ETV Bharat / entertainment

ಪವನ್ ಒಡೆಯರ್ ನಿರ್ಮಾಣದ ಚಿತ್ರದಲ್ಲಿ ನಟನೆಯೊಂದಿಗೆ ನಿರ್ದೇಶನಕ್ಕಿಳಿದ ಸಾಗರ್ ಪುರಾಣಿಕ್

author img

By ETV Bharat Karnataka Team

Published : Mar 19, 2024, 12:33 PM IST

Venkya: ಡೊಳ್ಳು ಚಿತ್ರದ ನಿರ್ದೇಶಕ-ನಿರ್ಮಾಪಕ ಜೋಡಿಯಾಗಿರುವ ಸಾಗರ್ ಪುರಾಣಿಕ್ ಹಾಗೂ ಪವನ್ ಒಡೆಯರ್ ಅವರ ಮತ್ತೊಂದು ಸಿನಿಮಾ 'ವೆಂಕ್ಯಾ'ದ ಮುಹೂರ್ತ ಸಮಾರಂಭ ನೆರವೇರಿದೆ.

Venkya Muhurta program
'ವೆಂಕ್ಯಾ' ಮುಹೂರ್ತ ಸಮಾರಂಭ

ಕನ್ನಡ ಚಿತ್ರರಂಗದಲ್ಲಿ ರಾಕಿಂಗ್​ ಸ್ಟಾರ್​ ಯಶ್, ಪವರ್ ಸ್ಟಾರ್ ದಿ.ಪುನೀತ್ ರಾಜ್​ಕುಮಾರ್ ಅವರಂತಹ ಸ್ಟಾರ್ ನಟರ ಸಿನಿಮಾಗಳನ್ನು ನಿರ್ದೇಶಿಸಿ ಸೈ ಎನಿಸಿಕೊಂಡವರು ಪವನ್ ಒಡೆಯರ್. ನಿರ್ದೇಶನದಲ್ಲಿ ಗೆದ್ದಿರುವ ಪವನ್ ನಿರ್ಮಾಪಕರಾಗಿಯೂ ಮೊದಲ ಹೆಜ್ಜೆಯಲ್ಲೇ ಯಶ ಕಂಡವರು. 'ಡೊಳ್ಳು' ಸಿನಿಮಾ ಮೂಲಕ ನಿರ್ಮಾಣಕ್ಕಿಳಿದು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲೂ ಪ್ರಶಸ್ತಿಗಳನ್ನು ಬಾಚಿಕೊಂಡಿದ್ದ ಪವನ್ ಒಡೆಯರ್ ಮತ್ತೊಮ್ಮೆ ಸಾಗರ್ ಪುರಾಣಿಕ್ ಜೊತೆ ಕೈ ಜೋಡಿಸಿರುವುದು ಗೊತ್ತೇ ಇದೆ.

'ವೆಂಕ್ಯಾ' ಮುಹೂರ್ತ ಸಮಾರಂಭ: 'ಡೊಳ್ಳು' ಸಾರಥಿ ಸಾಗರ್ ಪುರಾಣಿಕ್ ಮತ್ತು ಪವನ್ ಒಡೆಯರ್ ಕಾಂಬಿನೇಶನ್​ನ ಮತ್ತೊಂದು ಸಿನಿಮಾ ಸೆಟ್ಟೇರಿದೆ. ಹುಬ್ಬಳ್ಳಿಯ ಸಿದ್ಧಾರೂಢ ಮಠದಲ್ಲಿ ಇತ್ತೀಚೆಗೆ ಮುಹೂರ್ತ ನೆರವೇರಿದೆ. ಚಿತ್ರಕ್ಕೆ 'ವೆಂಕ್ಯಾ' ಎಂಬ ಶೀರ್ಷಿಕೆ ಇಡಲಾಗಿದೆ. 'ವೆಂಕ್ಯಾ'ನಿಗೆ ಸಾಗರ್ ಪುರಾಣಿಕ್ ಆ್ಯಕ್ಷನ್ ಕಟ್ ಹೇಳುವುದರ ಜೊತೆಗೆ ನಾಯಕನಾಗಿಯೂ ಮೊದಲ ಹೆಜ್ಜೆ ಇಟ್ಟಿದ್ದಾರೆ. ಹೌದು, ಇಲ್ಲಿ ನಿರ್ದೇಶನದ ಜೊತೆಗೆ ಸಾಗರ್ ನಟನೆಯ ಜವಾಬ್ದಾರಿಯನ್ನೂ ಹೊತ್ತುಕೊಂಡಿದ್ದಾರೆ.

