How to Prevent Heart Attack: ಪ್ರಸ್ತುತ ಬದಲಾಗುತ್ತಿರುವ ಜೀವನಶೈಲಿ ಹಾಗೂ ಆಹಾರ ಪದ್ಧತಿಯಿಂದಾಗಿ ಅನೇಕರು ಹೃದಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆ (WHO) ಪ್ರಕಾರ, ಪ್ರತಿವರ್ಷ 1.8 ಮಿಲಿಯನ್ ಜನರು ಹೃದಯ ಕಾಯಿಲೆಯಿಂದ ಸಾವನ್ನಪ್ಪುತ್ತಿದ್ದಾರೆ. ಆದರೆ, ದೈನಂದಿನ ಜೀವನದಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳುವ ಮೂಲಕ ಹೃದಯ ಕಾಯಿಲೆಯ ಅಪಾಯವನ್ನು ತಡೆಯಬಹುದು ಎಂದು ಆರೋಗ್ಯ ತಜ್ಞರು ತಿಳಿಸುತ್ತಾರೆ. ಹೃದಯದ ಆರೋಗ್ಯವನ್ನು ಸುಧಾರಿಸುವ 7 ಕಾರ್ಯಗಳ ಬಗ್ಗೆ ತಿಳಿಯೋಣ.
ಆರೋಗ್ಯಕರ ಉಪಹಾರದೊಂದಿಗೆ ದಿನ ಪ್ರಾರಂಭಿಸಿ: ಉಪಹಾರವನ್ನು ಬಿಟ್ಟುಬಿಡುವುದರಿಂದ ಹೃದಯ ಕಾಯಿಲೆಯ ಅಪಾಯ ಹೆಚ್ಚಾಗಬಹುದು. ಅದಕ್ಕಾಗಿಯೇ ಪ್ರತಿದಿನ ಉಪಹಾರ ಸೇವಿಸಲು ಆರೋಗ್ಯ ತಜ್ಞರು ಸೂಚಿಸುತ್ತಾರೆ. ಧಾನ್ಯಗಳು, ಹಣ್ಣುಗಳು, ಆರೋಗ್ಯಕರ ಕೊಬ್ಬುಗಳು, ಓಟ್ಸ್ ಮತ್ತು ಬೀಜಗಳು ಸೇರಿಸಬೇಕು. ಇವೆಲ್ಲವೂ ದೇಹಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ಒದಗಿಸುತ್ತವೆ ಎಂದು ತಜ್ಞರು ತಿಳಿಸುತ್ತಾರೆ. (ಸಂಶೋಧನಾ ವರದಿಗಾಗಿ ಇಲ್ಲಿ ಕ್ಲಿಕ್ ಮಾಡಿ).

ಕನಿಷ್ಠ 30 ನಿಮಿಷಗಳ ಕಾಲ ವ್ಯಾಯಾಮ ಮಾಡಿ: ಪ್ರತಿದಿನ ವ್ಯಾಯಾಮ ಮಾಡುವುದರಿಂದ ಹೃದಯದ ಆರೋಗ್ಯ ಸುಧಾರಿಸುತ್ತದೆ. ವಾರಕ್ಕೆ ಕನಿಷ್ಠ 150 ನಿಮಿಷಗಳ ಕಾಲ ವ್ಯಾಯಾಮ ಮಾಡಬೇಕು. ನೀವು ಜಿಮ್‌ಗೆ ಹೋಗದಿದ್ದರೂ, ನೀವು ವಾಕಿಂಗ್, ಸೈಕ್ಲಿಂಗ್ ಮತ್ತು ನೃತ್ಯದಂತಹ ಕಾರ್ಯಗಳನ್ನು ಮಾಡಬೇಕು. ಇದರಿಂದ ರಕ್ತ ಪರಿಚಲನೆ ಸುಧಾರಿಸುತ್ತದೆ ಹಾಗೂ ಅಧಿಕ ರಕ್ತದೊತ್ತಡದ ಸಮಸ್ಯೆ ಕಡಿಮೆ ಮಾಡುತ್ತದೆ. ದಿನಕ್ಕೆ ಕನಿಷ್ಠ 30 ನಿಮಿಷಗಳ ಕಾಲ ಮಾಡಬೇಕು ಅಥವಾ ನೀವು ಇರುವಲ್ಲೇ ಮಾಡಬಹುದು ಎಂದು ತಜ್ಞರು ತಿಳಿಸುತ್ತಾರೆ. (ಸಂಶೋಧನಾ ವರದಿಗಾಗಿ ಇಲ್ಲಿ ಕ್ಲಿಕ್ ಮಾಡಿ).

