ETV Bharat / state

ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಎಲ್ಲಾ ಕ್ಷೇತ್ರಗಳಲ್ಲಿ ಮಹಾಜ್ಞಾನಿಯಾಗಿದ್ದರು: ಸಚಿವ ಈಶ್ವರ್ ಖಂಡ್ರೆ - AMBEDKAR JAYANTI 2025

ಬಿಸಿಲನಾಡು ಬೀದರ್​ನಲ್ಲಿ ಅಂಬೇಡ್ಕರ್​ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಅಂಬೇಡ್ಕರ್ ಭಾವಚಿತ್ರದ ಮೆರವಣಿಗೆಯಲ್ಲಿ ಸಚಿವರು ಕುಣಿದು ಕುಪ್ಪಳಿಸಿದರು. ​

AMBEDKAR JAYANTI 2025
ಅಂಬೇಡ್ಕರ್​ ಜಯಂತಿ (ETV Bharat)
author img

By ETV Bharat Karnataka Team

Published : April 14, 2025 at 5:28 PM IST

2 Min Read

ಬೀದರ್​: ಏಪ್ರಿಲ್ 14 ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್, ಅವರು​ ಇಡೀ ದೇಶ ಮಾತ್ರವಲ್ಲದೇ, ಜಗತ್ತಿಗೆ ಮಾದರಿ ವ್ಯಕ್ತಿತ್ವವನ್ನು ಅವರು ಹೊಂದಿದ್ದರು ಮತ್ತು ಎಲ್ಲಾ ಕ್ಷೇತ್ರಗಳಲ್ಲಿ ಮಹಾಜ್ಞಾನಿಯಾಗಿದ್ದರು ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್​ ಖಂಡ್ರೆ ಅವರು ಹೇಳಿದರು.

ಸೋಮವಾರ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 134ನೇ ಜಯಂತ್ಯುತ್ಸವ ನಿಮಿತ್ತ ನಗರದ ಅಂಬೇಡ್ಕರ್ ವೃತ್ತದಲ್ಲಿರುವ ಡಾ. ಅಂಬೇಡ್ಕರ್ ಅವರ ಮೂರ್ತಿಗೆ ಪೂಜೆ ಸಲ್ಲಿಸಿದ ಬಳಿಕ ಅವರು ಮಾತನಾಡಿದರು. 134 ವರ್ಷಗಳ ಹಿಂದೆ ಇದ್ದಂತಹ ಅಸಮಾನತೆ, ಅಸ್ಪೃಶ್ಯತೆ, ಗುಲಾಮಗಿರಿ, ಅನ್ಯಾಯ, ದೌರ್ಜನ್ಯ ಮತ್ತು ಅನೇಕ ರೀತಿಯಲ್ಲಿ ಶೋಷಣೆಗಳು ನಡೆಯುತ್ತಿದ್ದವು. ಇವುಗಳೆಲ್ಲವನ್ನೂ ಖಂಡಿಸಿ, ಒಂದು ಸಮ ಸಮಾಜದ ನಿರ್ಮಾಣ ಮಾಡಲು ಹೊರಟು, ದೀನ ದಲಿತರ ಧ್ವನಿಯಾಗಿ, ಶೋಷಿತರ ಧ್ವನಿಯಾಗಿ, ಕಾರ್ಮಿಕರ ಧ್ವನಿಯಾಗಿ, ಮಹಿಳೆಯರ ಧ್ವನಿಯಾಗಿ ಹೋರಾಟ ಮಾಡಿದರು.

