ಭಾರತ vs ಇಂಗ್ಲೆಂಡ್ 4ನೇ ಟೆಸ್ಟ್‌ನಿಂದ ಕೆಎಲ್ ರಾಹುಲ್, ಜಸ್ಪ್ರೀತ್ ಬುಮ್ರಾ ಔಟ್, ಮುಖೇಶ್ ಕುಮಾರ್​ಗೆ ಸ್ಥಾನ

author img

By ETV Bharat Karnataka Team

Published : Feb 21, 2024, 7:03 AM IST

India vs England  ಭಾರತ vs ಇಂಗ್ಲೆಂಡ್ 4ನೇ ಟೆಸ್ಟ್‌  ಕೆಎಲ್ ರಾಹುಲ್  ಜಸ್ಪ್ರೀತ್ ಬುಮ್ರಾ  BCCI

ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಿಂದ ಟೀಂ ಇಂಡಿಯಾದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಮತ್ತು ವಿಕೆಟ್ ಕೀಪರ್, ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ಹೊರಗುಳಿದಿದ್ದಾರೆ.

ನವದೆಹಲಿ: ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್‌ಗೆ ಮುಂಚಿತವಾಗಿ ಭಾರತ ತಂಡದಿಂದ ಆಟಗಾರರ ಪಟ್ಟಿ ಬಿಡುಗಡೆ ಮಾಡಲಾಗಿದೆ. ಟೀಂ ಇಂಡಿಯಾದ ವೇಗದ ಬೌಲರ್‌ ಜಸ್ಪ್ರೀತ್ ಬುಮ್ರಾ ಮತ್ತು ಬ್ಯಾಟ್ಸ್​ಮನ್ ಕೆಎಲ್ ರಾಹುಲ್ ನಾಲ್ಕನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ. ಹೆಚ್ಚು ಸಂಖ್ಯೆಗಳ ಪಂದ್ಯಗಳನ್ನು ಆಡಿರುವ ಹಿನ್ನೆಲೆಯಲ್ಲಿ ಬುಮ್ರಾ ಅವರನ್ನು ಕೈಬಿಡಲಾಗಿದೆ ಎಂದು ಬಿಸಿಸಿಐ ತಿಳಿಸಿದೆ. ಆದರೆ, ಫಿಟ್‌ನೆಸ್‌ನಿಂದಾಗಿ ಕೆಎಲ್ ರಾಹುಲ್ ನಾಲ್ಕನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ. ಕೆ.ಎಲ್​. ರಾಹುಲ್​ಗೆ ಮೂರನೇ ಟೆಸ್ಟ್ ಪಂದ್ಯವನ್ನಾಡಲು ಕೂಡ ಸಾಧ್ಯವಾಗಲಿಲ್ಲ.

ರಾಂಚಿ ಟೆಸ್ಟ್‌ಗೂ ಮುನ್ನ ಮುಖೇಶ್ ಕುಮಾರ್ ಭಾರತ ತಂಡವನ್ನು ಸೇರುವ ಅವಕಾಶ ಪಡೆದಿದ್ದಾರೆ. ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯ ಫೆಬ್ರವರಿ 23 ರಿಂದ ರಾಂಚಿಯಲ್ಲಿ ನಡೆಯಲಿದೆ. ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ತಂಡ 2-1 ಮುನ್ನಡೆ ಸಾಧಿಸಿದೆ.

ಇತ್ತೀಚಿನ ದಿನಗಳಲ್ಲಿ ಬುಮ್ರಾ ಅವರು ಆಡಿದ ಹೆಚ್ಚು ಸಂಖ್ಯೆಗಳ ಪಂದ್ಯಗಳಿಂದಾಗಿ ನಾಲ್ಕನೇ ಟೆಸ್ಟ್‌ನಿಂದ ಹೊರಗುಳಿದಿದ್ದಾರೆ. ಆದರೆ, ಫಿಟ್‌ನೆಸ್ ಕಾರಣಕ್ಕೆ ಕೆ.ಎಲ್. ರಾಹುಲ್ ಟೆಸ್ಟ್​ ಪಂದ್ಯದಿಂದ ಹೊರಗುಳಿಯಬೇಕಾಯಿತು. ಇದರಿಂದಲೇ ರಾಹುಲ್ ಮೂರನೇ ಟೆಸ್ಟ್ ಪಂದ್ಯವನ್ನು ಆಡಲು ಸಾಧ್ಯವಾಗಲಿಲ್ಲ. ಇಷ್ಟೇ ಅಲ್ಲ, ಧರ್ಮಶಾಲಾದಲ್ಲಿ ನಡೆಯಲಿರುವ ಕೊನೆಯ ಹಾಗೂ 5ನೇ ಟೆಸ್ಟ್ ಪಂದ್ಯದಲ್ಲಿ ಆಡುತ್ತಾರೋ ಇಲ್ಲವೋ ಎಂಬುದು ಅವರ ಫಿಟ್ನೆಸ್ ಮೇಲೆ ಅವಲಂಬಿತವಾಗಿರುತ್ತದೆ.

