ETV Bharat / state

5 ಮಂದಿ ಸಚಿವರು ರಾಜ್ಯ ಸರ್ಕಾರದ ವಕ್ತಾರರಾಗಿ ನೇಮಕ

author img

By ETV Bharat Karnataka Team

Published : Mar 13, 2024, 12:40 PM IST

ಐದು ಮಂದಿ ಸಚಿವರನ್ನು ರಾಜ್ಯ ಸರ್ಕಾರದ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ.

ವಿಧನಾಸೌಧ
ವಿಧನಾಸೌಧ

ಬೆಂಗಳೂರು: ಐದು ಮಂದಿ ಸಚಿವರನ್ನು ರಾಜ್ಯ ಸರ್ಕಾರದ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ. ಈ ಕೆಳಕಂಡ ಸಚಿವರುಗಳಿಗೆ ಸರ್ಕಾರದ ಸಾಧನೆಗಳು, ದಾಖಲೆಗಳು ಮತ್ತು ಮಾಹಿತಿಗಳನ್ನು ಕಾಲಕಾಲಕ್ಕೆ ಒದಗಿಸಲು ಅಗತ್ಯ ಕ್ರಮವಹಿಸುವಂತೆ ಎಲ್ಲಾ ಇಲಾಖಾ ಮುಖ್ಯಸ್ಥರುಗಳಿಗೆ ಸೂಕ್ತ ನಿರ್ದೇಶನ ನೀಡಲು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

ರಾಜ್ಯ ಸರ್ಕಾರದ ವಕ್ತಾರರನ್ನಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್​ ಗುಂಡೂರಾವ್​, ಕಂದಾಯ ಸಚಿವ
ಕೃಷ್ಣ ಬೈರೇಗೌಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ಮಾಹಿತಿ ಹಾಗೂ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ಅರಣ್ಯ ಜೀವಿ ಪರಿಸ್ಥಿತಿ ಮತ್ತು ಪರಿಸರ ಸಚಿವ ಈಶ್ವರ್ ಬಿ. ಖಂಡ್ರೆ, ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಅವರನ್ನು ನೇಮಕ ಮಾಡಲಾಗಿದೆ.

ಇದನ್ನೂ ಓದಿ: ಪಕ್ಷ, ವರಿಷ್ಠರು ತೀರ್ಮಾನಿಸಿದರೆ ಲೋಕಸಭೆಗೆ ಸ್ಪರ್ಧಿಸಲು ಸಿದ್ಧ: ಜಗದೀಶ್​​ ಶೆಟ್ಟರ್​​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.