ETV Bharat / state

67 ವರ್ಷಗಳ ಬಳಿಕ ಬಳ್ಳಾರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ: ಡಿಸೆಂಬರ್​ನಲ್ಲಿ ಆಯೋಜನೆ - KANNADA SAHITYA SAMMELANA

88 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲ್ಲಿ ಡಿಸೆಂಬರ್ ತಿಂಗಳಲ್ಲಿ ಆಯೋಜಿಸಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಾ.ಮಹೇಶ್ ಜೋಶಿ ತಿಳಿಸಿದ್ದಾರೆ.

BALLARI KASAPA  ಕನ್ನಡ ಸಾಹಿತ್ಯ ಸಮ್ಮೇಳನ  ಮಹೇಶ್ ಜೋಶಿ
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಾ.ಮಹೇಶ್ ಜೋಶಿ (ETV Bharat)
author img

By ETV Bharat Karnataka Team

Published : April 15, 2025 at 2:37 PM IST

2 Min Read

ಬಳ್ಳಾರಿ: 67 ವರ್ಷಗಳ ಬಳಿಕ ಬಳ್ಳಾರಿಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಡಿಸೆಂಬರ್​​ನಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರಾದ ನಾಡೋಜ ಡಾ.ಮಹೇಶ್ ಜೋಶಿ ಹೇಳಿದ್ದಾರೆ.

ಬಳ್ಳಾರಿಯಲ್ಲಿಂದು ಮಾತನಾಡಿದ ಅವರು ಬಳ್ಳಾರಿ ಕನ್ನಡದ ಅಸ್ಮಿತೆ ತೋರಿದ ಜಿಲ್ಲೆಯಾಗಿದೆ. ಸಾಂಸ್ಕೃತಿಕವಾಗಿ ಬಳ್ಳಾರಿ ಮತ್ತು ವಿಜಯನಗರ ಒಂದೇ ಜಿಲ್ಲೆಯಾಗಿದೆ. ಈ ಜಿಲ್ಲೆಯಲ್ಲಿ ಈವರೆಗೆ ನಾಲ್ಕು ಬಾರಿ ಸಾಹಿತ್ಯ ಸಮ್ಮೇಳನ ನಡೆದಿದೆ. ಹೊಸಪೇಟೆಯಲ್ಲಿ 1920ರಲ್ಲಿ ಆರನೇ ಸಾಹಿತ್ಯ ಸಮ್ಮೇಳನ, 1926 ರಲ್ಲಿ 12ನೇ, 1947ರಲ್ಲಿ 30ನೇ ಮತ್ತು 1958ರಲ್ಲಿ 50ನೇ ಸಾಹಿತ್ಯ ಸಮ್ಮೇಳನ ಆಯೋಜನೆ ಮಾಡಲಾಗಿತ್ತು. ಇದೀಗ ಸುದೀರ್ಘ 67 ವರ್ಷದ ಬಳಿಕ 88ನೇ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲ್ಲಿ ಆಯೋಜನೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಮಹೇಶ್ ಜೋಶಿ (ETV Bharat)

ಇನ್ನೂ ಬಳ್ಳಾರಿಯಲ್ಲಿ ಕೋಟೆ, ಬಿಸಿಲು, ಗಣಿ, ಗಡಿ ಇರುವಂತಹದ್ದು. ಹೀಗಾಗಿ ಡಿಸೆಂಬರ್​ನಲ್ಲಿ ಹವಾಮಾನಕ್ಕೆ ಅನುಗುಣವಾಗಿ ಸಾಹಿತ್ಯ ಸಮ್ಮೇಳನ ಆಯೋಜನೆ ಮಾಡಲಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚಿಸಲಾಗಿದೆ. ಈ ಬಾರಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ವಿದೇಶದಲ್ಲಿನ ಕನ್ನಡಿಗರನ್ನು ಆಹ್ವಾನಿಸಲಾಗಿದ್ದು, ವಿಶೇಷವಾಗಿ ಬಳ್ಳಾರಿ ಮೊದಲ ಜಿಲ್ಲಾಧಿಕಾರಿ ಥಾಮಸ್ ಮನ್ರೋ ಅವರ ಕುಟುಂಬದವರನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ. ಯಾಕೆಂದರೆ ಕನ್ನಡದಲ್ಲಿ ಆಡಳಿತ ನಡೆಸಿದ್ದ ಹಿನ್ನೆಲೆ ಅವರ ಕುಟುಂಬದವರನ್ನು ಆಹ್ವಾನಿಸಿ ಗೌರವಿಸಲಾಗುವುದು ಎಂದರು.

