ETV Bharat / state

ಬಿ - ಖಾತಾ ಅವಧಿ 3 ತಿಂಗಳವರೆಗೆ ವಿಸ್ತರಣೆ; ಜಿಪಿಎ, ಅಗ್ರಿಮೆಂಟ್​ದಾರರಿಗೂ ಬಿ - ಖಾತಾ ವಿತರಣೆಗೆ ಚಿಂತನೆ: ಬೈರತಿ ಸುರೇಶ್ - B KHATA TO GPA AGREEMENT HOLDERS

ಸರ್ಕಾರ ನೀಡಿದ ಅವಕಾಶವನ್ನು ಬಳಸಿಕೊಂಡಿರುವ ಸುಮಾರು 10 ಲಕ್ಷ ಆಸ್ತಿಗಳಿಗೆ ಬಿ- ಖಾತಾ ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

B-Khata period extended to 3 months
ಜಿಪಿಎ, ಅಗ್ರೀಮೆಂಟ್ ದಾರರಿಗೂ ಬಿ -ಖಾತಾ ವಿತರಣೆಗೆ ಚಿಂತನೆ (ETV Bharat)
author img

By ETV Bharat Karnataka Team

Published : May 14, 2025 at 5:41 PM IST

2 Min Read

ಬೆಂಗಳೂರು: ರಾಜ್ಯದ ಮಹಾನಗರ ಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಅನಧಿಕೃತ ಕಟ್ಟಡ ಮತ್ತು ನಿವೇಶನಗಳಿಗೆ ಬಿ - ಖಾತಾ ನೀಡುವ ಅವಧಿಯನ್ನು ಮುಂದಿನ ಮೂರು ತಿಂಗಳವರೆಗೆ ವಿಸ್ತರಿಸಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್​ ತಿಳಿಸಿದ್ದಾರೆ.

ಸಚಿವರ ವಿವರಣೆ ಹೀಗಿದೆ: ಈ ಬಗ್ಗೆ ಬೆಂಗಳೂರಿನಲ್ಲಿ ಇಂದು ಪ್ರತಿಕ್ರಿಯೆ ನೀಡಿದ ಸಚಿವರು, ಮಹಾನಗರ ಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಂದರೆ, ಯಾವುದೇ ಪರವಾನಗಿ, ಭೂಪರಿವರ್ತನೆ ಮಾಡಿಸಿಕೊಳ್ಳದೇ, ನಕ್ಷೆ ಮಂಜೂರಾತಿ ಮಾಡಿಕೊಳ್ಳದೇ ಕಂದಾಯ ನಿವೇಶನಗಳಲ್ಲಿ ಕಟ್ಟಡಗಳನ್ನು ಕಟ್ಟಿಕೊಂಡಿದ್ದರೆ ಅಂತಹವರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಿ-ಖಾತ ನೀಡಿ ಸಕ್ರಮಗೊಳಿಸುವ ಮಹತ್ವದ ನಿರ್ಧಾರ ಕೈಗೊಂಡಿತ್ತು. ಇದರನ್ವಯ ನಾಗರಿಕರಿಗೆ ಒಂದು ಬಾರಿಯ ಅವಕಾಶವನ್ನು ನೀಡಲಾಗಿತ್ತು. ನಾಗರಿಕರು ನಿಗದಿತ ಶುಲ್ಕಗಳನ್ನು ಪಾವತಿ ಮಾಡಿ ತಮ್ಮ ಕಟ್ಟಡಗಳಿಗೆ ಬಿ-ಖಾತಾ ಪಡೆದುಕೊಳ್ಳಬಹುದಾಗಿದೆ. ಈ ಅವಕಾಶವನ್ನು ಮೇ ತಿಂಗಳ 10 ರ ವೇಳೆಗೆ ಬಿ-ಖಾತಾ ಪಡೆದುಕೊಳ್ಳಲು ಸಮಯ ನೀಡಲಾಗಿತ್ತು. ರಾಜ್ಯದ ಮಹಾನಗರಪಾಲಿಕೆಗಳು ಮತ್ತು ನಗರ ಪ್ರದೇಶಗಳಲ್ಲಿ 30 ಲಕ್ಷಕ್ಕೂ ಅಧಿಕ ಇಂತಹ ಅನಧಿಕೃತ ಕಟ್ಟಡಗಳು/ಮನೆಗಳು/ನಿವೇಶನಗಳಿವೆ ಎಂದು ಅಂದಾಜಿಸಲಾಗಿದೆ. ಸರ್ಕಾರ ಒಂದು ಬಾರಿಯ ಅವಕಾಶ ನೀಡಿದ ನಂತರ ನಾಗರಿಕರು ಉತ್ತಮ ರೀತಿಯಲ್ಲಿ ಪ್ರತಿಕ್ರಿಯೆ ವ್ಯಕ್ತಪಡಿಸಿ ತಮ್ಮ ಆಸ್ತಿಗಳಿಗೆ ಬಿ-ಖಾತಾ ಪಡೆದುಕೊಳ್ಳುತ್ತಿದ್ದಾರೆ ಎಂದು ಸಚಿವರು ತಿಳಿಸಿದರು.

