ETV Bharat / state

ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ ಮತ್ತೆ ಗುಡ್ಡ ಕುಸಿತ: ವಾಹನ ಸಂಚಾರಕ್ಕೆ ಅಡಚಣೆ - LANDSLIDE IN MANNAGUNDI

ಸಂಬಂಧಪಟ್ಟ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಜಿಲ್ಲಾಧಿಕಾರಿಗಳೂ ಕೂಡ ತಕ್ಷಣವೇ ಸ್ಥಳ ಪರಿಶೀಲನೆ ನಡೆಸಿ, ತಾತ್ಕಾಲಿಕ ಮತ್ತು ಶಾಶ್ವತ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ವಾಹನ ಸಂಚಾರಕ್ಕೆ ಅಡಚಣೆ
ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ ಮತ್ತೆ ಗುಡ್ಡ ಕುಸಿತ (ETV Bharat)
author img

By ETV Bharat Karnataka Team

Published : June 24, 2025 at 10:07 PM IST

1 Min Read

ನೆಲ್ಯಾಡಿ/ದಕ್ಷಿಣ ಕನ್ನಡ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಗುಡ್ಡ ಕುಸಿದು, ಹೆದ್ದಾರಿಯೆಲ್ಲ ಮಣ್ಣು ಹಾಗೂ ಮರಗಳಿಂದ ಮುಚ್ಚಿಹೋಗಿದೆ.

ಈ ಪ್ರದೇಶದಲ್ಲಿ ಚತುಷ್ಪಥ ಕಾಮಗಾರಿಯ ಹಿನ್ನೆಲೆಯಲ್ಲಿ ಅತ್ಯಂತ ಎತ್ತರದ ಗುಡ್ಡವನ್ನು ಯಾವುದೇ ಮುನ್ನೆಚ್ಚರಿಕೆಯ ಕ್ರಮವಿಲ್ಲದೇ ಕತ್ತರಿಸಲಾಗಿದೆ ಎಂಬ ಆರೋಪ ವ್ಯಕ್ತವಾಗಿದೆ. ಪರಿಣಾಮವಾಗಿ ಮಳೆ ಬರುತ್ತಿದ್ದಂತೆ ಮಣ್ಣು ಸಡಿಲಗೊಂಡು ಕುಸಿದು, ಹೆದ್ದಾರಿ ಬಂದ್ ಆಗುವ ಸ್ಥಿತಿ ನಿರ್ಮಾಣವಾಗಿದೆ.

AnotheDAr landslide in Mannagundi
ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ ಮತ್ತೆ ಗುಡ್ಡ ಕುಸಿತ: ವಾಹನ ಸಂಚಾರಕ್ಕೆ ಅಡಚಣೆ (ETV Bharat)

ದೊಡ್ಡ ವಾಹನಗಳ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದರೆ, ಕೆಲವು ಸಣ್ಣ ವಾಹನಗಳು ಕಿರಿದಾದ ಜಾಗದಲ್ಲಿ ಸಾಗುವ ಚಿತ್ರಣ ಕಂಡುಬಂದಿದೆ. ಈ ರಸ್ತೆ ಅವಲಂಬಿಸಿರುವ ಸಾವಿರಾರು ಪ್ರಯಾಣಿಕರು ಹಾಗೂ ವಾಹನ ಸವಾರರು ಆತಂಕದಲ್ಲಿದ್ದಾರೆ. ನೆಲ್ಯಾಡಿ ಹೊರಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ರಸ್ತೆಗೆ ಸಂಬಂಧಪಟ್ಟವರು ಮಣ್ಣನ್ನು ತೆರೆವುಗೊಳಿಸುವ ಕಾರ್ಯ ನಡೆಸುತ್ತಿದ್ದಾರೆ.

ಈ ಮಾರ್ಗದ ಮೇಲೆ ನಿರಂತರವಾಗಿ ಅನಾಹುತಗಳು ನಡೆಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೇ ಮೌನವಹಿಸಿದ್ದಾರೆ ಎಂಬ ಆರೋಪ ವ್ಯಾಪಕವಾಗಿದೆ. ಕಾಮಗಾರಿ ಗುಣಮಟ್ಟ, ಸುರಕ್ಷತಾ ಕ್ರಮಗಳ ಅವ್ಯವಸ್ಥೆ, ಹಾಗೂ ಗುತ್ತಿಗೆದಾರರ ನಿರ್ಲಕ್ಷ್ಯ ಕುರಿತು ಸಾರ್ವಜನಿಕ ಆಕ್ರೋಶ ತೀವ್ರಗೊಂಡಿದೆ.

ಇನ್ನಷ್ಟು ಅನಾಹುತಗಳನ್ನು ತಪ್ಪಿಸಲು ಸಂಬಂಧಪಟ್ಟ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಜಿಲ್ಲಾಧಿಕಾರಿಗಳೂ ಕೂಡ ತಕ್ಷಣವೇ ಸ್ಥಳ ಪರಿಶೀಲನೆ ನಡೆಸಿ, ತಾತ್ಕಾಲಿಕ ಮತ್ತು ಶಾಶ್ವತ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.

ಇದನ್ನು ಓದಿ:ಜೂನ್ ತಿಂಗಳಲ್ಲೇ ಭರ್ತಿಯಾಗುವತ್ತ ಕೆಆರ್​ಎಸ್​, ಕಬಿನಿ ಜಲಾಶಯಗಳು: ಅಣೆಕಟ್ಟು ತುಂಬಲು ಕೆಲವೇ ಅಡಿ ಮಾತ್ರ ಬಾಕಿ

ಮಳೆ ಆರ್ಭಟ: ಬೆಳಗಾವಿ, ಖಾನಾಪುರ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಡಿಸಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.