ಮುಂದಿನ ತಿಂಗಳು ನಡೆಯಲಿರುವ ಇಂಗ್ಲೆಂಡ್ ಸರಣಿಗೂ ಮುನ್ನವೇ ಟೀಮ್ ಇಂಡಿಯಾದ ಸ್ಟಾರ್ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಟೆಸ್ಟ್ ಸ್ವರೂಪಕ್ಕೆ ನಿವೃತ್ತಿ ಘೋಷಣೆ ಮಾಡಿ ಫ್ಯಾನ್ಸ್ಗಳಿಗೆ ಶಾಕ್ ನೀಡಿದ್ದಾರೆ. ಈ ಇಬ್ಬರೂ ಈಗಾಗಲೇ ಟಿ20 ಮಾದರಿಗೆ ವಿದಾಯ ಹೇಳಿದ್ದು ಇನ್ನು ಮುಂದೆ ಏಕದಿನ ಮಾದರಿಯಲ್ಲಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ.
ಈ ಹಿಂದೆ ವಿರಾಟ್ ಕೊಹ್ಲಿ 2027ರ ಏಕದಿನ ವಿಶ್ವಕಪ್‌ನಲ್ಲಿ ಆಡುವ ಬಯಕೆಯನ್ನು ವ್ಯಕ್ತಪಡಿಸಿದ್ದರು. ರೋಹಿತ್ ಶರ್ಮಾ ಕೂಡ ಏಕದಿನ ಕ್ರಿಕೆಟ್‌ಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಾರೆ ಅಲ್ಲದೆ ಇದರಲ್ಲಿ . ಈ ಹಿನ್ನೆಲೆ ಈ ಇಬ್ಬರು 2027ರ ವಿಶ್ವಕಪ್‌ನಲ್ಲಿ ಕಾಣಿಸಿಕೊಳ್ಳುತ್ತಾರೆ ಎಂದು ಫ್ಯಾನ್ಸ್ಗಳು ನಂಬಿದ್ದಾರೆ. ಆದರೆ ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ನೀಡಿರುವ ಹೇಳಿಕೆ ಫ್ಯಾನ್ಸ್ಗಳಲ್ಲಿ ಆತಂಕ ಮೂಡಿಸಿದೆ.
"ರೋಹಿತ್ ಮತ್ತು ಕೊಹ್ಲಿ ಏಕದಿನ ಪಂದ್ಯಗಳಲ್ಲಿ ಅದ್ಭುತ ಪ್ರದರ್ಶನ ನೀಡುತ್ತಾರೆ ಇದರಲ್ಲಿ ಯಾವುದೇ ಸಂದೇಹವಿಲ್ಲ. ಆದರೆ 2027ರ ವಿಶ್ವಕಪ್ ವಿಷಯಕ್ಕೆ ಬಂದರೆ, ಅಲ್ಲಿಯ ವರೆಗೂ ಈ ಇಬ್ಬರಲ್ಲಿ ಈಗಿರುವಂತೆ ಆಕ್ರಮಣಕಾರಿ ಆಟದ ಜೊತೆಗೆ ಸ್ಥಿರ ಪ್ರದರ್ಶನ ನೀಡುವ ಸಾಮರ್ಥ್ಯ ಇರುತ್ತಾ? ಎಂದು ಆಯ್ಕೆ ಗಮನಿಸುತ್ತದೆ.
ಒಂದು ವೇಳೆ ಈ ಇಬ್ಬರಲ್ಲಿ ಸಾಮರ್ಥ್ಯ ಇದ್ದರೆ 2027 ರ ವಿಶ್ವಕಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಾರೆ. ನಿಜ ಹೇಳಬೇಕೆಂದರೆ... ರೋಹಿತ್ ಮತ್ತು ವಿರಾಟ್ ಕೊಹ್ಲಿ 2027ರ ವಿಶ್ವಕಪ್‌ನಲ್ಲಿ ಆಡಲು ಸಾಧ್ಯವಾಗುವುದಿಲ್ಲ ಎಂದು ನಾನು ಭಾವಿಸುತ್ತೇನೆ." ಯಾರಿಗೆ ಗೊತ್ತು ಅವರು ಉತ್ತಮ ಪ್ರದರ್ಶನ ನೀಡುತ್ತ ಶತಕಗಳ ಮೇಲೆ ಶತಕಗಳನ್ನು ಬಾರಿಸಿ ಸ್ಥಿರ ಪ್ರದರ್ಶನ ನೀಡಿದರೆ ಆ ದೇವರು ಕೂಡ ಅವರನ್ನು ತಂಡದಿಂದ ತೆಗೆದುಹಾಕಲು ಸಾಧ್ಯವಿಲ್ಲ" ಎಂದು ಗವಾಸ್ಕರ್ ಅಭಿಪ್ರಾಯ ಪಟ್ಟಿದ್ದಾರೆ.

ಇದನ್ನೂ ಓದಿ: ಐಪಿಎಲ್ ಪರಿಷ್ಕೃತ ವೇಳಾಪಟ್ಟಿ ಪ್ರಕಟ; ಆರ್ಸಿಬಿಗೆ ದೊಡ್ಡ ಲಾಭ!