ETV Bharat / state

ಬೆಂಗಳೂರು: ರಸ್ತೆ ಬದಿ ಮಲಗಿದ್ದವರನ್ನು ಬರ್ಬರವಾಗಿ ಕೊಲ್ಲುತ್ತಿದ್ದ ಆರೋಪಿ ಬಂಧನ - Murder Accused Arrest

author img

By ETV Bharat Karnataka Team

Published : May 26, 2024, 11:48 AM IST

ರಸ್ತೆ ಬದಿ ಮಲಗಿದ್ದವರನ್ನು ಬರ್ಬರವಾಗಿ ಹತ್ಯೆ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

murder accused arrest
ಕೊಲೆ ಆರೋಪಿ (ETV Bharat)

ಬೆಂಗಳೂರು: ಮದ್ಯದ ಅಮಲಿನಲ್ಲಿ ಬಂದು ರಸ್ತೆ ಬದಿ ಮಲಗಿದ್ದವರ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆಗೈಯ್ಯುತ್ತಿದ್ದ ಆರೋಪಿಯನ್ನು ಬನಶಂಕರಿ ಠಾಣೆ ಪೊಲೀಸರು ಬಂಧಿಸಿದ್ದಾರೆ‌. ಒಂದೇ ವಾರದಲ್ಲಿ ಇಬ್ಬರನ್ನು ಕೊಲೆ ಮಾಡಿದ್ದ ಆರೋಪಿ ಗಿರೀಶ್​ ಎಂಬಾತನನ್ನು ಬಂಧಿಸಲಾಗಿದೆ.

ಮೇ 12ರಂದು ಜಯನಗರ 7ನೇ ಹಂತದಲ್ಲಿನ ರಸ್ತೆ ಬದಿಯಲ್ಲಿ ಮಲಗಿದ್ದ ವ್ಯಕ್ತಿಯೊಬ್ಬನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿತ್ತು. ಮದ್ಯದ ಅಮಲಿನಲ್ಲಿದ್ದ ಆರೋಪಿ ಗಿರೀಶ್ ಕೃತ್ಯ ಎಸಗಿರುವುದು ಪೊಲೀಸ್ ತನಿಖೆಯಿಂದ ಗೊತ್ತಾಗಿದೆ. ಈ ಕುರಿತು ಬನಶಂಕರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬಳಿಕ, ಮೇ 18ರಂದು ಅದೇ ಮಾದರಿಯಲ್ಲಿ ಸಿಟಿ ಮಾರ್ಕೆಟ್ ಹಿಂಭಾಗದ ಕಾಂಪ್ಲೆಕ್ಸ್​​ನಲ್ಲಿ ಮಲಗಿದ್ದ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೈಯಲಾಗಿತ್ತು. ಈ ಕೊಲೆಯನ್ನೂ ಕೂಡ ಗಿರೀಶನೇ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕೃತ್ಯದ ಕುರಿತು ಸಿಟಿ ಮಾರ್ಕೆಟ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಕೊಲೆಗಳ ಆರೋಪಿಗಾಗಿ ಎರಡೂ ಠಾಣೆಗಳ ಪೊಲೀಸರು ಹುಡುಕಾಟ ನಡೆಸಿದ್ದರು. ಸದ್ಯ ಬನಶಂಕರಿ ಠಾಣೆ ಪೊಲೀಸರು ಆರೋಪಿ ಗಿರೀಶ್​ನನ್ನು ಬಂಧಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಬಾತ್​ರೂಮ್​ನಲ್ಲಿ ಯುವತಿಯ ಶವ ಪತ್ತೆ ಪ್ರಕರಣ: 2 ಸಾವಿರ ರೂಪಾಯಿಗೆ ಕೃತ್ಯ ಎಸಗಿದ್ದ ಅಪ್ರಾಪ್ತನ ಬಂಧನ! - Woman Murder Case

ETV Bharat Logo

Copyright © 2024 Ushodaya Enterprises Pvt. Ltd., All Rights Reserved.