ETV Bharat / state

ಗುತ್ತಿಗೆದಾರರಿಗೆ ಕಮಿಷನ್​ ಕೇಳಿದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ: ಡಿಸಿಎಂ ಡಿ.ಕೆ. ಶಿವಕುಮಾರ್​ - COMMISSION ALLEGATION

ಬಿಲ್​​​ ಪಾವತಿ ಕಮಿಷನ್​​ ಕೇಳಲಾಗುತ್ತಿದೆ ಎಂಬ ಗುತ್ತಿಗೆದಾರರ ಆರೋಪಕ್ಕೆ ಉಪಮುಖ್ಯಮಂತ್ರಿ ಡಿಸಿಎಂ ಡಿ.ಕೆ. ಶಿವಕುಮಾರ್​ ಪ್ರತಿಕ್ರಿಯಿಸಿದ್ದಾರೆ.

BENGALURU  DCM DK SHIVAKUMAR  CONTRACTORS ISSUE  ಕಮಿಷನ್ ಆರೋಪ
ಡಿಸಿಎಂ ಡಿ.ಕೆ. ಶಿವಕುಮಾರ್​ (ETV Bharat)
author img

By ETV Bharat Karnataka Team

Published : April 11, 2025 at 1:36 PM IST

1 Min Read

ಬೆಂಗಳೂರು: "ಗುತ್ತಿಗೆದಾರರಿಗೆ ಬಿಲ್​​​ ಪಾವತಿ ಮಾಡಲು ಯಾರಾದರೂ ಕಮಿಷನ್​​ ಕೇಳಿದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ. ನಮ್ಮ ಸಚಿವರಾದ ಸತೀಶ್​​ ಜಾರಕಿಹೊಳಿ, ಬೋಸರಾಜು ಅವರು ಇದರಲ್ಲಿ ಭಾಗಿಯಾಗಿಲ್ಲ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್​ ತಿಳಿಸಿದರು.

ವಿಧಾನಸೌಧದಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಲ್​​ ಪಾವತಿ ಕಮಿಷನ್​​ ಕೇಳಲಾಗುತ್ತಿದೆ ಎಂಬ ಗುತ್ತಿಗೆದಾರರ ಆರೋಪದ ಬಗ್ಗೆ ಕೇಳಿದಾಗ, "ಬಿಲ್​ ಪಾವತಿ ವಿಚಾರವಾಗಿ ಯಾರಾದರೂ ಕಮಿಷನ್ ಕೇಳಿದ್ದರೆ ಅವರು ಲೋಕಾಯುಕ್ತಕ್ಕೆ ದೂರು ನೀಡಲಿ. ಬಿಲ್ ಪಾವತಿ ವಿಚಾರವಾಗಿ ಗುತ್ತಿಗೆದಾರರು ಯಾಕೆ ಸಚಿವರನ್ನು ಕೇಳಬೇಕು. ಅವರಿಗೆ ಇಲಾಖೆಯ ಬಜೆಟ್ ಅರಿವಿಲ್ಲವೇ? ಅನುದಾನವೇ ಇಲ್ಲದಿರುವಾಗ ಅವರು ಗುತ್ತಿಗೆ ಹೇಗೆ ತೆಗೆದುಕೊಂಡರು?" ಎಂದರು.

"ಬಿಜೆಪಿ ಅವಧಿಯಲ್ಲಿ ನನ್ನ ಇಲಾಖೆಯೊಂದರಲ್ಲೇ 1 ಲಕ್ಷ ಕೋಟಿಗೂ ಹೆಚ್ಚು ಮೊತ್ತದ ಗುತ್ತಿಗೆಯನ್ನು ನೀಡಲಾಗಿದೆ. ಈ ಗುತ್ತಿಗೆ ಬಿಲ್ ಪಾವತಿ ಮಾಡಿಸುವಂತೆ ಶಾಸಕರ ಮೂಲಕ ಮನವಿ ಮಾಡಲಾಗುತ್ತಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿಧಾನಸಭೆ ಚುನಾವಣೆಗೂ ಮುನ್ನ ಒಂದು ವರ್ಷ ಮುಂಚಿತವಾಗಿಯೇ ನಾವು ಗುತ್ತಿಗೆದಾರರಿಗೆ ಎಚ್ಚರಿಕೆ ನೀಡಿದ್ದೆವು".

"ಅನುದಾನ ಇಲ್ಲದೇ ಯಾವುದೇ ಕಾಮಗಾರಿ ತೆಗೆದುಕೊಳ್ಳಬೇಡಿ ಎಂದು ಎಚ್ಚರಿಕೆ ನೀಡಿದ್ದೆವು. ಆದರೂ ನಮ್ಮ ಮಾತು ಕೇಳದೇ ಈಗ ರಾಜಕೀಯ ನಾಯಕರ ಮೂಲಕ ಬಿಲ್ ಪಾವತಿಗೆ ಮನವಿ ಪತ್ರ ನೀಡುತ್ತಿದ್ದಾರೆ" ಎಂದು ಹೇಳಿದರು.

ಇಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಚರ್ಚೆ ಬಗ್ಗೆ ಕೇಳಿದಾಗ, "ಜಾತಿಗಣತಿ ವರದಿಯನ್ನು ಮುಖ್ಯಮಂತ್ರಿಗಳಾಗಲಿ, ನಾನಾಗಲಿ ಇನ್ನು ನೋಡಿಲ್ಲ. ಇದನ್ನು ನೋಡಿದ ನಂತರ ಚರ್ಚೆ ಮಾಡಿ ಯಾವ ತೀರ್ಮಾನ ಕೈಗೊಳ್ಳಬೇಕು ಎಂದು ನಿರ್ಧರಿಸುತ್ತೇವೆ. ಈ ವಿಚಾರದ ಬಗ್ಗೆ ಮಾಧ್ಯಮಗಳ ಮುಂದೆ ಮಾತನಾಡಲು ಆಗುವುದಿಲ್ಲ" ಎಂದು ತಿಳಿಸಿದರು.

ಇದನ್ನೂ ಓದಿ: ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ಏ.17ರಂದು ರಾಜ್ಯದಲ್ಲಿ ಕಾಂಗ್ರೆಸ್​ ಪ್ರತಿಭಟನೆ: ಡಿಸಿಎಂ ಡಿಕೆಶಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.