ETV Bharat / state

ಬೆಳಗಾವಿ: ಹಾಡಹಗಲೇ ಸ್ಕ್ರೂ ಡ್ರೈವರ್​ನಿಂದ ಚುಚ್ಚಿ ಯುವಕನ ಭೀಕರ ಕೊಲೆ - Young man murder

author img

By ETV Bharat Karnataka Team

Published : May 16, 2024, 5:47 PM IST

ಬೆಳಗಾವಿಯಲ್ಲಿ ದುಷ್ಕರ್ಮಿಯೊಬ್ಬ ಯುವಕನೋರ್ವನನ್ನು ಸ್ಕ್ರೂ ಡ್ರೈವರ್​ನಿಂದ ಚುಚ್ಚಿ ಕೊಲೆ ಮಾಡಿದ್ದಾನೆ.

YOUNG MAN MURDER
ಮಹಾಂತೇಶ ನಗರದ ಬ್ರಿಡ್ಜ್ ಬಳಿ ಯುವಕನ ಕೊಲೆ (ETV Bharat)

ಬೆಳಗಾವಿ: ಹಾಡಹಗಲೇ ಸ್ಕ್ರೂ ಡ್ರೈವರ್​ನಿಂದ ಚುಚ್ಚಿ ಯುವಕನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿಯ ಮಹಾಂತೇಶ ನಗರದ ಬ್ರಿಡ್ಜ್ ಬಳಿ ನಡೆದಿದೆ. ಗಾಂಧಿ ನಗರ ನಿವಾಸಿ ಇಬ್ರಾಹಿಂ ಗೌಸ್ (22) ಮೃತ ಯುವಕ. ಬೈಕ್​ನಲ್ಲಿ ಇಬ್ರಾಹಿಂ ಹೋಗುತ್ತಿದ್ದಾಗ ದುಷ್ಕರ್ಮಿಯೊಬ್ಬ ಸ್ಕ್ರೂ ಡ್ರೈವರ್​ನಿಂದ ಚುಚ್ಚಿ ಹತ್ಯೆ ಮಾಡಿದ್ದಾನೆ.

ಘಟನೆ ಬೆಳಗಾವಿಯಲ್ಲಿ ಇಂದು ಮಧ್ಯಾಹ್ನ ನಡೆದಿದೆ. ತೀವ್ರವಾಗಿ ಗಾಯಗೊಂಡಿದ್ದ ಇಬ್ರಾಹಿಂನನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಇಬ್ರಾಹಿಂ ಕೊನೆಯುಸಿರೆಳೆದಿದ್ದಾನೆ. ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ವರು ಬಾಲಕರು ನೀರಲ್ಲಿ ಮುಳುಗಿ ಸಾವು - Four Children Drown

ETV Bharat Logo

Copyright © 2024 Ushodaya Enterprises Pvt. Ltd., All Rights Reserved.