Health Benefits of Cloves: ಮಸಾಲೆ ಪದಾರ್ಥಗಳಲ್ಲಿ ಒಂದಾದ ಲವಂಗವು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಲವಂಗದಲ್ಲಿ ಉರಿಯೂತ ನಿವಾರಕ, ಉತ್ಕರ್ಷಣ ನಿರೋಧಕ ಗುಣಗಳು ಹೇರಳವಾಗಿವೆ. ಜೀವಸತ್ವಗಳು, ಖನಿಜಗಳು ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಗುಣಗಳನ್ನು ಹೊಂದಿದೆ. ಹಾರ್ವರ್ಡ್ ಹೆಲ್ತ್ ಪಬ್ಲಿಷಿಂಗ್‌ನಲ್ಲಿ ಪ್ರಕಟವಾದ ಅಧ್ಯಯನದಲ್ಲಿ, ಲವಂಗವು ಇತರ ಆಹಾರಗಳಿಗಿಂತ ಮೂರು ಪಟ್ಟು ಹೆಚ್ಚು ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತದೆ. ಇದಕ್ಕಾಗಿ ಲವಂಗವನ್ನು 1,100ಕ್ಕೂ ಹೆಚ್ಚು ಇತರ ಆಹಾರ ಪದಾರ್ಥಗಳೊಂದಿಗೆ ಹೋಲಿಸಲಾಗಿದೆ ಎಂಬುದು ತಿಳಿದಿದೆ. ಲವಂಗದಿಂದ ದೊರೆಯುವ ಆರೋಗ್ಯದ ಪ್ರಯೋಜನಗಳ ಬಗ್ಗೆ ತಿಳಿದುಕೊಳ್ಳೋಣ.
ಲವಂಗವು ಉರಿಯೂತ ನಿವಾರಕ ಗುಣಗಳನ್ನು ಹೊಂದಿದೆ. ಸಂಧಿವಾತದಂತಹ ಸಮಸ್ಯೆಗಳಿಂದ ಉಂಟಾಗುವ ಉರಿಯೂತ ಕಡಿಮೆ ಮಾಡುತ್ತದೆ. ಲವಂಗದಲ್ಲಿರುವ ಯುಜೆನಾಲ್‌ನ ಹೆಚ್ಚಿನ ಅಂಶವು ಮಧುಮೇಹ, ಹೃದ್ರೋಗ ಮತ್ತು ಕ್ಯಾನ್ಸರ್‌ನಂತಹ ಗಂಭೀರ ಕಾಯಿಲೆಗಳನ್ನು ತಡೆಯಲು ಸಹಾಯ ಮಾಡುತ್ತದೆ. ಇವುಗಳನ್ನು ದೈನಂದಿನ ಆಹಾರದ ಭಾಗವಾಗಿ ಸೇರಿಸುವುದರಿಂದ ಉತ್ತಮ ಆರೋಗ್ಯ ಫಲಿತಾಂಶಗಳನ್ನು ಪಡೆಯಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.

ರೋಗನಿರೋಧಕ ಶಕ್ತಿ ವೃದ್ಧಿ: ಲವಂಗದಲ್ಲಿ ಹೆಚ್ಚಿನ ಪ್ರಮಾಣದ ವಿಟಮಿನ್ ಸಿ ಇರುತ್ತದೆ. ಇದು ರೋಗನಿರೋಧಕ ಶಕ್ತಿ ಹೆಚ್ಚಿಸಲು ಸಹಾಯ ಮಾಡುತ್ತದೆ. ಇದರೊಂದಿಗೆ ದೇಹವನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಸೋಂಕುಗಳ ವಿರುದ್ಧ ಹೋರಾಡಲು ಹಾಗೂ ಉರಿಯೂತ ಕಡಿಮೆ ಮಾಡಲು ಉಪಯುಕ್ತವಾಗಿದೆ. ಪ್ರತಿದಿನ ಬೆಳಗ್ಗೆ ಅಥವಾ ಸಂಜೆ ಲವಂಗದೊಂದಿಗೆ ಕುದಿಸಿದ ನೀರನ್ನು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು.