'ಶಿಕ್ಷಣ, ಸಂಘಟನೆ ಮತ್ತು ಸಂಘರ್ಷ' ಹೋರಾಟದ ಮೂಲಕ ಎಲ್ಲರೂ ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಬಹುದು. ಇವರು ಇಡೀ ಜಗತ್ತಿಗೆ ಮಾದರಿಯಾಗುವಂತಹ ಸಂವಿಧಾನವನ್ನು ನಮಗೆ ನೀಡಿದ್ದಾರೆ. ನಮ್ಮ ಸಂವಿಧಾನದ ಆಶಯಗಳ ಮೂಲಕ ಒಂದು ಸದೃಢ ದೇಶದ ನಿರ್ಮಾಣ ಮತ್ತು ಅಭಿವೃದ್ಧಿಗೆ ಸಹಾಯಕವಾಗಿದೆ ಎಂದರು. ಹಿಂದುಳಿದ ವರ್ಗಗಳು, ದೀನ ದಲಿತರಿಗೆ ವಿಶೇಷ ಸವಲತ್ತುಗಳನ್ನು ನೀಡುವ ಮತ್ತು ಶೈಕ್ಷಣಿಕ ಕ್ರಾಂತಿಯ ಮೂಲಕ ಅವರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರಲು ಅಡಿಪಾಯ ಹಾಕಿದವರು ಬಾಬಾ ಸಾಹೇಬ್ ಅಂಬೇಡ್ಕರ್. ಸಮಾನ ನಾಗರಿಕ ಹಕ್ಕುಗಳು ಮತ್ತು ಕಾನೂನಾತ್ಮಕ ಹೋರಾಟ ಮಾಡಲು ಎಲ್ಲಾ ದುರ್ಬಲ ವರ್ಗದವರಿಗೆ ಅವಕಾಶ ಕಲ್ಪಿಸಿದರು. ಇವರು ಕೇವಲ ದಲಿತ, ಹಿಂದುಳಿದ ವರ್ಗಗಳ ನಾಯಕರು ಮಾತ್ರವಲ್ಲ, ಇವರು ಭವ್ಯ ಭಾರತದ ಪ್ರಜೆಗಳ ನಾಯಕ. ತನ್ನ ಇಡೀ ಜೀವನವನ್ನು ದೇಶದ ಭವ್ಯ ಭವಿಷ್ಯದ ನಿರ್ಮಾಣಕ್ಕಾಗಿ, ಒಂದು ಸಮ ಸಮಾಜದ ನಿರ್ಮಾಣಕ್ಕಾಗಿ ಮುಡಿಪಾಗಿಟ್ಟವರು ಎಂದು ತಿಳಿಸಿದರು.

ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರು ಮಾತನಾಡಿ, ಇಂದಿನ ಯುವಪೀಳಿಗೆ ಅಂಬೇಡ್ಕರ್ ಅವರ ಆದರ್ಶಗಳು, ವಿಚಾರಧಾರೆಣೆಗಳು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ನಗರದಲ್ಲಿ ನಡೆದ ಅಂಬೇಡ್ಕರ್​ ಅವರ ಭಾವಚಿತ್ರ ಮೆರವಣಿಗೆಯಲ್ಲಿ ಸಚಿವ ಖಂಡ್ರೆ, ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ ಸೇರಿದಂತೆ ಇತರರು ಪಾಲ್ಗೊಂದು ಹೆಜ್ಜೆ ಹಾಕಿದರು. ಈ ಸಂದರ್ಭದಲ್ಲಿ ಮಾಜಿ ಎಂಎಲ್​ಸಿ ಅರವಿಂದಕುಮಾರ ಅರಳಿ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿರೀಶ್​ ದಿಲೀಪ್ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ನಗರಸಭೆ ಅಧ್ಯಕ್ಷರಾದ ಮಹಮ್ಮದ ಗೌಸ್​, ಬೀದರ್​ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ಇದನ್ನೂ ಓದಿ : ಬೀದರ್- ಬೆಂಗಳೂರು ವಿಮಾನಯಾನ ಪುನಾರಂಭಿಸಲು ಪ್ರಸಕ್ತ ವರ್ಷಕ್ಕೆ 14 ಕೋಟಿ ರೂ. ಮೀಸಲು: ಈಶ್ವರ್​ ಖಂಡ್ರೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.