2 ಲಕ್ಷ ಬಿ-ಖಾತಾ ವಿತರಣೆ : ಸರ್ಕಾರ ನೀಡಿದ ಅವಕಾಶವನ್ನು ಬಳಸಿಕೊಂಡಿರುವ ಸುಮಾರು 10 ಲಕ್ಷ ಆಸ್ತಿಗಳಿಗೆ ಬಿ- ಖಾತಾ ಕೋರಿ ಅರ್ಜಿ ಸಲ್ಲಿಸಲಾಗಿದ್ದು, ಈ ಪೈಕಿ 2 ಲಕ್ಷ ಆಸ್ತಿಗಳಿಗೆ ಬಿ-ಖಾತೆಗಳನ್ನು ವಿತರಿಸಲಾಗಿದೆ. ಉಳಿದ ಅರ್ಜಿಗಳ ಪರಿಶೀಲನೆ ನಡೆಯುತ್ತಿದ್ದು, ಹಂತ ಹಂತವಾಗಿ ಬಿ-ಖಾತಾ ವಿತರಿಸಲಾಗುತ್ತಿದೆ ಎಂದು ಅವರು ಹೇಳಿದರು.

ಇನ್ನೂ ಮೂರು ತಿಂಗಳು ವಿಸ್ತರಣೆ: ಸರ್ಕಾರದ ಈ ನಾಗರಿಕ ಸ್ನೇಹಿ ಸೌಲಭ್ಯವನ್ನು ಇನ್ನೂ ಹೆಚ್ಚಿನ ಜನರಿಗೆ ತಲುಪಿಸಬೇಕೆಂಬ ಉದ್ದೇಶದಿಂದ ಮಹಾನಗರಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬಿ-ಖಾತಾ ವಿತರಣೆ ಪ್ರಕ್ರಿಯೆಯನ್ನು ಇನ್ನೂ ಮೂರು ತಿಂಗಳ ಕಾಲ ವಿಸ್ತರಣೆ ಮಾಡಲು ನಿರ್ಧರಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಜಿಪಿಎ, ಕರಾರುದಾರರಿಗೂ ಸೌಲಭ್ಯ: ಇನ್ನು ನಿವೇಶನ ಅಥವಾ ಕಟ್ಟಡಗಳನ್ನು ಖರೀದಿಸಲು ಮುಂದಾಗಿ ಜಿಪಿಎ ಅಥವಾ ಅಗ್ರೀಮೆಂಟ್ ಮಾಡಿಕೊಂಡಿರುವ ನಾಗರಿಕರಿಗೂ ಬಿ-ಖಾತಾ ವಿತರಣೆಗೆ ಗಂಭೀರ ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.
ಈ ಸಂಬಂಧ ಸದ್ಯದಲ್ಲೇ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ. ಇದರಿಂದ ಜಿಪಿಎ ಅಥವಾ ಕರಾರುದಾರರಿಗೂ ಅನುಕೂಲವಾಗಲಿದೆ. ಎಲ್ಲ ಅರ್ಹ ನಾಗರಿಕರು ಮತ್ತು ಅನಧಿಕೃತ ನಿರ್ಮಾಣಗಳನ್ನು ಹೊಂದಿರುವವರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಬಿ-ಖಾತಾ ವಿತರಣೆಗೆ ಒಂದು ಬಾರಿಯ ಅವಕಾಶವನ್ನು ಕಲ್ಪಿಸಲಾಗಿದೆ. ಈ ಅವಧಿಯನ್ನು ಮುಂದಿನ ಮೂರು ತಿಂಗಳವರೆಗೆ ವಿಸ್ತರಣೆ ಮಾಡುವ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.