ಮಂಗಳೂರು (ದಕ್ಷಿಣ ಕನ್ನಡ) : ನಗರದ ಕೊಂಚಾಡಿಯ ಮೇರಿ ಹಿಲ್‌ನಲ್ಲಿರುವ ಅಪಾರ್ಟ್ಮೆಂಟ್ನ ಐದನೇ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು 13 ವರ್ಷದ ಬಾಲಕನೋರ್ವ ಸಾವನ್ನಪ್ಪಿದ್ದಾನೆ.
ಮೌಂಟ್ ಕಾರ್ಮೆಲ್ ಸೆಂಟ್ರಲ್ ಶಾಲೆಯ ಎದುರಿನ ಮ್ಯಾಥ್ ರೆಸಿಡೆನ್ಸಿಯಲ್ಲಿ ಶನಿವಾರ ಬೆಳಗ್ಗೆ 5:30 ರಿಂದ 6:50 ರ ನಡುವೆ ಈ ಘಟನೆ ನಡೆದಿದೆ. ತನ್ನ ಕುಟುಂಬದೊಂದಿಗೆ ವಾಸಿಸುತ್ತಿದ್ದ ಬಾಲಕ ಐದನೇ ಮಹಡಿಯಿಂದ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ. ನಂತರ ಕುಟುಂಬದ ಸದಸ್ಯರು ಮತ್ತು ನೆರೆಹೊರೆಯವರು ಆತನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಬೆಳಗ್ಗೆ 6:57ಕ್ಕೆ ಆತ ಸಾವನ್ನಪ್ಪಿದ್ದಾನೆ.
'ಕಾವೂರು ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣ ವರದಿ (ಯುಡಿಆರ್) ಸಂಖ್ಯೆ 0010/2025 ರ ಅಡಿಯಲ್ಲಿ 194 ಬಿಎನ್‌ಎಸ್, 2023ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ' ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
ಇದನ್ನೂ ಓದಿ : ಮೈಸೂರು : ನೀರಿನಲ್ಲಿ ಮುಳುಗಿ ತಾತ, ಇಬ್ಬರು ಮೊಮ್ಮಕ್ಕಳು ಸಾವು - GRANDFATHER AND GRANDCHILDREN DIED