ಉತ್ತರ ಕರ್ನಾಟಕದ ಕಥೆ: 'ವೆಂಕ್ಯಾ' ಶೂಟಿಂಗ್ ಈಗಾಗಲೇ ಶುರುವಾಗಿದೆ. ಇದೊಂದು ವಿಭಿನ್ನ ಪ್ರಯತ್ನ. ಉತ್ತರ ಕರ್ನಾಟಕದ ಕಥೆಯಾದರೂ ಅದು ದೇಶ ಸುತ್ತುತ್ತದೆ. ನಮ್ಮದು ಹೊಸ ಬಗೆಯ ಕಮರ್ಷಿಯಲ್ ಸಿನಿಮಾ ಅಂತಿದೆ ಚಿತ್ರತಂಡ. ಶೀಘ್ರದಲ್ಲೇ ಉಳಿದ ತಾರಾ ಬಳಗ ಹಾಗೂ ತಾಂತ್ರಿಕ ವರ್ಗದ ಬಗ್ಗೆ ಚಿತ್ರತಂಡದ ಮಾಹಿತಿ ಸಿಗಲಿದೆ. ಅಪೇಕ್ಷಾ ಒಡೆಯರ್ ಮತ್ತು ಪವನ್ ಒಡೆಯರ್ ಹಣ ಹೂಡುತ್ತಿರುವ 'ವೆಂಕ್ಯಾ'ಗೆ ಸ್ನೇಹಿತರಾದ ಅವಿನಾಶ್ ವಿ.ರೈ ಮತ್ತು ಮೋಹನ್ ಲಾಲ್ ಮೆನನ್ ಅವರ ಸಹ ನಿರ್ಮಾಣವಿರಲಿದೆ.

Sagar Puranik
ಸಾಗರ್ ಪುರಾಣಿಕ್

ಇದನ್ನೂ ಓದಿ: ನಟ ರಮೇಶ್ ಅರವಿಂದ್​ಗೆ 'ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ'

'ಡೊಳ್ಳು' ತಂಡದಿಂದ 'ವೆಂಕ್ಯಾ': 'ಡೊಳ್ಳು' 2021ರಲ್ಲಿ ತೆರೆ ಕಂಡ ಚಿತ್ರ. ಕನ್ನಡ ಚಿತ್ರರಂಗದಲ್ಲಿ ಬಿಗ್​ ಬಜೆಟ್​, ಸೂಪರ್​ ಸ್ಟಾರ್​ಗಳ ಸಿನಿಮಾಗಳ ಜೊತೆ ಜೊತೆಗೆ ಕಂಟೆಂಟ್​ ಆಧಾರಿತ ಚಿತ್ರಗಳೂ ಗೆದ್ದು ಬೀಗಿವೆ. ಅಪೇಕ್ಷಾ ಒಡೆಯರ್ ಮತ್ತು ಪವನ್ ಒಡೆಯರ್ ತಮ್ಮ ಒಡೆಯರ್ ಮೂವೀಸ್​ ಸಂಸ್ಥೆಯಡಿ ಈ ಚಿತ್ರ ನಿರ್ಮಾಣ ಮಾಡಿದ್ದರು. ಒಡೆಯರ್ ನಿರ್ಮಾಣದ ಈ ಚೊಚ್ಚಲ ಚಿತ್ರ ಈಗಾಗಲೇ ಪ್ರಪಂಚ ಸುತ್ತುವರಿದಿದೆ. ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಭಾಗಿಯಾಗಿ ಕನ್ನಡದ ಕಂಪು ಪಸರಿಸಿದೆ. ಎರಡು ರಾಷ್ಟ್ರಪ್ರಶಸ್ತಿಗಳನ್ನೂ ಮುಡಿಗೇರಿಸಿಕೊಂಡಿದೆ. ಇದೇ ತಂಡ ಮತ್ತೊಂದು ಪ್ರಯತ್ನಕ್ಕೆ ಕೈ ಹಾಕಿದ್ದು ಶೀಘ್ರದಲ್ಲೇ ಹೆಚ್ಚಿನ ಮಾಹಿತಿ ದೊರೆಯಲಿದೆ.

ಇದನ್ನೂ ಓದಿ: ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆಗೆ ರಸ್ತೆಯಲ್ಲಿ ಒಬ್ಬ ಮಹಿಳೆಯೂ ಇಲ್ಲ: ಪುರುಷ ಪ್ರಧಾನ ವ್ಯವಸ್ಥೆ ಬಗ್ಗೆ ಸಿದ್ಧಾರ್ಥ್​ ಟೀಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.