ಜ.22ರಂದು ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರವಹಿಸಲು ಪೊಲೀಸರಿಗೆ ಸೂಚನೆ: ಸಿಎಂ

author img

By ETV Bharat Karnataka Desk

Published : Jan 21, 2024, 6:37 AM IST

ಸಿಎಂ ಸಿದ್ದರಾಮಯ್ಯ

ಅಯೋಧ್ಯೆ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆಯ ದಿನ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನಾವಳಿಗಳು ನಡೆಯದಂತೆ ಎಚ್ಚರಿಕೆವಹಿಸಲು ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರು: ಅಯೋಧ್ಯೆಯ ರಾಮಮಂದಿರದ ಪ್ರತಿಷ್ಠಾಪನಾ ಕಾರ್ಯಕ್ರಮ ಜನವರಿ 22ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಶಾಂತಿ ಸುವ್ಯವಸ್ಥೆ ಕಾಪಾಡಬೇಕೆಂದು ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

  • ಅಯೋಧ್ಯೆಯ ರಾಮಮಂದಿರದ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಶಾಂತಿ-ಸುವ್ಯವಸ್ಥೆಯನ್ನು ಕಾಪಾಡಬೇಕೆಂದು ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ.

    ಈಗಾಗಲೇ ಕೆಲವು ಕಿಡಿಗೇಡಿಗಳು ಸುಳ್ಳು ಸುದ್ದಿಗಳನ್ನು ಹರಿಬಿಟ್ಟು ಅಮಾಯಕ ಜನರನ್ನು… pic.twitter.com/SaIahOHvuE

    — CM of Karnataka (@CMofKarnataka) January 20, 2024 " class="align-text-top noRightClick twitterSection" data=" ">

ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಪೋಸ್ಟ್​ ಮಾಡಿರುವ ಅವರು, ಈಗಾಗಲೇ ಕೆಲವು ಕಿಡಿಗೇಡಿಗಳು ಸುಳ್ಳು ಸುದ್ದಿಗಳನ್ನು ಹರಡಿ ಅಮಾಯಕರನ್ನು ಪ್ರಚೋದಿಸುವ ಕೆಲಸ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಇಂತಹ ಸುದ್ದಿಗಳು ಕಿವಿಗೆ ಬಿದ್ದ ತಕ್ಷಣ ಆತುರಕ್ಕೆ ಬಿದ್ದು ಆವೇಶಕ್ಕೊಳಗಾಗದೆ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಯಾವುದೇ ಕಾರಣಕ್ಕೂ ಯಾರೂ ಕಾನೂನು ಕೈಗೆತ್ತಿಕೊಳ್ಳುವ ಅಧಿಕ ಪ್ರಸಂಗತನ ಮಾಡಬಾರದು.

ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆದರೆ ಅದಕ್ಕೆ ಕಾಂಗ್ರೆಸ್ ಸರ್ಕಾರ ಹೊಣೆಯಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಹೇಳಿಕೆಯಲ್ಲಿ ಶಾಂತಿ ಕಾಪಾಡಿಕೊಂಡು ಬರಬೇಕೆಂಬ ಸದಾಶಯಕ್ಕಿಂತ ಹೆಚ್ಚಾಗಿ ಬೆದರಿಕೆ ಮತ್ತು ಪ್ರಚೋದನೆಯ ದನಿ ಇದೆ. ಸರ್ಕಾರಕ್ಕೆ ಅದರ ಕರ್ತವ್ಯದ ಅರಿವಿದೆ. ತಪ್ಪು ನಡೆದರೆ ಕಾನೂನು ಅದರ ಕೆಲಸ ಮಾಡುತ್ತದೆ.

ಬಿಜೆಪಿಯ ಕೆಲವು ಶಾಸಕರು, ಸಂಸದರು ಈಗಾಗಲೇ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿರುವುದನ್ನು ರಾಜ್ಯ ಸರ್ಕಾರ ಗಮನಿಸಿದೆ. ಇಂಥವರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷರು ಕಠಿಣ ಕ್ರಮಗಳನ್ನು ಕೈಗೊಂಡರೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸರ್ಕಾರದ ಕೆಲಸ ಸುಲಭವಾಗುತ್ತದೆ. ದೇವರು-ಧರ್ಮ-ಪೂಜೆ-ಆರಾಧನೆಗಳೆಲ್ಲ ವೈಯಕ್ತಿಕವಾದುದು. ಇದನ್ನು ವೈಯಕ್ತಿಕ ಮಟ್ಟದಲ್ಲಿಯೇ ಉಳಿಸಿಕೊಂಡರೆ ದೇವರು-ಧರ್ಮ ಎಲ್ಲರಿಗೂ ಗೌರವ ಮತ್ತು ಸಮಾಜಕ್ಕೂ ಕ್ಷೇಮ. ಇದು ಎಲ್ಲ ಧರ್ಮಾನುಯಾಯಿಗಳಿಗೂ ಅನ್ವಯಿಸುತ್ತದೆ ಸಿಎಂ ತಿಳಿಸಿದ್ದಾರೆ.

ಇದನ್ನೂ ಓದಿ: ಪ್ರಾಣ ಪ್ರತಿಷ್ಠಾಪನೆ ವೀಕ್ಷಿಸಲು ಜನವರಿ 22ರಂದು ರಜೆ ಘೋಷಿಸಿ: ವಿಜಯೇಂದ್ರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.