ಬಾಯಿಯ ಆರೋಗ್ಯಕ್ಕೆ ಒಳ್ಳೆಯದು: ಲವಂಗವು ಬ್ಯಾಕ್ಟೀರಿಯಾ ವಿರೋಧಿ ಹಾಗೂ ಶಿಲೀಂಧ್ರನಾಶಕ ಗುಣಗಳನ್ನು ಹೊಂದಿದೆ. ಇವು ಬಾಯಿಯ ಆರೋಗ್ಯವನ್ನು ಸುಧಾರಿಸುತ್ತದೆ. ಲವಂಗವನ್ನು ನಿಯಮಿತವಾಗಿ ತಿನ್ನುವುದರಿಂದ ಹಲ್ಲುನೋವು ನಿವಾರಣೆಯಾಗುತ್ತದೆ. ಲವಂಗವು ಒಸಡು ನೋವನ್ನು ಕಡಿಮೆ ಮಾಡುವುದಲ್ಲದೇ, ಬಾಯಿಯ ದುರ್ವಾಸನೆ ತಡೆಯುತ್ತದೆ. ಇದು ಬಾಯಿಯಲ್ಲಿರುವ ಬ್ಯಾಕ್ಟೀರಿಯಾಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ ಎಂದು ತಜ್ಞರು ವಿವರಿಸಲಾಗಿದೆ.

ಜೀರ್ಣಕ್ರಿಯೆಗೆ ಅತ್ಯುತ್ತಮ: ಲವಂಗವು ಜೀರ್ಣಕ್ರಿಯೆಯನ್ನು ಉತ್ತೇಜಿಸುವ ನೈಸರ್ಗಿಕ ಜೀರ್ಣಕಾರಿ ಗುಣಗಳನ್ನು ಹೊಂದಿದೆ. ಲವಂಗ ತಿಂದ ಆಹಾರವನ್ನು ಜೀರ್ಣಿಸಿಕೊಳ್ಳಲು ಅಗತ್ಯವಾದ ಕಿಣ್ವಗಳ ಉತ್ಪಾದನೆಯನ್ನು ಉತ್ತೇಜಿಸುತ್ತದೆ. ಜೀರ್ಣಾಂಗ ವ್ಯವಸ್ಥೆಯ ಕಾರ್ಯನಿರ್ವಹಣೆ ಸುಧಾರಿಸುತ್ತದೆ. ಬಿಎಂಸಿ ಕಾಂಪ್ಲಿಮೆಂಟರಿ ಮೆಡಿಸಿನ್ ಅಂಡ್ ಥೆರಪಿಸ್ ಜರ್ನಲ್‌ನಲ್ಲಿ ಪ್ರಕಟವಾದ ಅಧ್ಯಯನವು ಪ್ರತಿದಿನ ಲವಂಗವನ್ನು ಸೇವಿಸುವುದರಿಂದ ವಿವಿಧ ಜೀರ್ಣಕಾರಿ ಸಮಸ್ಯೆಗಳಿಗೆ ಚಿಕಿತ್ಸೆ ನೀಡಬಹುದು ಹಾಗೂ ಜೀರ್ಣಕ್ರಿಯೆ ಸುಗಮಗೊಳಿಸಬಹುದು ಎಂದು ತಿಳಿದಿದೆ.
ಶುಗರ್ ನಿಯಂತ್ರಣಕ್ಕೆ ಉತ್ತಮ: ಡಯಾಬಿಟಿಸ್ ರಿಸರ್ಚ್ ಜರ್ನಲ್‌ನಲ್ಲಿ ಪ್ರಕಟವಾದ ಅಧ್ಯಯನವು, ಲವಂಗದಲ್ಲಿರುವ ಯುಜೆನಾಲ್ ಮತ್ತು ಫ್ಲೇವನಾಯ್ಡ್‌ಗಳಂತಹ ಸಂಯುಕ್ತಗಳು ಇನ್ಸುಲಿನ್ ಸೂಕ್ಷ್ಮತೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಇವು ಗ್ಲೂಕೋಸ್ ಹೀರಿಕೊಳ್ಳುವಿಕೆ ಕಡಿಮೆ ಮಾಡಲು ಹಾಗೂ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಮಧುಮೇಹ ಇರುವವರು ಪ್ರತಿದಿನ ಲವಂಗ ಸೇವನೆ ಮಾಡುವುದು ಆರೋಗ್ಯಕ್ಕೆ ಒಳ್ಳೆಯದು ಎಂದು NIH ವಿಜ್ಞಾನಿಗಳು ವಿವರಿಸುತ್ತಾರೆ.
