ETV Bharat / state

ಬೆಂಗಳೂರು: ರಸ್ತೆಯಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಸಿಸಿಟಿವಿಯಲ್ಲಿ ಕಾಮುಕನ ದುಷ್ಕೃತ್ಯ ಸೆರೆ - SEXUALLY HARASSED

ಬೆಂಗಳೂರಿನ ಸುದ್ದಗುಂಟೆಪಾಳ್ಯ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದುಕೊಂಡ ಹೋಗುತ್ತಿದ್ದ ಯುವತಿಗೆ ಕೀಚಕನೋರ್ವ ಲೈಂಗಿಕ ಕಿರುಕುಳ ನೀಡಿರುವ ಘಟನೆ ವರದಿಯಾಗಿದೆ.

A YOUNG WOMAN WALKING ON A BENGALURU ROAD WAS SEXUALLY HARASSED BENGALURU  SEXUALLY HARASSING CCTV VIDEO  ಲೈಂಗಿಕ ಕಿರುಕುಳ  ಸುದ್ದಗುಂಟೆಪಾಳ್ಯ SEXUALLY HARASSED
ಘಟನಾ ಸ್ಥಳ (ETV Bharat)
author img

By ETV Bharat Karnataka Team

Published : April 7, 2025 at 6:58 AM IST

1 Min Read

ಬೆಂಗಳೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯರನ್ನು ಹಿಂಬಾಲಿಸಿದ ಕಾಮುಕನೊಬ್ಬ ಯುವತಿಯೋರ್ವಳ ಮೇಲೆರಗಿ ಆಕೆಯ ಖಾಸಗಿ ಅಂಗ ಸ್ಪರ್ಶಿಸಿ ಲೈಂಗಿಕ ಕಿರುಕುಳ ನೀಡಿರುವ ಘಟನೆ ಸುದ್ದಗುಂಟೆಪಾಳ್ಯ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಸುದ್ದಗುಂಟೆಪಾಳ್ಯದ ಭಾರತಿ ಲೇಔಟ್‌ನ 1ನೇ ಕ್ರಾಸ್‌ನಲ್ಲಿ ಏಪ್ರಿಲ್ 3ರಂದು ಮುಂಜಾನೆ ಸುಮಾರು 1.55ಕ್ಕೆ ಘಟನೆ ನಡೆದಿದೆ. ದುಷ್ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ಸ್ಥಳೀಯ ನಿವಾಸಿ ಲೋಕೇಶ್‌ ಗೌಡ ಎಂಬುವವರು ನೀಡಿದ ದೂರಿನನ್ವಯ ಸುದ್ದಗುಂಟೆಪಾಳ್ಯ ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಏನಿದು ಘಟನೆ?: ಏಪ್ರಿಲ್​​ 3ರಂದು ಮುಂಜಾನೆ ಸುಮಾರು 1.55ಕ್ಕೆ ಇಬ್ಬರು ಯುವತಿಯರು ಸುದ್ದಗುಂಟೆಪಾಳ್ಯದ ಭಾರತಿ ಲೇಔಟ್‌ನ 1ನೇ ಕ್ರಾಸ್‌ನಲ್ಲಿ ಸಾಗುತ್ತಿದ್ದರು. ಈ ವೇಳೆ, ಹಿಂದಿನಿಂದ ಬಂದ ಅಪರಿಚಿತ ವ್ಯಕ್ತಿ ಏಕಾಏಕಿ ಓರ್ವ ಯುವತಿಯನ್ನು ಹಿಡಿದುಕೊಂಡು ಗೋಡೆಗೆ ಒರಗಿಸಿ ಆಕೆಯ ಖಾಸಗಿ ಅಂಗಾಂಗ ಸ್ಪರ್ಶಿಸಿ ಅಸಭ್ಯವಾಗಿ ವರ್ತಿಸಿದ್ದಾನೆ. ಈ ವೇಳೆ ಆ ಯುವತಿಯರು ಜೋರಾಗಿ ಕಿರುಚಿದ ಪರಿಣಾಮ ಆರೋಪಿ ಯುವತಿಯನ್ನು ಬಿಟ್ಟು ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಈ ಕೃತ್ಯ ಪಕ್ಕದಲ್ಲಿದ್ದ ಕಟ್ಟಡವೊಂದರ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಕಿರುಕುಳ ಅನುಭವಿಸಿದ ಯುವತಿಯರು ಘಟನೆ ಸಂಬಂಧ ಯಾವುದೇ ದೂರು ನೀಡಿಲ್ಲ. ಆದರೆ, ಸ್ಥಳೀಯ ನಿವಾಸಿಯೊಬ್ಬರು ಸುದ್ದಗುಂಟೆಪಾಳ್ಯ ಠಾಣೆಗೆ ದೂರು ನೀಡಿದ್ದಾರೆ. ಈ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆರೋಪಿಯ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ತರಬೇತಿ ಪಡೆಯುತ್ತಿದ್ದ ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ; ಬ್ಯಾಡ್ಮಿಂಟನ್ ಕೋಚ್ ಬಂಧನ

ಇದನ್ನೂ ಓದಿ: ವಿಜಯನಗರ: ಖಾಸಗಿ ಬಸ್​ನಲ್ಲಿ ಮಹಿಳೆ ಮೇಲೆ ಅತ್ಯಾಚಾರ ಯತ್ನ, ಮೂವರು ಆರೋಪಿಗಳ ಬಂಧನ

ಇದನ್ನೂ ಓದಿ: ಅಣ್ಣನೊಂದಿಗೆ ಊಟಕ್ಕೆ ತೆರಳುವಾಗ ಅಡ್ಡಗಟ್ಟಿ ಯುವತಿ ಎಳೆದೊಯ್ದು ಸಾಮೂಹಿಕ ಅತ್ಯಾಚಾರ: ಇಬ್ಬರು ಆರೋಪಿಗಳ ಬಂಧನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.