ETV Bharat / sports

ಆರ್​ಸಿಬಿ ಗೆಲುವಿಗಾಗಿ ಸ್ಯಾಂಡಲ್​ವುಡ್​ ಸೆಲೆಬ್ರೆಟಿ​ಗಳಿಂದ ಭರ್ಜರಿ ಸಾಂಗ್ಸ್​ - RCB SONG

author img

By ETV Bharat Karnataka Team

Published : Mar 25, 2024, 2:49 PM IST

ಪುರುಷರ ಐಪಿಎಲ್​ನಲ್ಲಿ ಈ ಬಾರಿ ಆರ್​ಸಿಬಿ ಕಪ್​ ಗೆಲುವಿಗಾಗಿ 2 ಸಾಂಗ್​ ತಯಾರಾಗಿದೆ.

ಆರ್​ಸಿಬಿ
ಆರ್​ಸಿಬಿ

ಪುರುಷರ ಐಪಿಎಲ್​ ಆರಂಭವಾಗಿದ್ದು, ಈ ಬಾರಿಯಾದರೂ ನಮ್ಮ ಆರ್​ಸಿಬಿ ಕಪ್ ಗೆದ್ದೇ ಗೆಲ್ಲುತ್ತದೆ ಎಂಬ ವಿಶ್ವಾಸದ ಮಾತು ಎಲ್ಲಾ ಕಡೆ ಕೇಳಿ ಬರುತ್ತಿದೆ. ಆರ್​ಸಿಬಿ ತಂಡಕ್ಕಾಗಿ ತಾವೇ ಸಾಹಿತ್ಯ ಬರೆದು ಹಾಡನ್ನು ಸೋಷಿಯಲ್​ ಮೀಡಿಯಾದಲ್ಲಿ ಅಭಿಮಾನಿಗಳು ಹರಿಬಿಡುತ್ತಿದ್ದಾರೆ.

ಇದರ ಮಧ್ಯೆ ಖ್ಯಾತ ಸಾಹಿತಿ ಹಾಗೂ ನಿರ್ದೇಶಕ ಯೋಗರಾಜ್ ಭಟ್​ ಆರ್​ಸಿಬಿ ತಂಡವನ್ನು ಹುರಿದುಂಬಿಸುವ 'ಜಿಂಗಲ ಜೈ' ಎಂಬ ಹಾಡನ್ನು ಬರೆದಿದ್ದಾರೆ. ಈ ಹಾಡನ್ನು ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಹಾಡಿದ್ದಾರೆ. ಇದು ಧ್ರುವ ಸರ್ಜಾ ಅವರು ಹಾಡಿರುವ ಮೊದಲ ಹಾಡು ಕೂಡ.

ಆರ್​ಸಿಬಿ
ಆರ್​ಸಿಬಿ

ಧ್ರುವ ಸರ್ಜಾ ಅವರೊಟ್ಟಿಗೆ ಗಾಯನಕ್ಕೆ ಯೋಗರಾಜ್ ಭಟ್, ಉತ್ತರ ಕರ್ನಾಟಕದ ಪ್ರತಿಭೆ ಮಾಳು ನಿಪನಾಳ ಹಾಗೂ ಚೇತನ್ ಸೋಸ್ಕಾ ಅವರು ಜೊತೆಯಾಗಿದ್ದಾರೆ‌. ಚೇತನ್ ಸೋಸ್ಕಾ ಅವರೆ ಸಂಗೀತ ನೀಡಿದ್ದಾರೆ.