ಉಪ್ಪು & ಸಕ್ಕರೆ ಕಡಿಮೆ ಮಾಡಿ: ಉಪ್ಪಿನ ಅತಿಯಾದ ಸೇವನೆಯು ಅಧಿಕ ರಕ್ತದೊತ್ತಡಕ್ಕೆ ಕಾರಣವಾಗುತ್ತದೆ. ಇದು ಹೃದಯ ಕಾಯಿಲೆಗೆ ಕಾರಣವಾಗಬಹುದು. ಅತಿಯಾದ ಸಕ್ಕರೆ ಸೇವನೆಯು ಬೊಜ್ಜು ಹಾಗೂ ಮಧುಮೇಹದ ಅಪಾಯ ಹೆಚ್ಚಿಸುತ್ತದೆ. ಇವೆರಡೂ ಹೃದಯದ ಮೇಲೆ ಒತ್ತಡವನ್ನು ಹೆಚ್ಚಿಸುತ್ತವೆ ಹಾಗೂ ರೋಗಗಳನ್ನು ಉಂಟುಮಾಡುತ್ತವೆ. ಅದಕ್ಕಾಗಿಯೇ ತಾಜಾ ಹಣ್ಣುಗಳನ್ನು ಸೇವಿಸಲು ತಜ್ಞರು ತಿಳಿಸುತ್ತಾರೆ. (ಸಂಶೋಧನಾ ವರದಿಗಾಗಿ ಇಲ್ಲಿ ಕ್ಲಿಕ್ ಮಾಡಿ).

ನೀರಿನಂಶ ಕಾಪಾಡಿಕೊಳ್ಳಿ: ಹೆಚ್ಚು ನೀರು ಕುಡಿಯುವುದರಿಂದ ರಕ್ತ ಪರಿಚಲನೆ ಸುಧಾರಿಸುತ್ತದೆ. ಹೃದಯದ ಮೇಲಿನ ಒತ್ತಡ ಕಡಿಮೆಯಾಗುತ್ತದೆ. ಸೋಡಾಗಳು, ಎನರ್ಜಿ ಡ್ರಿಂಕ್ಸ್ ನಂತಹ ತಂಪು ಪಾನೀಯಗಳನ್ನು ಕುಡಿಯಬಾರದು. ಕೃತಕ ಸಕ್ಕರೆಗಳನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮತ್ತು ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗುತ್ತದೆ. ಬದಲಾಗಿ ಗ್ರೀನ್ ಟೀ ಅಥವಾ ನೀರನ್ನು ಕುಡಿಯಬೇಕು ಎಂದು ತಜ್ಞರು ವಿವರಿಸುತ್ತಾರೆ.
ಒತ್ತಡ ಕಡಿಮೆ ಮಾಡಿ: ತಜ್ಞರು ತಿಳಿಸುವ ಪ್ರಕಾರ, ಒತ್ತಡವು ಹೃದಯದ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ದೀರ್ಘಕಾಲದ ಒತ್ತಡವು ಅಧಿಕ ರಕ್ತದೊತ್ತಡ ಹಾಗೂ ಹೆಚ್ಚಿದ ಉರಿಯೂತಕ್ಕೆ ಕಾರಣವಾಗಬಹುದು. ಅದಕ್ಕಾಗಿಯೇ ಒತ್ತಡವನ್ನು ಕಡಿಮೆ ಮಾಡಲು ಯೋಗ, ಧ್ಯಾನ, ಪ್ರಾಣಾಯಾಮದಂತಹ ಕೆಲಸಗಳನ್ನು ಮಾಡಲು ಶಿಫಾರಸು ಮಾಡಲಾಗಿದೆ. ಇವುಗಳಿಗೆ ದಿನಕ್ಕೆ 10 ನಿಮಿಷ ಮೀಸಲಿಟ್ಟರೆ ಒತ್ತಡ ಕಡಿಮೆಯಾಗುತ್ತದೆ. ಹೃದಯದ ಮೇಲಿನ ಹೊರೆ ಕಡಿಮೆಯಾಗುತ್ತದೆ ಎಂದು ಸಲಹೆ ನೀಡುತ್ತಾರೆ.

ಆರಾಮವಾಗಿ ನಗಬೇಕು: ನಗುವುದು ಹೃದಯಕ್ಕೆ ಒಳ್ಳೆಯದು ಎಂದು ನಿಮಗೆ ತಿಳಿದಿದೆಯೇ? ನಗುವುದರಿಂದ ಒತ್ತಡದ ಹಾರ್ಮೋನುಗಳು ಕಡಿಮೆಯಾಗುತ್ತವೆ ಹಾಗೂ ರಕ್ತ ಪರಿಚಲನೆ ಹೆಚ್ಚಾಗುತ್ತದೆ. ಸ್ನೇಹಿತರು, ಪ್ರೀತಿಪಾತ್ರರೊಂದಿಗೆ ಸಮಯ ಕಳೆಯುವುದು ಹಾಗೂ ಮನಃಪೂರ್ವಕವಾಗಿ ನಗುವುದು ಒತ್ತಡ ಕಡಿಮೆ ಮಾಡುತ್ತದೆ ಹಾಗೂ ಹೃದಯವನ್ನು ಆರೋಗ್ಯಕರವಾಗಿರಿಸುತ್ತದೆ ಎಂದು ತಜ್ಞರು ಹೇಳುತ್ತಾರೆ.