ಯಕೃತ್ತಿನ ಕಾರ್ಯ ಸುಧಾರಣೆ: ಲವಂಗದಲ್ಲಿರುವ ಯುಜೆನಾಲ್ ಯಕೃತ್ತಿನಲ್ಲಿ ಸಂಗ್ರಹವಾಗಿರುವ ಕೊಬ್ಬು ಹಾಗೂ ವಿಷವನ್ನು ತೆಗೆದುಹಾಕುವ ಮೂಲಕ ಯಕೃತ್ತಿನ ಕಾರ್ಯವನ್ನು ಸುಧಾರಿಸುತ್ತದೆ. ಲವಂಗ ಯಕೃತ್ತನ್ನು ಆಕ್ಸಿಡೇಟಿವ್ ಹಾನಿಯಿಂದ ರಕ್ಷಿಸುತ್ತವೆ ಎಂದು NIH ಅಧ್ಯಯನದಲ್ಲಿ ಕಂಡುಹಿಡಿದಿದೆ ಎಂದು ಆರೋಗ್ಯ ತಜ್ಞರು ತಿಳಿಸುತ್ತಾರೆ.

ಹೃದಯದ ಆರೋಗ್ಯಕ್ಕೆ ಒಳ್ಳೆಯದು: ಲವಂಗವು ನಿಯಮಿತವಾಗಿ ಸೇವಿಸುವುದರಿಂದ ಹೃದಯದ ಆರೋಗ್ಯ ಸುಧಾರಿಸುತ್ತದೆ. ಜೊತೆಗೆ ಇದು ಹೃದಯ ಕಾಯಿಲೆಯಿಂದ ರಕ್ಷಿಸುತ್ತದೆ. ಇದು ಕೊಲೆಸ್ಟ್ರಾಲ್ ಮಟ್ಟ ಕಡಿಮೆ ಮಾಡಲು ಹಾಗೂ ಆರೋಗ್ಯಕರ ರಕ್ತ ಪರಿಚಲನೆ ಉತ್ತೇಜಿಸಲು ಸಹಾಯ ಮಾಡುತ್ತದೆ ಎಂದು ಆರೋಗ್ಯ ತಜ್ಞರು ತಿಳಿಸುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಈ ವೆಬ್ಸೈಟ್ಗಳನ್ನು ವೀಕ್ಷಿಸಬಹುದು:
- https://www.health.harvard.edu/blog/spice-up-your-holidays-with-brain-healthy-seasonings-2016120710734
- https://pmc.ncbi.nlm.nih.gov/articles/PMC6503551/
- https://pmc.ncbi.nlm.nih.gov/articles/PMC4285960/
ಓದುಗರಿಗೆ ಪ್ರಮುಖ ಸೂಚನೆ: ಈ ವರದಿಯಲ್ಲಿ ನಿಮಗೆ ನೀಡಲಾದ ಎಲ್ಲ ಆರೋಗ್ಯ ಸಂಬಂಧಿತ ಮಾಹಿತಿ ಹಾಗೂ ಸಲಹೆಗಳನ್ನು ಸಾಮಾನ್ಯ ಮಾಹಿತಿಗಾಗಿ ಮಾತ್ರ ನೀಡಲಾಗಿದೆ. ನಾವು ಈ ಮಾಹಿತಿಯನ್ನು ವೈಜ್ಞಾನಿಕ ಸಂಶೋಧನೆ, ಅಧ್ಯಯನಗಳು, ವೈದ್ಯಕೀಯ ಮತ್ತು ಆರೋಗ್ಯ ವೃತ್ತಿಪರ ಸಲಹೆಯ ಆಧಾರದ ಮೇಲೆ ಒದಗಿಸುತ್ತಿದ್ದೇವೆ. ನೀವು ಈ ಬಗ್ಗೆ ವಿವರವಾಗಿ ತಿಳಿದುಕೊಳ್ಳಬೇಕು. ಮತ್ತು ಈ ವಿಧಾನ ಅಥವಾ ಕಾರ್ಯವಿಧಾನವನ್ನು ಅಳವಡಿಸಿಕೊಳ್ಳಬೇಕು ಎಂದಾದಲ್ಲಿ ನುರಿತ ಪರಿಣತ ವೈದ್ಯರನ್ನು ಸಂಪರ್ಕಿಸುವುದು ಉತ್ತಮ.