ರೇಣುಕಾ ಯೋಗರಾಜ್ ಭಟ್ ಈ ಹಾಡನ್ನು ನಿರ್ಮಾಣ ಮಾಡಿ, ನಿರ್ದೇಶಿಸಿದ್ದಾರೆ‌. ನಿರ್ದೇಶಕ ಎ.ಪಿ.ಅರ್ಜುನ್, ಡ್ಯಾನಿಶ್ ಸೇಠ್, ಮಣಿಕಂಠನ್ ಮುಂತಾದವರು ಈ ಹಾಡಿಗೆ ಸಹಕಾರ ನೀಡಿದ್ದಾರೆ. ಅಭಿರಾಜ್, ಶಿವ್ ಪಾಟೀಲ್​, ರಾಕೇಶ್ ರಾಮ್ ಅವರ ಛಾಯಾಗ್ರಹಣ, ಸಚಿನ್​ ಕೆ ರಾಮು ಸಂಕಲನ, ಗುಡ್ಡು ರಾಜ್ ನೃತ್ಯ ನಿರ್ದೇಶನ ಹಾಗೂ ಗಡ್ಡ ವಿಜಿ ಅವರ ಕಲಾ ನಿರ್ದೇಶನವಿರುವ ಜಿಂಗಲ ಜೈ‌ ಹಾಡು ಪಂಚರಂಗಿ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಧ್ರುವ ಸರ್ಜಾ, ಉತ್ತರ ಕರ್ನಾಟಕದ ಪ್ರತಿಭೆ ಮಾಳು ನಿಪನಾಳ, ಕನ್ನಡದ ಮಕ್ಕಳು ಹಾಗೂ ಆರ್​ಸಿಬಿ ಅಭಿಮಾನಿಗಳು ಈ ಹಾಡಿನಲ್ಲಿ ಅಭಿನಯಿಸಿದ್ದಾರೆ.

ಆರ್​ಸಿಬಿ
ಆರ್​ಸಿಬಿ

RCBಗೆ ತಂಡಕ್ಕೆ ಜೋಶ್ ತುಂಬಿದ ಸ್ಯಾಂಡಲ್​ವುಡ್ ಸೆಲೆಬ್ರಿಟಿಸ್​: ಸಕತ್​ ಸ್ಟುಡಿಯೋ ಮೂಲಕ ಆರ್​ಸಿಬಿ ತಂಡದ ಉತ್ಸಾಹ ಹೆಚ್ಚಿಸುವ ಹಾಡೊಂದು ಬಿಡುಗಡೆಯಾಗಿದೆ. ಆರ್​ಸಿಬಿ ಕಪ್​ ಮರ್ಯಾದೆ ಪ್ರಶ್ನೆ ಎಂಬ ಹಾಡಿಗೆ ಕೀರ್ತಿ ನಾರಾಯಣ್ ಪದ ಪೋಣಿಸಿದ್ದು, ಐಶ್ವರ್ಯ ರಂಗರಾಜನ್ ಕಂಠ ನೀಡಿದ್ದಾರೆ. ಯುವ ತಾರೆಗಳಾದ ಶೈನ್​ ಶೆಟ್ಟಿ, ಸಾನ್ಯಾ ಅಯ್ಯರ್​, ಕಿಶನ್​​ ಬೆಳಗಲಿ, ದಿವ್ಯಾ ಉರುಡುಗ ಮತ್ತು ರಘು ಗೌಡ ಮತ್ತು ಅನೇಕರು ಕಲ್ಯಾಣ್ ಟ್ಯೂನ್​ಗೆ ಬೊಂಬಾಟ್ ಆಗಿ ಹೆಜ್ಜೆ ಹಾಕಿದ್ದಾರೆ.

ಆರ್​​ಸಿಬಿ ಪುರುಷ ತಂಡಕ್ಕೆ ಹೊಸ ಹುರುಪು ತುಂಬಲಿರುವ ಈ ಹಾಡು ಎಲ್ಲೆಡೆ ಸೆನ್ಸೇಷನ್​ ಸೃಷ್ಟಿಸುತ್ತಿದೆ. ಈ ಹಾಡಿಗೆ ಹೆಜ್ಜೆ ಹಾಕಿರುವ ಶೈನ್ ಶೆಟ್ಟಿ ಮಾತನಾಡಿ‌, ಕ್ರಿಕೆಟ್ ಕೇವಲ ಒಂದು ಆಟವಲ್ಲ; ಇದು ಲಕ್ಷಾಂತರ ಅಭಿಮಾನಿಗಳನ್ನು ಒಗ್ಗೂಡಿಸುವ ಭಾವನೆಯಾಗಿದೆ. ನಮ್ಮ ಮಹಿಳಾ ತಂಡದ ಅದ್ಭುತ ಪ್ರದರ್ಶನಕ್ಕೆ ಸಾಕ್ಷಿಯಾಗಿದೆ. ಇನ್ನು ಮೊದಲ ಮ್ಯಾಚ್​ನಲ್ಲಿ ನೀರಸ ಪ್ರತಿಕ್ರಿಯೆ ನೀಡಿರುವ ಆರ್​ಸಿಬಿ ಇಂದು ನಡೆಯುವ ಮ್ಯಾಚ್​ ಗೆಲ್ಲುವಂತೆ ಸ್ಯಾಂಡಲ್​ ತಾರೆಯರು ಚಿಯರ್ಸ್ ಮಾಡಿದ್ದಾರೆ.

