ಫ್ರೆಂಡ್ ಶಿಪ್ ಎಂಬ ಸಾರಾಂಶವನ್ನು ಸಮಾಜಕ್ಕೆ ಸಾರುವಂತಹ ವಿಷಯದ ಜೊತೆಗೆ ಸಿನಿಮಾ ಆಸಕ್ತರಿಗೆ ಪಠ್ಯವಾಗಬಲ್ಲ ಪುಸ್ತಕ ಅಂದರು ತಪ್ಪಿಲ್ಲ. ಒಂದು ಸಣ್ಣ ಕಥೆ ಎತ್ತಿಕೊಂಡು ಸ್ಕ್ರೀನ್ ಪ್ಲೇ, ಕಥೆ ಡೈಲಾಗ್ ಬರೆದು ದೃಶ್ಯ ರೂಪಕ್ಕೆ ಹೇಗೆ ಇಳಿಸಲಾಯಿತು?. ಸಣ್ಣ ಕಥೆ ಚಿತ್ರ ಕಥೆ ಆಗಿದ್ದೇಗೆ? ಕಥೆ ಸಿನಿಮಾವಾಗಿದ್ದೇಗೆ ಎಂಬ ವಿಷಯಗಳು ಈ ಪುಸ್ತಕ ಓದಿದರೆ ತಿಳಿಯುತ್ತದೆ.

ಡೇರ್ ಡೆವಿಲ್‌ ಮುಸ್ತಾಫಾ ಪುಸ್ತಕ
ಡೇರ್ ಡೆವಿಲ್‌ ಮುಸ್ತಾಫಾ ಪುಸ್ತಕ (ETV Bharat)

ಇನ್ನು, ಸಿನಿಮಾ ಮಾಧ್ಯಮದ ವಿದ್ಯಾರ್ಥಿಗಳಿಗೆ ಉಪಯುಕ್ತವಾಗುವ ಪುಸ್ತಕಗಳ ಕೊರತೆ ಇದೆ.‌ ಅದರಲ್ಲಿಯೂ ಇಂಗ್ಲಿಷ್ ಭಾಷೆಯಲ್ಲಿ ಕಥೆ ಬರೆದು ಸಿನಿಮಾ ಮಾಡುವವರು ಹೆಚ್ಚಿರುವಾಗ ಕನ್ನಡದಲ್ಲಿ ಸ್ಕ್ರಿಪ್ಟ್ ಬರೆದು ಸಿನಿಮಾ ಮಾಡಿದ್ದೇವೆ ಅನ್ನೋದನ್ನು ಡೇರ್ ಡೆವಿಲ್ ಮುಸ್ತಾಫಾ ಪುಸ್ತಕದಲ್ಲಿ ಕಟ್ಟಿಕೊಡಲಾಗಿದೆ. ಕನ್ನಡದ ಸದ್ಯದ ಸಿನಿಮಾರಂಗ ಇರುವ ಪರಿಸ್ಥಿತಿಯಲ್ಲಿ ಸಿನಿಮಾ ಸೂಕ್ಷ್ಮಗಳ ಬಗ್ಗೆ ಅರಿವು ಹುಟ್ಟಿಸಬಲ್ಲ ಇಂಥ ಕೃತಿಗಳ ಅಗತ್ಯ ಖಂಡಿತ ಇದೆ.

ಇದನ್ನೂ ಓದಿ: 'ಪುಷ್ಪ 2' ಎರಡನೇ ಸಿಂಗಲ್​ ವಿಡಿಯೋಗೆ ಮುಹೂರ್ತ ಫಿಕ್ಸ್​; ಬ್ಲಾಸ್ಟ್​ ಸಾಂಗ್​ನಲ್ಲಿ ನಟಿ ರಶ್ಮಿಕಾ ಮಂದಣ್ಣ - Pushpa 2 Rashmika Mandanna Song

ETV Bharat Logo

Copyright © 2024 Ushodaya Enterprises Pvt. Ltd., All Rights Reserved.