ಈ ಸಮ್ಮೇಳನ ಅತ್ಯಂತ ಯಶಸ್ವಿ ಮತ್ತು ಮುಂದಿನ ಸಮ್ಮೇಳನಕ್ಕೆ ಮಾರ್ಗದರ್ಶಿಯಾಗಲಿ ಎಂಬ ಉದ್ದೇಶದಿಂದ ಅಚ್ಚುಕಟ್ಟಾಗಿ ಆಯೋಜಿಸಲು ತೀರ್ಮಾನಿಸಿದ್ದೇವೆ. ಕನ್ನಡಕ್ಕೆ ಧರ್ಮ, ಜಾತಿಯಿಲ್ಲ. ಹನುಮಂತ ಜನಿಸಿದ ನಾಡು, ಹನುಮಂತನಿಗೆ ಜಾತಿಯಿಲ್ಲ. ಎಲ್ಲ ಜಾತಿಯವರು ಪೂಜಿಸುತ್ತಾರೆ. ಎಲ್ಲರೂ ಸೇರಿ ಕನ್ನಡದ ತೇರು ಎಳೆಯೋಣ ಎಂದರು.

ಕರ್ನಾಟಕ ಸರ್ಕಾರ, ಜಿಲ್ಲಾಡಳಿತದ ಸಹಕಾರದಿಂದ ಈ ಸಮ್ಮೇಳನ ಹೊಸ ದಾಖಲೆಯಾಗಬೇಕು ಮತ್ತು ಜೊತೆಗೆ ಕನ್ನಡದ ಸಮಸ್ಯೆಗಳಿಗೆ ಪರಿಹಾರ ಸಿಗುವ ನಂಬಿಕೆ ಇದೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಎಸ್​ಪಿ ಶೋಭಾ ರಾಣಿ ಉಪಸ್ಥಿತರಿದ್ದರು.

ಕಳೆದ ಡಿಸೆಂಬರ್​ನಲ್ಲಿ ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆದ 87ನೇ ಸಾಹಿತ್ಯ ಸಮ್ಮೇಳನದಲ್ಲಿ 6 ಲಕ್ಷಕ್ಕೂ ಅಧಿಕ ಸಾಹಿತ್ಯಾಸಕ್ತರು ಭಾಗಿಯಾಗಿ ಯಶಸ್ವಿಗೊಳಿಸಿದ್ದರು. ಈ ಸಮ್ಮೇಳನಕ್ಕೆ ಬಿಡುಗಡೆಯಾಗಿದ್ದ 30 ಕೋಟಿ ಅನುದಾನದಲ್ಲಿ 29,65,07,226 ರೂ. ವೆಚ್ಚವಾಗಿದ್ದು, 34,92,774 ರೂ. ಹಣವನ್ನು ಸರ್ಕಾರಕ್ಕೆ ಮರಳಿಸಲಾಗಿದೆ.

ಇದನ್ನೂ ಓದಿ: 87ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ₹2.53 ಕೋಟಿ ಉಳಿತಾಯ: ಕನ್ನಡ ಭವನ ನಿರ್ಮಾಣಕ್ಕೆ ಬಳಕೆ

ಇದನ್ನೂ ಓದಿ: ಡಾ.ರಾಜ್​ಕುಮಾರ್ ಪುಣ್ಯಸ್ಮರಣೆ: ಅಭಿಮಾನಿಗಳ ಮನದಲ್ಲಿ ಅಣ್ಣಾವ್ರು ಎಂದಿಗೂ ಅಜರಾಮರ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.