ETV Bharat / state

ವಿಜಯಪುರದಲ್ಲಿ 300 ಕೋಟಿ ವೆಚ್ಚದ ಆಹಾರ ಸಂಸ್ಕರಣ ಘಟಕ: ಲುಲು ಗ್ರೂಪ್ ಜತೆ ಎಂ ಬಿ ಪಾಟೀಲ ಸಭೆ

author img

By ETV Bharat Karnataka Team

Published : Mar 2, 2024, 10:37 PM IST

ಲುಲು ಗ್ರೂಪ್ ರಫ್ತು ಆಧಾರಿತ ಸುಸಜ್ಜಿತ ಆಹಾರ ಸಂಸ್ಕರಣ ಘಟಕವನ್ನು ವಿಜಯಪುರದಲ್ಲಿ ಸ್ಥಾಪಿಸುತ್ತಿದ್ದು, ಸಚಿವ ಎಂ ಬಿ ಪಾಟೀಲ್ ಅವರು ಕಂಪನಿಯ ಹಿರಿಯ ಅಧಿಕಾರಿಗಳೊಂದಿಗೆ ಇಂದು ಸಭೆ ನಡೆಸಿದರು.

Minister MB Patil held a meeting with Lulu Group officials
ಲುಲು ಗ್ರೂಪ್ ಅಧಿಕಾರಿಗಳೊಂದಿಗೆ ಸಚಿವ ಎಂ ಬಿ ಪಾಟೀಲ ಸಭೆ

ಬೆಂಗಳೂರು: ಬಹುರಾಷ್ಟ್ರೀಯ ಕಂಪನಿ ಲುಲು ಗ್ರೂಪ್, ರಫ್ತು ಆಧಾರಿತ ಸುಸಜ್ಜಿತ ಆಹಾರ ಸಂಸ್ಕರಣ ಘಟಕವನ್ನು ವಿಜಯಪುರದಲ್ಲಿ ಸ್ಥಾಪಿಸುತ್ತಿದ್ದು, ಪೂರ್ವಭಾವಿಯಾಗಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರ ಜತೆ ಸಂಸ್ಥೆಯ ಹಿರಿಯ ಅಧಿಕಾರಿಗಳು ಇಂದು ಮಾತುಕತೆ ನಡೆಸಿದರು.

ಖನಿಜ ಭವನದಲ್ಲಿ ಇಂದು ನಡೆದ ಸಭೆಯಲ್ಲಿ ಲುಲು ಗ್ರೂಪ್​​​ನ ರಫ್ತು ವಿಭಾಗದ ಸಿಇಒ ನಜ್ಬುದ್ಧೀನ್, ನಿರ್ದೇಶಕ ಅನಂತ ಸೇರಿದಂತೆ ಅವರ ತಂಡ‌ ಭಾಗವಹಿಸಿತ್ತು. ಲುಲು ಗ್ರೂಪ್‌ನ‌ ತಂಡ ಸದ್ಯದಲ್ಲೇ ವಿಜಯಪುರಕ್ಕೆ ಭೇಟಿ ನೀಡಲಿದ್ದು, ಆಹಾರ ಸಂಸ್ಕರಣಾ ಘಟಕವನ್ನು ಎಲ್ಲಿ ಸ್ಥಾಪಿಸಿದರೆ ಸೂಕ್ತ ಎಂಬುದನ್ನು ಖುದ್ದು ಸ್ಥಳ ಪರಿಶೀಲಿಸಲಿದೆ ಎಂದು ಸಚಿವರು ಇದೇ ವೇಳೆ ತಿಳಿಸಿದರು.

ಸ್ವಿಟ್ಜರ್ಲೆಂಡ್‌‌ ನ ದಾವೋಸ್​ನಲ್ಲಿ‌ ಇತ್ತೀಚೆಗೆ ನಡೆದ‌ ವಿಶ್ವ ಆರ್ಥಿಕ ಸಮಾವೇಶದಲ್ಲಿ ವಿಜಯಪುರದಲ್ಲಿ 300 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತ ಆಹಾರ ಸಂಸ್ಕರಣಾ ಘಟಕ ಸ್ಥಾಪನೆಗೆ ಲುಲು ಗ್ರೂಪ್ ಆಸಕ್ತಿ ತೋರಿ, ಒಪ್ಪಂದಕ್ಕೂ ಸಹಿ ಹಾಕಿತ್ತು. ಅದರ ಮುಂದುವರಿದ ಭಾಗವಾಗಿ ಇವತ್ತಿನ ಈ ಸಭೆ ನಡೆದಿದ್ದು, ಸರ್ಕಾರದ ಕಡೆಯಿಂದ ಪೂರ್ಣ ಸಹಕಾರ ನೀಡಲಾಗುವುದು ಎಂದು ಸಚಿವರು ತಿಳಿಸಿದರು.

ದೇಶಿ ಮತ್ತು ರಫ್ತು ಮಾರುಕಟ್ಟೆಗಳಿಗೆ ಪೂರೈಸಲು ಸ್ಥಳೀಯ ಆಹಾರ ಉತ್ಪನ್ನಗಳನ್ನು ಖರೀದಿಸಿ ಅವುಗಳ ಶ್ರೇಣೀಕರಣ, ವಿಂಗಡಣೆ ಮತ್ತು ಪ್ಯಾಕೇಜಿಂಗ್‌ ಉದ್ದೇಶಕ್ಕೂ ಈ ಘಟಕ ನೆರವಾಗಲಿದೆ ಎಂದು ಅವರು ವಿವರಿಸಿದರು. ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ ಎಸ್ ಸೆಲ್ವಕುಮಾರ್ ಸೇರಿದಂತೆ ಇತರರು ಸಭೆಯಲ್ಲಿ ಇದ್ದರು.

ಇದನ್ನೂಓದಿ:ಕೃಷಿ ಇಲಾಖೆಯಲ್ಲಿ 750 ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ಚಲುವರಾಯಸ್ವಾಮಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.