ETV Bharat / state

ಹುಬ್ಬಳ್ಳಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನ ಬರ್ಬರ ಕೊಲೆ - MURDER IN HUBBALLI

author img

By ETV Bharat Karnataka Team

Published : Mar 23, 2024, 12:38 PM IST

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ನೆತ್ತರು ಹರಿದಿದೆ. ಕ್ಷುಲ್ಲಕ ಕಾರಣಕ್ಕೆ ಯುವಕನ ಬರ್ಬರ ಹತ್ಯೆವಾಗಿದೆ.

MURDER OF YOUNG MAN  TRIVIAL REASON  HUBLI
ಹುಬ್ಬಳ್ಳಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನ ಬರ್ಬರ ಹತ್ಯೆ

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ನೆತ್ತರು ಹರಿದಿದೆ. ಕ್ಷುಲ್ಲಕ ವಿಚಾರಕ್ಕೆ ಯುವಕನೊಬ್ಬನಿಗೆ ಚಾಕು ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗೇರಿಯ ನಾಗಶೆಟ್ಟಿಕೊಪ್ಪದಲ್ಲಿ ನಡೆದಿದೆ.‌ ಮೃತರನ್ನು ನಾಗಶೆಟ್ಟಿಕೊಪ್ಪದ ನಿವಾಸಿ ಪ್ರಕಾಶ ಮಾನೆ ಎಂದು ಗುರುತಿಸಲಾಗಿದೆ.

ಪ್ರಕಾಶಗೆ ಬೆಂಗೇರಿಯ ಹನುಮಂತ ದೇವಸ್ಥಾನದ ಬಳಿ ಸ್ನೇಹಿತರಾದ ಕಿರಣ ಬಡಿಗೇರ ಹಾಗೂ ಸಂಗಮೇಶ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಪ್ರಕಾಶನಿಗೆ ಚಾಕು ಇರಿದ ತಕ್ಷಣ ಸ್ಥಳೀಯರು ಆತನನ್ನು ನಗರದ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರು. ಆದರೆ ಅತಿಯಾದ ರಕ್ತಸ್ರಾವ ಆಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೇ ಪ್ರಕಾಶ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ಘೋಷಿಸಿದ್ದಾರೆ.

ಕಿಮ್ಸ್ ಆಸ್ಪತ್ರೆಯ ಮುಂಭಾಗದಲ್ಲಿ ಕುಟುಂಬಸ್ಥರು ಹಾಗೂ ಸ್ನೇಹಿತರ ಆಕ್ರಂದನ ಮುಗಿಲು ಮುಟ್ಟಿದೆ. ಈ ಘಟನೆಗೆ ಕಾರಣವೇನು ಎಂಬುದು ತಿಳಿದುಬಂದಿಲ್ಲ. ಈಗಾಗಲೇ ಸ್ಥಳಕ್ಕೆ ಕೇಶ್ವಾಪುರ ಪೊಲೀಸ್ ಠಾಣೆಯ ಸಿಬ್ಬಂದಿ ಆಗಮಿಸಿ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ. ಇಬ್ಬರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಓದಿ: ರಷ್ಯಾದಲ್ಲಿ ಉಗ್ರರ ಅಟ್ಟಹಾಸಕ್ಕೆ 60 ಜನ ಬಲಿ, 145 ಮಂದಿಗೆ ಗಾಯ; ದಾಳಿ ಹೊಣೆ ಹೊತ್ತ ಐಸಿಸ್​ - TERRORIST ATTACK IN RUSSIA

ETV Bharat Logo

Copyright © 2024 Ushodaya Enterprises Pvt. Ltd., All Rights Reserved.