ETV Bharat / state

KSDL ಉತ್ಪನ್ನಗಳಿಗೆ ನಟಿ ತಮನ್ನಾ ಭಾಟಿಯಾ ಬ್ರ್ಯಾಂಡ್ ರಾಯಭಾರಿ: ಸಂಭಾವನೆ ಎಷ್ಟು ಕೋಟಿ ಗೊತ್ತಾ? - TAMANNAAH BHATIA

ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆಎಸ್ ಡಿಎಲ್)ದ ಉತ್ಪನ್ನಗಳನ್ನು ವಿಶ್ವ ಮಟ್ಟಕ್ಕೆ ಕೊಂಡೊಯ್ಯುವ ಉದ್ದೇಶದಿಂದ ರಾಜ್ಯ ಸರ್ಕಾರ, ನಟಿ ತಮನ್ನಾ ಭಾಟಿಯಾ ಅವರನ್ನು ಪ್ರಚಾರ ರಾಯಭಾರಿಯನ್ನಾಗಿ ಆಯ್ಕೆ ಮಾಡಿದೆ.

ಕೆಎಸ್ ಡಿಎಲ್ ಉತ್ಪನ್ನಗಳಿಗೆ ನಟಿ ತಮನ್ನಾ ಭಾಟಿಯಾ ಪ್ರಚಾರ ರಾಯಭಾರಿ
ಕೆಎಸ್ ಡಿಎಲ್ ಉತ್ಪನ್ನಗಳಿಗೆ ನಟಿ ತಮನ್ನಾ ಭಾಟಿಯಾ ಪ್ರಚಾರ ರಾಯಭಾರಿ (ETV Bharat)
author img

By ETV Bharat Karnataka Team

Published : May 22, 2025 at 11:51 PM IST

Updated : May 23, 2025 at 12:10 AM IST

2 Min Read

ಮೈಸೂರು: ಕರ್ನಾಟಕದ ಹೆಮ್ಮೆಯ ಸಂಕೇತವಾಗಿರುವ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆಎಸ್ ಡಿಎಲ್) ಸಂಸ್ಥೆಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ಉದ್ದೇಶದಿಂದ ಸೌತ್ ನಟಿ ತಮನ್ನಾ ಭಾಟಿಯಾ ಅವರನ್ನು ಪ್ರಚಾರ ರಾಯಭಾರಿಯನ್ನಾಗಿ ನೇಮಿಸಿಕೊಳ್ಳಲಾಗಿದೆ. ನಟಿಯನ್ನು ಆಯ್ಕೆ ಮಾಡಿಕೊಳ್ಳಲು ಅವರ ವರ್ಚಸ್ಸು, ಡಿಜಿಟಲ್ ಪ್ರಸ್ತುತಿ ಮತ್ತು ಯುವಜನರೊಂದಿಗಿನ ಅವರ ಸಂಪರ್ಕ ಮುಂತಾದವುಗಳನ್ನು ಮಾತ್ರ ಪರಿಗಣಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.

2 ವರ್ಷಕ್ಕೆ 6.2 ಕೋಟಿ ರೂಪಾಯಿ ಸಂಭಾವನೆ: ತಮನ್ನಾ ಅವರನ್ನು 6.2 ಕೋಟಿ ರೂಪಾಯಿ ಸಂಭಾವನೆಯೊಂದಿಗೆ ಎರಡು ವರ್ಷಗಳ ಅವಧಿಗೆ ಕೆಎಸ್ಡಿಎಲ್ ಪ್ರಚಾರ ರಾಯಭಾರಿಯನ್ನಾಗಿ ನೇಮಿಸಿಕೊಂಡಿರುವುದಕ್ಕೆ ಕೆಲವರು ಅಪಸ್ವರ ಎತ್ತಿದ್ದಾರೆ. ಇದಕ್ಕೆ ಸಚಿವರು ಸ್ಪಷ್ಟನೆ ನೀಡಿದ್ದಾರೆ.