ಮೂರನೇ ಟೆಸ್ಟ್ ಪಂದ್ಯಕ್ಕೂ ಮುನ್ನವೇ ವೇಗದ ಬೌಲರ್ ಮನೋಜ್ ಕುಮಾರ್ ತಂಡದಲ್ಲಿ ಸ್ಥಾನ ಪಡೆದಿದ್ದರು. ಮೂರನೇ ಟೆಸ್ಟ್‌ಗೂ ಮುನ್ನ ಕೆಎಲ್ ರಾಹುಲ್ ಬದಲಿಗೆ ದೇವದತ್ ಪಡಿಕ್ಕಲ್ ಅವರನ್ನು ತಂಡದಲ್ಲಿ ಸ್ಥಾನ ಗಳಿಸಿದ್ದರು. ಇದೀಗ ಪಡಿಕ್ಕಲ್​ಗೆ ನಾಲ್ಕನೇ ಟೆಸ್ಟ್‌ನಲ್ಲೂ ಅವಕಾಶ ಪಕ್ಕಾ ಆಗಿದೆ. ಇದಲ್ಲದೆ, ರಜತ್ ಪಾಟಿದಾರ್ ಅವರನ್ನು ನಾಲ್ಕನೇ ಟೆಸ್ಟ್‌ನ 11 ರಿಂದ ಕೈಬಿಡುವ ಸಾಧ್ಯತೆಯು ಹೆಚ್ಚಿದೆ. ರಜತ್ ಪಾಟಿದಾರ್ ಎರಡು ಟೆಸ್ಟ್‌ಗಳಲ್ಲಿ ಯಾವುದೇ ಮ್ಯಾಜಿಕ್ ಮಾಡಲು ಸಾಧ್ಯವಾಗಲಿಲ್ಲ ಜೊತೆಗೆ ನಾಲ್ಕು ಇನ್ನಿಂಗ್ಸ್‌ಗಳಲ್ಲಿ ಒಂದೇ ಒಂದು ಅರ್ಧ ಶತಕವನ್ನೂ ಗಳಿಸಲಿಲ್ಲ.

ಭಾರತ ತಂಡ ಟೆಸ್ಟ್​ ಸರಣಿಯಲ್ಲಿ 2-1 ಮುನ್ನಡೆ: ರೋಹಿತ್ ಶರ್ಮಾ ನೇತೃತ್ವದ ತಂಡ ಐದು ಟೆಸ್ಟ್‌ಗಳ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ. ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಗೆದ್ದರೆ, ಎರಡನೇ ಪಂದ್ಯದಲ್ಲಿ ಭಾರತ ಗೆದ್ದಿತ್ತು. ರಾಜ್‌ಕೋಟ್‌ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯವನ್ನು ಭಾರತ 434 ರನ್‌ಗಳ ಬೃಹತ್ ಅಂತರದಿಂದ ಗೆದ್ದು 2-1 ಮುನ್ನಡೆ ಸಾಧಿಸಿದೆ. ಇದೀಗ ಟೀಂ ಇಂಡಿಯಾ ರಾಂಚಿಯಲ್ಲಿ ನಡೆಯಲಿರುವ ಪಂದ್ಯವನ್ನು ಗೆದ್ದು ಸರಣಿ ಕೈವಶ ಮಾಡಿಕೊಳ್ಳುವ ಆಸೆಯಲ್ಲಿದೆ. ಅದೇ ಸಮಯದಲ್ಲಿ, ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಯಾವುದೇ ಬೆಲೆ ತೆತ್ತಾದರೂ ಸರಣಿಯನ್ನು ಸಮಬಲಗೊಳಿಸಲು ಪ್ರಯತ್ನಿದಲ್ಲಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ನಾಲ್ಕನೇ ಟೆಸ್ಟ್ ಅತ್ಯಂತ ಕಠಿಣವಾಗುವ ಸಾಧ್ಯತೆಯಿದೆ.

ನಾಲ್ಕನೇ ಟೆಸ್ಟ್‌ಗೆ ಭಾರತ ತಂಡದ ಆಟಗಾರರ ವಿವರ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ರಜತ್ ಪಾಟಿದಾರ್, ಸರ್ಫರಾಜ್ ಖಾನ್, ಧ್ರುವ್ ಜುರೆಲ್ (WK), ಕೆಎಸ್ ಭರತ್ (WK), ದೇವದತ್ ಪಡಿಕ್ಕಲ್, ಆರ್. ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್.

ಇದನ್ನೂ ಓದಿ: ವಿರಾಟ್​ ಕೊಹ್ಲಿ- ಅನುಷ್ಕಾ ಶರ್ಮಾ ದಂಪತಿಗೆ ಗಂಡು ಮಗು ಜನನ; ವಿಭಿನ್ನವಾಗಿ ಹೆಸರಿಟ್ಟ ವಿರುಷ್ಕಾ ಜೋಡಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.