ಕುರ್ಚಿಯಿಂದ ಎದ್ದು ಸ್ವಲ್ಪ ಹೊತ್ತು ನಡೆಯಿರಿ: ಕೆಲಸದಲ್ಲಿ ಅಥವಾ ಮನೆಯಲ್ಲಿ ಗಂಟೆಗಟ್ಟಲೆ ಕುಳಿತುಕೊಳ್ಳುವುದು ಹೃದಯಕ್ಕೆ ಅಪಾಯಕಾರಿಯಾಗಿದೆ. ಒಂದೇ ಸ್ಥಳದಲ್ಲಿ ದೀರ್ಘಕಾಲ ಕುಳಿತುಕೊಳ್ಳುವುದರಿಂದ ರಕ್ತ ಪರಿಚಲನೆ ಕಡಿಮೆಯಾಗುವುದಲ್ಲದೆ, ಅಧಿಕ ರಕ್ತದೊತ್ತಡ ಹೆಚ್ಚಾಗುತ್ತದೆ ಹಾಗೂ ಹೃದಯದ ಮೇಲೆ ಒತ್ತಡ ಬೀಳುತ್ತದೆ. ಅದಕ್ಕಾಗಿಯೇ ಪ್ರತಿ ಗಂಟೆಗೆ ಒಂದು ಸಣ್ಣ ವಾಕಿಂಗ್ ಅಂದ್ರೆ, ಎದ್ದು ಓಡಾಡಬೇಕು. ವಿಶೇಷವಾಗಿ ಟೇಬಲ್ನ ಕೆಲಸಗಳಲ್ಲಿ ಕಾರ್ಯನಿರ್ವಹಿಸುವ ಜನರು ತಮ್ಮ ಹೃದಯ ರಕ್ಷಿಸಿಕೊಳ್ಳಲು ನಡುವೆ ವಿರಾಮಗಳನ್ನು ತೆಗೆದುಕೊಳ್ಳಬೇಕು ಎಂದು ತಜ್ಞರು ಸಲಹೆ ನೀಡುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಈ ವೆಬ್ಸೈಟ್ಗಳನ್ನು ವೀಕ್ಷಿಸಬಹುದು:
- https://www.nhlbi.nih.gov/health/heart-healthy-living/healthy-foods
- https://www.nhlbi.nih.gov/heart-truth/eat-a-heart-healthy-diet#:~:text=Eat%20a%20Heart%2DHealthy%20Diet&text=Eating%20fish%2C%20poultry%2C%20beans%2C,Limiting%20sugar%20and%20other%20sweeteners.
- https://www.cdc.gov/physical-activity-basics/guidelines/adults.html
ಓದುಗರಿಗೆ ವಿಶೇಷ ಸೂಚನೆ: ಈ ವರದಿಯಲ್ಲಿ ನಿಮಗೆ ನೀಡಲಾದ ಎಲ್ಲ ಆರೋಗ್ಯ ಸಂಬಂಧಿತ ಮಾಹಿತಿ ಹಾಗೂ ಸಲಹೆಗಳು ಸಾಮಾನ್ಯ ಮಾಹಿತಿಗಾಗಿ ಮಾತ್ರವೇ ನೀಡಲಾಗಿದೆ. ನಾವು ಈ ಮಾಹಿತಿಯನ್ನು ವೈಜ್ಞಾನಿಕ ಸಂಶೋಧನೆ, ಅಧ್ಯಯನಗಳು, ವೈದ್ಯಕೀಯ ಮತ್ತು ಆರೋಗ್ಯ ವೃತ್ತಿಪರ ಸಲಹೆಯ ಆಧಾರದ ಮೇಲೆ ಒದಗಿಸುತ್ತಿದ್ದೇವೆ. ನೀವು ಈ ಬಗ್ಗೆ ವಿವರವಾಗಿ ತಿಳಿದುಕೊಳ್ಳಬೇಕು. ಮತ್ತು ಈ ವಿಧಾನ ಅಥವಾ ಕಾರ್ಯವಿಧಾನವನ್ನು ಅಳವಡಿಸಿಕೊಳ್ಳಬೇಕು ಎಂದಾದಲ್ಲಿ ನುರಿತ ಪರಿಣತ ವೈದ್ಯರನ್ನು ಸಂಪರ್ಕಿಸುವುದು ಉತ್ತಮ.