ಮೈಸೂರು ಸ್ಯಾಂಡಲ್ ಸೋಪ್ ಉತ್ಪನ್ನಗೆ ಮಿಲ್ಕಿ ಬ್ಯೂಟಿ ಪ್ರಚಾರ ರಾಯಭಾರಿ
ಅಧಿಸೂಚನೆ (ETV Bharat)

ಕೆಎಸ್ಡಿಎಲ್ ಕಳೆದ ಸಾಲಿ‌ನಲ್ಲಿ 1,785 ಕೋಟಿ ರೂಪಾಯಿ ವಹಿವಾಟು ನಡೆಸಿದೆ. ಇದರಲ್ಲಿ ಕರ್ನಾಟಕದ ಪಾಲು ಶೇ.18ರಷ್ಟಿದೆ. ಉಳಿದದ್ದು ಆಂಧ್ರ ಪ್ರದೇಶ, ತೆಲಂಗಾಣ, ತಮಿಳುನಾಡು, ಕೇರಳ ಮತ್ತು ಮಹಾರಾಷ್ಟ್ರದಿಂದ ಬಂದಿದೆ. ಸಂಸ್ಥೆಯ ವಹಿವಾಟನ್ನು 2030ರ ವೇಳೆಗೆ 5,000 ಕೋಟಿ ರೂಪಾಯಿಗೆ ಕೊಂಡೊಯ್ಯುವ ಗುರಿ ಇಟ್ಟುಕೊಂಡು ಈಗ ದಾಪುಗಾಲು ಹಾಕುತ್ತಿದ್ದೇವೆ. ಇಂತಹ ಸಂದರ್ಭದಲ್ಲಿ ಮಾರುಕಟ್ಟೆ ತಂತ್ರವೇ ಮುಖ್ಯವಾಗುತ್ತದೆ. ಇದು ಮಾರುಕಟ್ಟೆ ಪರಿಣತರ ಸಮಿತಿಯ ತೀರ್ಮಾನ ಎಂದು ಅವರು ಹೇಳಿದ್ದಾರೆ.

ನಾವು ದೀಪಿಕಾ ಪಡುಕೋಣೆ, ರಶ್ಮಿಕಾ ಮಂದಣ್ಣ, ಪೂಜಾ ಹೆಗ್ಡೆ, ಕಿಯಾರಾ ಅಡ್ವಾಣಿ ಅವರನ್ನೂ ಪರಿಗಣಿಸಿ‌ ನೋಡಿದೆವು. ಆದರೆ ತಮನ್ನಾ ಅವರು ಡಿಜಿಟಲ್ ಲೋಕದಲ್ಲಿ 2.8 ಕೋಟಿ ಪಾಲೋವರ್ಸ್ ಹೊಂದಿ, ಉಳಿದವರಿಗಿಂತ ಮುಂದಿದ್ದಾರೆ. ಜೊತೆಗೆ, ಅವರು ಅಖಿಲ ಭಾರತ ಮಟ್ಟದ ವರ್ಚಸ್ಸು ಹೊಂದಿದ್ದಾರೆ. ಹೀಗಾಗಿ ಅವರನ್ನೇ ಬ್ರ್ಯಾಂಡ್ ಅಂಬಾಸಿಡರ್ ಆಗಿ ನೇಮಿಸಿಕೊಳ್ಳಲಾಗಿದೆ. ಇದು ಕೆಎಸ್ಡಿಎಲ್ ಸಂಸ್ಥೆಗೆ ನಾವು ತರುತ್ತಿರುವ ಸಮಗ್ರ ಪರಿವರ್ತನೆಯಲ್ಲಿ ಕೇವಲ ಒಂದು ಅಂಶವಷ್ಟೇ ಎಂದು ಸಚಿವರು ಮಾಹಿತಿ ನೀಡಿದರು.