ಆರ್​ಸಿಬಿ
ಆರ್​ಸಿಬಿ

ಎಲ್ಲಾ ವರ್ಗದ ಜನರನ್ನು ಪ್ರೇರೇಪಿಸುವ ಮತ್ತು ಒಗ್ಗೂಡಿಸುವ ಶಕ್ತಿ ಕ್ರೀಡೆಗೆ ಇದೆ. ಕಲಾವಿದರಾಗಿ, ನಮ್ಮ ತಂಡಗಳಿಗೆ ಸಕಾರಾತ್ಮಕತೆಯನ್ನು ಹರಡಲು ಮತ್ತು ಹುರಿದುಂಬಿಸಲು ನಮ್ಮ ವೇದಿಕೆಗಳನ್ನು ಬಳಸುವುದು ನಮ್ಮ ಜವಾಬ್ದಾರಿಯಾಗಿದೆ. ಬೆಂಗಳೂರು ಪುರುಷರ ಕ್ರಿಕೆಟ್ ತಂಡವು ಗೆಲ್ಲುವುದು ಎಂದು ನಮಗೆ ವಿಶ್ವಾಸವಿದೆ ಎಂದು ಸಾನ್ಯಾ ಅಯ್ಯರ್‌ ಹೇಳಿದರು.

ಸೋಷಿಯಲ್​ ಮೀಡಿಯಾ ಸ್ಟಾರ್​ ರಘು ಗೌಡ ತಮ್ಮ ಉತ್ಸಾಹವನ್ನು ವ್ಯಕ್ತಪಡಿಸಿದರು. "ಕ್ರೀಡೆಗಳು ಸಮುದಾಯಗಳನ್ನು ಹೇಗೆ ಒಗ್ಗೂಡಿಸುತ್ತವೆ ಎಂಬುದನ್ನು ನೋಡುವುದು ನಂಬಲಾಗದ ಸಂಗತಿ. ಈ ಹಾಡು ಸ್ಯಾಂಡಲ್​ವುಡ್​ ಮತ್ತು ಕ್ರಿಕೆಟ್​ ನಡುವಿನ ಬಾಂಧವ್ಯಕ್ಕೆ ಸಾಕ್ಷಿಯಾಗಿದೆ. ಮತ್ತು ಬೆಂಗಳೂರು ತಂಡದ ಹಿಂದೆ ಇನ್ನೂ ಹೆಚ್ಚಿನ ಉತ್ಸಾಹ ತುಂಬಲು ಅಭಿಮಾನಿಗಳನ್ನು ಪ್ರೇರೇಪಿಸುತ್ತದೆ ಎಂದು ನಾನು ನಂಬುತ್ತೇನೆ ಎಂದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಆರ್‌ಸಿಬಿ - ಪಂಜಾಬ್ ಕಿಂಗ್ಸ್​ ಮಧ್ಯೆ ಬಿಗ್​ ಫೈಟ್​; ಹೀಗಿವೆ ಸಂಚಾರ ಸಲಹೆಗಳು - TRAFFIC INFORMATION

ETV Bharat Logo

Copyright © 2024 Ushodaya Enterprises Pvt. Ltd., All Rights Reserved.