ಕೆಎಸ್ಡಿಎಲ್ ನ ಉದ್ಯೋಗಿಗಳು ಕನ್ನಡಿಗರೇ ಆಗಿದ್ದಾರೆ. ಬರುವ ಲಾಭಾಂಶದಲ್ಲಿ ಶೇ 30ರಷ್ಟನ್ನು ಸರಕಾರಕ್ಕೆ ಕೊಡಲಾಗುತ್ತಿದೆ. ಈಗ ಯೂರೋಪ್ ಮತ್ತು ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಮಾರುಕಟ್ಟೆ ವಿಸ್ತರಣೆ ಮಾಡಲಾಗುತ್ತಿದೆ. ಇವುಗಳ ಭಾಗವಾಗಿ 435 ವಿತರಕರನ್ನು ಹೊಸದಾಗಿ ನೇಮಿಸಿಕೊಳ್ಳಲಾಗಿದೆ. ಇ-ಕಾಮರ್ಸ್ ಮೂಲಕ 500 ಕೋಟಿ ರೂಪಾಯಿ ವಹಿವಾಟು ನಡೆಸುವ ಮತ್ತು ರಫ್ತಿನಿಂದ 150 ಕೋಟಿ ರೂಪಾಯಿ ಗಳಿಸುವ ಗುರಿ ಹೊಂದಿದ್ದೇವೆ ಎಂದು ಪಾಟೀಲ ಹೇಳಿದರು.

ಇಷ್ಟಕ್ಕೂ ಒಂದು ಸರ್ಕಾರಿ ಸಂಸ್ಥೆ ಹೊಸ ಘಟಕವನ್ನು ವಿಜಯಪುರದಲ್ಲಿ ಆರಂಭಿಸುವ ಹಂತಕ್ಕೆ ಹೋಗುತ್ತಿದೆ ಎನ್ನುವುದೇ ಹೆಮ್ಮೆಯ ವಿಷಯ. ಹೀಗೆ ಮಾಡಿದ ನಂತರ ಅದನ್ನು ವಿಶ್ವಮಟ್ಟಕ್ಕೆ ತೆಗೆದುಕೊಂಡು‌ ಹೋಗಬೇಕಾಗಿದೆ. ಹಾಗೆಯೇ ಬ್ರ್ಯಾಂಡಿಂಗ್ ಹೆಚ್ಚಿಸಲು ಪ್ಯಾಕಿಂಗ್ ಬದಲಿಸುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.

ಕೆಎಸ್ಡಿಎಲ್ ಅಧ್ಯಕ್ಷ ಅಪ್ಪಾಜಿ ನಾಡಗೌಡ ಮಾತನಾಡಿ, 109 ವರ್ಷಗಳ ಇತಿಹಾಸವಿರುವ ಕೆಎಸ್ಡಿಎಲ್ ಕರ್ನಾಟಕದ ಹೆಮ್ಮೆಯ ಉದ್ಯಮ. ಇದಕ್ಕೆ ಸಂಪೂರ್ಣ ಹೊಸತನದ ಸ್ಪರ್ಶ ನೀಡುತ್ತಿದ್ದು, ಉತ್ತರ ಭಾರತ ಮತ್ತು ವಿದೇಶಗಳಲ್ಲೂ ಮಾರುಕಟ್ಟೆ ವಿಸ್ತರಣೆ ಮಾಡಲಾಗುತ್ತಿದೆ. ಇದರಲ್ಲಿ ಗೆಲ್ಲಬೇಕೆಂದರೆ ನಾವು ಅದಕ್ಕೆ ತಕ್ಕಂತೆ ಕಾರ್ಯತಂತ್ರ ರೂಪಿಸಬೇಕು. ತಮನ್ನಾ ಅವರನ್ನು ಬ್ರ್ಯಾಂಡ್ ಅಂಬಾಸಿಡರ್ ಮಾಡಿಕೊಂಡಿರುವುದು ಇದಕ್ಕೆ ತಕ್ಕ ಒಂದು ಉಪಕ್ರಮವಷ್ಟೇ. ಇದನ್ನು ಯಾರೂ ತಪ್ಪಾಗಿ ಭಾವಿಸಬಾರದು ಎಂದು ಮನವಿ ಮಾಡಿದರು.

ಇದನ್ನೂ ಓದಿ: ‘ಸಿಂಗಲ್​ ಆದ್ರೂ ರಾಣಿಯಂತೆ ಬದುಕಬೇಕು!’: ಕಾರ್​ ಕಲರ್​ಗೆ ಮ್ಯಾಚಿಂಗ್ ಸೀರೆ​; ಹೇಗಿದೆ ನೋಡಿ ಮಿಲ್ಕಿ ಬ್ಯೂಟಿಯ ಹೊಸ ಕಾರು - TAMANNAAH BHATIA NEW CAR

Last Updated : May 23, 2025 at 12:10 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.